ಸೆ.27ರಂದು ಸ್ವಯಂ ಪ್ರೇರಿತ ತರಗತಿ ಬಹಿಷ್ಕಾರಕ್ಕೆ ಕರೆಕೊಟ್ಟ AIDSO

Date:

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಷಯದಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವ ಹಿನ್ನಲೆ, ಸಾವಿರಾರು ಪದವಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಈ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ, ಸರ್ಕಾರ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡದಿರುವುದನ್ನು ಖಂಡಿಸಿ AIDSO ಕರ್ನಾಟಕ ರಾಜ್ಯ ಸಮಿತಿಯು ಸೆ.27ರಂದು ರಾಜ್ಯದ ಎಲ್ಲಾ ಸರ್ಕಾರಿ ಪದವಿ ವಿದ್ಯಾರ್ಥಿಗಳಿಗೆ ಸ್ವಯಂಪ್ರೇರಿತ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದೆ.

- Advertisement -

ಕಳೆದ ಎರಡು ತಿಂಗಳಿಂದ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ಪಾಠ ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ. ಇದೇ ಅವಧಿಯಲ್ಲಿ ಖಾಸಗಿ ಕಾಲೇಜುಗಳಲ್ಲಿ ಪಠ್ಯಕ್ರಮ, ಘಟಕ ಪರೀಕ್ಷೆಗಳು ಮುಗಿದು, ಸೆಮಿಸ್ಟರ್ ಪರೀಕ್ಷೆಗಳಿಗೆ ಸಿದ್ಧತೆ ನಡೆಯುತ್ತಿದೆ. ಆದರೆ, ಬಡ ಮತ್ತು ಗ್ರಾಮೀಣ ಹಿನ್ನಲೆಯ ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ಎಐಡಿಎಸ್‌ಓ ರಾಜ್ಯ ಸಮಿತಿಯು, ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ಪರಿಗಣಿಸುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಯುಜಿಸಿ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಲ್ಲ. ಸರ್ಕಾರ ಬಯಸಿದರೆ ಈ ಬಿಕ್ಕಟ್ಟನ್ನು ತಕ್ಷಣವೇ ಪರಿಹರಿಸಬಹುದು. ಆದರೆ, ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು AIDSO ಭಾವಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಬಂಗ್ಲೆಗುಡ್ಡೆ ಪ್ರದೇಶದಲ್ಲಿ ವ್ಯಾಪಕ ಶೋಧಕ್ಕೆ ಎಸ್‌ಐಟಿ ಮತ್ತೆ ಸಿದ್ಧತೆ!

ಕಳೆದ ಕೆಲವು ವಾರಗಳಿಂದ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 5,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಸರ್ಕಾರದ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ಹೀಗಾಗಿ, ತಮ್ಮ ಶಿಕ್ಷಣದ ಹಕ್ಕನ್ನು ರಕ್ಷಿಸಿಕೊಳ್ಳಲು ವಿದ್ಯಾರ್ಥಿಗಳು ಈ ಹೋರಾಟವನ್ನು ತೀವ್ರಗೊಳಿಸಿ, ತರಗತಿ ಬಹಿಷ್ಕಾರಕ್ಕೆ ಕರೆ ನೀಡುತ್ತಿದ್ದಾರೆ. ತಮ್ಮ ಭವಿಷ್ಯದ ಬಗ್ಗೆ ಸರ್ಕಾರಕ್ಕೆ ಒಂದು ಸ್ಪಷ್ಟ ಸಂದೇಶ ಕಳುಹಿಸಲು ಸಜ್ಜಾಗಿದ್ದಾರೆ. ಖಾಸಗಿ – ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳ ನಡುವಿನ ಅಸಮಾನತೆಗೆ ಕಾರಣವಾಗಿರುವ ರಾಜ್ಯ ಸರ್ಕಾರವನ್ನು AIDSO ರಾಜ್ಯ ಸಮಿತಿ ಖಂಡಿಸುತ್ತದೆ ಎಂದು AIDSO ರಾಜ್ಯ ಕಾರ್ಯದರ್ಶಿ ಅಜಯ್‌ ಕಾಮತ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...