ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವದಿಂದ ಕೈಬಿಡಲು ಅಕ್ಕಯ್ ಪದ್ಮಶಾಲಿ ಮನವಿ

Date:

Advertisements

ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ನಿನ್ನೆಯಷ್ಟೇ ಸದಸ್ಯರಾಗಿ ಆಯ್ಕೆಯಾಗಿದ್ದ ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಅವರು, ಸದಸ್ಯತ್ವದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪತ್ರದಲ್ಲಿ, “ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನಾಗಿ ನನ್ನನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ತಮಗೆ ಹಾಗೂ ತಮ್ಮ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ. ಆದರೆ ನನ್ನ ಸದಸ್ಯತ್ವದಿಂದ ಕೈಬಿಡಬೇಕಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿ ಅದಕ್ಕೆ ಕಾರಣವನ್ನೂ ಕೂಡ ಉಲ್ಲೇಖಿಸಿದ್ದಾರೆ.

“ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯದ ವಿಚಾರದ ನನ್ನ ಹೋರಾಟವು ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಸಂಪೂರ್ಣ ಶ್ರೇಯೋಭಿವೃದ್ಧಿಗಾಗಿ ಹಾಗೂ ಸಾಮಾಜಿಕ ಬಹಿಷ್ಕಾರದ ವಿರುದ್ಧ ನನ್ನ ಹೋರಾಟ ಮುಂದುವರಿಸಲಿದ್ದೇನೆ” ಎಂದು ಅಕ್ಕಯ್ ಪದ್ಮಶಾಲಿ ತಿಳಿಸಿದ್ದಾರೆ.

Advertisements

“ತಾವುಗಳು ಇದರ ಬಗ್ಗೆ ಗಮನಹರಿಸಿ ನನ್ನನ್ನು ಮುಂಬರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಅಥವಾ ರಾಜ್ಯಸಭೆಯ ಸದಸ್ಯರನ್ನಾಗಿಸಿ, ಶಾಸನಸಭೆಯ ಭಾಗವಾಗಿ ನಮ್ಮ ಸಮುದಾಯದ ರಾಜಕೀಯ ಪ್ರಾತಿನಿಧ್ಯತೆಯನ್ನು ‘ಸರ್ವ ಜನಾಂಗದ ಶಾಂತಿಯ ತೋಟದ’ ನಾಡಿನಲ್ಲಿ ಸಾಕ್ಷಿಯಾಗಬೇಕಾಗಿರುವ ವಾತಾವರಣ ನಿರ್ಮಾಣವಾಗಿದೆ. ಇದರ ಬಗ್ಗೆ ತಾವುಗಳು ವಿಶೇಷ ಕಾಳಜಿವಹಿಸಿ ಕ್ರಮವಹಿಸಬೇಕಾಗಿ ವಿನಂತಿಸುತ್ತಿದ್ದೇನೆ” ಎಂದು ಕೂಡ ಇದೇ ಪತ್ರದಲ್ಲಿ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿ ಮಾಡುವ ಕೆಲವೇ ಗಂಟೆಗಳ ಮುನ್ನ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಶನಿವಾರ(ಮಾ.16) ಆದೇಶ ಹೊರಡಿಸಿತ್ತು.

ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ಹಿರಿಯ ಸಾಹಿತಿ ಎನ್ ಎನ್ ಮುಕುಂದರಾಜ್ ಅವರನ್ನು  ಅಧ್ಯಕ್ಷರಾಗಿ ನೇಮಕಗೊಳಿಸಿದರೆ, ಅಕ್ಕಯ್ ಪದ್ಮಶಾಲಿ ಅವರನ್ನೂ ಒಳಗೊಂಡಂತೆ, ಸಿದ್ದಪ್ಪ ಹೊನಕಲ್, ಅರ್ಜುನ ಗೋಳಸಂಗಿ, ಡಾ. ಹೆಚ್. ಜಯಪ್ರಕಾಶ್ ಶೆಟ್ಟಿ, ಡಾ. ಚಂದ್ರಕಲಾ ಬಿದರಿ, ಡಾ. ಚಿಲಕ್ ರಾಗಿ, ಡಾ. ಗಣೇಶ್, ಶ್ರೀಮತಿ ಸುಮಾ ಸತೀಶ್, ಹೆಚ್ ಆರ್ ಸುಜಾತ, ಶ್ರೀಮತಿ ಪಿ ಚಂದ್ರಿಕಾ, ಪ್ರಕಾಶ್ ರಾಜ್ ಮೇಹು, ಮಲ್ಲಿಕಾರ್ಜುನ ಮಾನ್ಪಡೆ, ಅಜಮೀರ್ ನಂದಾಪುರ, ಚಂದ್ರಕಿರಣ, ಮಹದೇವ ಬಸರಕೋಡ ಅವರನ್ನು ಸದಸ್ಯರನ್ನಾಗಿ ನೇಮಕಗೊಳಿಸಿ, ರಾಜ್ಯ ಸರ್ಕಾರ ಶನಿವಾರ ಆದೇಶಿಸಿತ್ತು.

ಇದನ್ನು ಓದಿದ್ದೀರಾ? ಅಕಾಡೆಮಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷ, ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶ

ಇದೇ ವೇಳೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯು ಎಚ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಚನ್ನಪ್ಪ ಕಟ್ಟಿ ಸೇರಿದಂತೆ ಒಟ್ಟು 19 ಪ್ರಾಧಿಕಾರ, ಅಕಾಡೆಮಿಗಳಿಗೆ ಅಧ್ಯಕ್ಷ ಸದಸ್ಯರನ್ನು ರಾಜ್ಯ ಸರ್ಕಾರ ನೇಮಕಗೊಳಿಸಿ, ಆದೇಶ ಹೊರಡಿಸಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X