ಬೆಂಗಳೂರು | AISA ವಿದ್ಯಾರ್ಥಿ ನಾಯಕರ ಮೇಲೆ ಎಬಿವಿಪಿ ಕಾರ್ಯಕರ್ತರಿಂದ ಭೀಕರ ಹಲ್ಲೆ

Date:

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಪ್ರೇರಿತ ಹಿಂಸಾಚಾರದ ಘಟನೆಯೊಂದು ವರದಿಯಾಗಿದ್ದು, ‘ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್’ (AISA) ವಿದ್ಯಾರ್ಥಿ ಸಂಘಟನೆಯ ಸದಸ್ಯರೊಬ್ಬರ ಮೇಲೆ ಭೀಕರ ಹಲ್ಲೆ ನಡೆದಿದೆ. ಜುಲೈ 28ರ ರಾತ್ರಿ ಈ ಘಟನೆ ನಡೆದಿದ್ದು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಘಟನೆಯ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂದು AISA ಗಂಭೀರವಾಗಿ ಆರೋಪಿಸಿದೆ.

- Advertisement -

ಇತ್ತೀಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಶಿಕ್ಷಣ ನೀತಿಯನ್ನು ವಿರೋಧಿಸಿ ನಡೆದ ದೇಶವ್ಯಾಪಿ ವಿದ್ಯಾರ್ಥಿ-ಯುವಜನ ಪ್ರತಿಭಟನೆಯಲ್ಲಿ ಸಂತ್ರಸ್ತ ವಿದ್ಯಾರ್ಥಿ ಸಕ್ರಿಯವಾಗಿ ಭಾಗವಹಿಸಿದ್ದರು. ಜುಲೈ 28ರ ರಾತ್ರಿ ಸಂತ್ರಸ್ತನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು, “ಮೋದಿ ರಾಜೀನಾಮೆ ಕೇಳಲು ನಿನಗೆಷ್ಟು ಧೈರ್ಯ?” ಎಂದು ಬೆದರಿಕೆ ಹಾಕಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದನ್ನೂ ಓದಿ: ಮೋದಿ-ಶಾ ವಿರುದ್ಧ ಘೋಷಣೆ: ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್‌; ಸಂಚು ಯಾರದ್ದು?

ದಾಳಿಯಿಂದಾಗಿ ವಿದ್ಯಾರ್ಥಿಯ ಕಾಲಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನಗರದ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದೆ.

ಘಟನೆಯನ್ನು ತೀವ್ರವಾಗಿ ಖಂಡಿಸಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ AISA, “ದೇಶದಾದ್ಯಂತ ವಿಶ್ವವಿದ್ಯಾಲಯಗಳ ಆವರಣದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ಮತ್ತು ವಿರೋಧದ ಧ್ವನಿಗಳನ್ನು ಹತೋಟಿ ಮಾಡಲು ABVP ಯತ್ನಿಸುತ್ತಿದೆ. ಅಜೀಮ್ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ನಡೆದ ದಾಳಿ ಮತ್ತು ಧ್ವಂಸ ಕೃತ್ಯಗಳೂ ಇದೇ ಸರಣಿಯ ಭಾಗವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಅಲ್ಲದೆ, “ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ಸಹ ವಿರೋಧದ ಧ್ವನಿಗಳನ್ನು ಹತೋಟಿ ಮಾಡುವ ಪ್ರವೃತ್ತಿ ಮುಂದುವರಿದಿದೆ. ಫ್ರೀಡಂ ಪಾರ್ಕ್ ಪ್ರತಿಭಟನೆಯಲ್ಲಿ ನಿರ್ದಿಷ್ಟ ಪೋಸ್ಟರ್ ಹಿಡಿದಿದ್ದಕ್ಕಾಗಿ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಈಗ ನೇರವಾಗಿ ವಿದ್ಯಾರ್ಥಿಯ ಮೇಲೆಯೇ ದಾಳಿ ನಡೆದಿದೆ” ಎಂದು ಸಂಘಟನೆ ದೂರಿದೆ.

ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಗೃಹ ಇಲಾಖೆ ಹಾಗೂ ಬೆಂಗಳೂರು ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ತನಿಖೆ ನಡೆಸಬೇಕು ಎಂದು AISA ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2027ನೇ ಸಾಲಿನ...

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಅ.29) ನಡೆದ ಕರ್ನಾಟಕ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳ: ನವೆಂಬರ್ 1ರಿಂದಲೇ ಜಾರಿ

ರಾಜ್ಯದ ಹಾಲು ಗ್ರಾಹಕರಿಗೆ ರಾಜ್ಯ ಸರ್ಕಾರವು ಬೆಲೆ ಏರಿಕೆಯ ಹೊರ ಹೇರಿದೆ....