ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೂ ಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರು ಬದಲಿಸಿ, ‘ವಿಬಿ ಜಿ ರಾಮ್‌ ಜಿ’ ಕಾಯ್ದೆ ರೂಪಿಸಿರುವ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಸೆಡ್ಡು ಹೊಡೆದಿದೆ. ಕರ್ನಾಟಕದಲ್ಲಿರುವ ಎಲ್ಲ ಗ್ರಾಮ ಪಂಚಾಯತಿಗಳಿಗೂ ಮಹಾತ್ಮ ಗಾಂಧಿ ಹೆಸರು ಇಡುವುದಾಗಿ ಘೋಷಿಸಿದ್ದಾರೆ.

- Advertisement -

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕಾಂಗ್ರೆಸ್‌ ನಡೆಸಿದ ‘ಮನರೇಗಾ ಬಚಾವೋ’ ಆಂದೋಲನದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. “ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜಿ ರಾಮ್ ಜಿ’ ಜಾರಿ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

“ಮನರೇಗಾ ಕಾಯ್ದೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ.  ಆದರೆ, ಇಲ್ಲಿ ದಶರಥ ರಾಮ ಇಲ್ಲ ಕೌಶಲ್ಯ ರಾಮ ಇಲ್ಲ ಸೀತಾ ರಾಮ ಸಹ ಇಲ್ಲ.  ಈ ಕಾಯ್ದೆಯಲ್ಲಿ ರಾಮ ಇಲ್ಲ.  RSS ಮಾರ್ಗದರ್ಶನದಂತೆ ಬಡವರ ಕಾರ್ಯಕ್ರಮಗಳನ್ನು ಬಿಜೆಪಿಯವರು ರದ್ದು ಮಾಡಿದ್ದಾರೆ. ಬಡವರು ದಲಿತರು, ರೈತರ ಬಗ್ಗೆ ಚಿಂತಿಸುವುದು ಕಾಂಗ್ರೆಸ್ ಮಾತ್ರ.  ಬಡವರ ಬಗ್ಗೆ ಮಾತಾಡುವುದು ಕಾಂಗ್ರೆಸ್ ಮಾತ್ರ” ಎಂದಿದ್ದಾರೆ.

“ಆರ್ ಎಸ್ ಎಸ್ ನವರಿಗೆ ಬಡವರು ಮುಖ್ಯವಾಹಿನಿಗೆ ಬರುವುದು ಬೇಕಾಗಿಲ್ಲ. ಬಡವರು ಬಡವರಾಗಿಯೇ ಉಳಿದು ಸದಾಕಾಲ ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ ಸಿದ್ಧಾಂತ. ಬಡವರ ವಿರೋಧಿ ಬಿಜೆಪಿ ಬಡವರ ಪರವಾದ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ 

ಶ್ರೀ ಹಾಸನಾಂಬೆ ದೇವಿ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ...

ಕಬ್ಬಿಗೆ ಬೆಂಬಲ ಬೆಲೆ: ಬೆಂಗಳೂರಿನಲ್ಲಿ ಕೇಂದ್ರ ತಜ್ಞರ ಸಮಿತಿಗೆ ಕಬ್ಬು ಬೆಳೆಗಾರರ ಅಹವಾಲು

ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ...

2011ರ ‘ನೇಮಕಾತಿ ರಕ್ಷಣೆ ಕಾಯ್ದೆ’ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; 362 ಕೆಎಎಸ್‌ ಅಧಿಕಾರಿಗಳ ಉದ್ಯೋಗಕ್ಕೆ ಕುತ್ತು!

2011ನೇ ಸಾಲಿನ ‘ಕರ್ನಾಟಕ ಆಡಳಿತ ಸೇವೆ’ (ಕೆಎಎಸ್) ನೇಮಕಾತಿ ಪ್ರಕ್ರಿಯೆಯನ್ನು ಊರ್ಜಿತಗೊಳಿಸಲು...

KPSC ಹಗರಣ | SIT ರಚನೆ ವಿಳಂಬಕ್ಕೆ ಹೈಕೋರ್ಟ್‌ ಅಸಮಾಧಾನ

KPSC (ಕರ್ನಾಟಕ ಲೋಕಸೇವಾ ಆಯೋಗ) ನೇಮಕಾತಿ ಹಗರಣದ ಸಮಗ್ರ ತನಿಖೆಗಾಗಿ SIT...