ಸರ್ಕಾರಿ ಕೋಟಾದ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಶುಲ್ಕ ಏರಿಕೆ ಹಿಂಪಡೆಯಿರಿ: ಶಿಕ್ಷಣ ಉಳಿಸಿ ಸಮಿತಿ ಆಗ್ರಹ

Date:

2026-27ರ ಸಾಲಿಗೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸರ್ಕಾರಿ ಕೋಟದ ವಿದ್ಯಾರ್ಥಿಗಳ ಶುಲ್ಕವನ್ನು ಶೇಕಡ 7.5ರಷ್ಟು ಹೆಚ್ಚು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಸಮಿತಿಯು (AISEC) ಖಂಡಿಸಿದೆ.

- Advertisement -

“ರಾಜ್ಯ ಸರ್ಕಾರವು ಖಾಸಗಿ ಆಡಳಿತ ಮಂಡಳಿಯವರ ಮನವಿಯ ಮೇರೆಗೆ ಶುಲ್ಕ ಏರಿಕೆಗೆ ನಿರ್ಧರಿಸಿದೆ. ವಿದ್ಯಾರ್ಥಿಗಳ ಹಾಗೂ ಪೋಷಕರ ಯಾವುದೇ ಅಹವಾಲುಗಳನ್ನು ಆಲಿಸದೆ ಶಿಕ್ಷಣದ ಗುಣಮಟ್ಟ ಮತ್ತು ಉದ್ಯೋಗ ಖಾತ್ರಿ ಅಂತಹ ಕ್ರಮಗಳ ಕಡೆಗೆ ಗಮನ ಕೊಡದೆ ಶುಲ್ಕ ಏರಿಸುವ ಈ ನಿರ್ಧಾರ ಅತ್ಯಂತ ಖಂಡನೀಯ” ಎಂದು ಸಮಿತಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಶಾಲಾ ಶುಲ್ಕ ಹೆಚ್ಚಳ; ಬಿಸಿತುಪ್ಪವಾದ ಗುಣಮಟ್ಟದ ಶಿಕ್ಷಣ

“ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕೂಡ ಶೇಕಡ 5.0 ಶುಲ್ಕವನ್ನು ಏರಿಸಿ, ಆದೇಶ ಹೊರಡಿಸಿತ್ತು ಈ ರಾಜ್ಯ ಸರ್ಕಾರ. ಈ ಶುಲ್ಕದೊಂದಿಗೆ ಹೆಚ್ಚುವರಿಯಾಗಿ ವಿಶ್ವವಿದ್ಯಾಲಯದ ಶುಲ್ಕ ಮತ್ತು 20,000 ರೂಪಾಯಿವರೆಗಿನ ಹೆಚ್ಚಿನ ಶುಲ್ಕವನ್ನು ಸಂಗ್ರಹಿಸಲು ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡಿರುವುದು ಸಹ ಹೆಚ್ಚಿನ ಹೊರೆಯಾಗುತ್ತದೆ” ಎಂದು AISEC ತಿಳಿಸಿದೆ.

“ಈಗಾಗಲೇ ಬೆಲೆ ಏರಿಕೆ ಹಣದುಬ್ಬರದಿಂದ ಕಂಗಾಲಾಗಿರುವ ಪೋಷಕರಿಗೆ ಈ ಶುಲ್ಕ ಏರಿಕೆಯೂ ಮತ್ತಷ್ಟು ಹೊರೆಯಾಗಲಿದೆ. ಪ್ರತಿ ವರ್ಷ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಒತ್ತಡಕ್ಕೆ ಮಣಿದು ಸರ್ಕಾರ ಏಕಾಏಕಿ ಶುಲ್ಕ ಏರಿಕೆ ಮಾಡುತ್ತಿರುವುದು ಅತ್ಯಂತ ಖಂಡನಾರ್ಹ” ಎಂದಿದೆ.

“ಈ ಎಲ್ಲ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಜವಾಬ್ದಾರಿಯುತ ಸರ್ಕಾರ ಈ ಕೂಡಲೇ ಶೇಕಡ 7.5 ರಷ್ಟು ಶುಲ್ಕ ಏರಿಕೆಯನ್ನು ಹಿಂತೆಗೆದುಕೊಂಡು ವಿದ್ಯಾರ್ಥಿ, ಪೋಷಕರ ಪರವಾದ ನಿಲುವನ್ನು ತೆಗೆದುಕೊಳ್ಳಬೇಕು” ಎಂದು AISEC ರಾಜ್ಯ ಸಮಿತಿ ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

20 ತಿಂಗಳಲ್ಲಿ 20 ಮುಖ್ಯ ಚುನಾವಣಾಧಿಕಾರಿಗಳ ವರ್ಗಾವಣೆ: ಗ್ಯಾನೇಶ್ ಕುಮಾರ್ ದಾಖಲೆ!

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಆಡಳಿತದಲ್ಲಿ‌ ಚುನಾವಣಾ ಆಯೋಗವು ಭಾರೀ...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಕಲಬುರಗಿ | ಸಿಇಸಿ ಜ್ಞಾನೇಶಕುಮಾರ ವಜಾಗೆ ಆಗ್ರಹಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ...