ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಶೀಘ್ರ ಜಾರಿಗೆ ಸರ್ವಪಕ್ಷಗಳು ಒಮ್ಮತಕ್ಕೆ ಬರಲಿ: ಡಾ. ಡಿ ಪುರಂದೇಶ್ವರಿ

Date:

ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಕಾಯ್ದೆಯ ಅನುಷ್ಠಾನ ವಿಳಂಬವಾಗದಂತೆ ಎಲ್ಲ ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರಬೇಕು ಎಂದು ಕಾಮನ್‌ವೆಲ್ತ್ ಮಹಿಳಾ ಸಂಸದೀಯ ಪ್ರತಿನಿಧಿಗಳ (CWP) ಭಾರತ ವಲಯದ ಅಧ್ಯಕ್ಷೆ ಡಾ. ಡಿ. ಪುರಂದೇಶ್ವರಿ ಆಗ್ರಹಿಸಿದರು.

- Advertisement -

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ CWP ಭಾರತ ವಲಯದ ಪ್ರಥಮ ಸಮಾವೇಶದ ಸಮಾರೋಪದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಜನಗಣತಿ ಪ್ರಕ್ರಿಯೆಯಿಂದ ಪ್ರತ್ಯೇಕಿಸುವುದು ಅಥವಾ ಕ್ಷೇತ್ರ ಮರುವಿಂಗಡಣೆಯನ್ನು ತ್ವರಿತವಾಗಿ ಪೂರ್ಣಗೊಳಿಸುವುದು ಸೇರಿದಂತೆ ಸಾಧ್ಯವಿರುವ ಮಾರ್ಗಗಳ ಕುರಿತು ರಾಜಕೀಯ ಪಕ್ಷಗಳು ಚರ್ಚಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈಲ್ವೆ ಪ್ಲಾಟ್‌ಫಾರ್ಮ್‌ನಿಂದ ಜಾಗತಿಕ ಪಯಣ: ಸಣ್ಣ ಊರಿನ ಕನಸುಗಳಿಗೆ...

"ಧೋನಿ ಬರುವ ಮುನ್ನ ರಾಂಚಿಯ ಪೋಷಕರು ತಮ್ನ ಮಕ್ಕಳು ವೈದ್ಯರು, ಎಂಜಿನಿಯರ್ ಆಗಬೇಕೆಂದು ಬಯಸುತ್ತಿದ್ದರು. ಅವರು ಬಂದ ಮೇಲೆ ಎಲ್ಲರೂ ಧೋನಿಯಾಗಲು, ವಿಕೆಟ್‌ಕೀಪರ್ ಆಗಲು ಬಯಸಿದರು" ಎನ್ನುತ್ತಾರೆ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ....

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಇದನ್ನೂ ಓದಿ: ಮಹಿಳಾ ಮೀಸಲಾತಿ ಬಗ್ಗೆ ಸರ್ಕಾರ ಸರ್ವಪಕ್ಷಗಳೊಂದಿಗೆ ಚರ್ಚಿಸಲಿ : ಸಿಪಿಐ(ಎಂ)

ಮಹಿಳಾ ಮೀಸಲಾತಿಯಂತಹ ಮಹತ್ವದ ವಿಷಯದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷಗಳೂ ಒಂದಾಗಬೇಕು. ಮಹಿಳೆಯರ ನಾಯಕತ್ವವನ್ನು ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದರು.

ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳಿಂದ 109 ಮಹಿಳಾ ಸಂಸದರು ಮತ್ತು ಶಾಸಕರು ಭಾಗವಹಿಸಿದ್ದರು. ಆಫ್ರಿಕಾ ವಲಯದ CWP ಅಧ್ಯಕ್ಷೆ ಮತ್ತು ಮಲಾವಿ ಸಂಸದೆ ಗ್ರೇಸ್ ಸೇರಿದಂತೆ ನಾಲ್ವರು ಆಫ್ರಿಕಾದ ಸಂಸದರು ಆನ್‌ಲೈನ್ ಮೂಲಕ ಪಾಲ್ಗೊಂಡಿದ್ದರು ಎಂದು ತಿಳಿಸಿದರು.

ಮಹಿಳೆಯರ ವಿರುದ್ಧ ನಡೆಯುತ್ತಿರುವ ಸೈಬರ್ ಕಿರುಕುಳ, ಡೀಪ್‌ಫೇಕ್, ಮಾರ್ಫಿಂಗ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ವಿಷಯಗಳ ಪ್ರಸಾರವನ್ನು ತಡೆಯಲು ಕೃತಕ ಬುದ್ಧಿಮತ್ತೆ (AI) ಆಧಾರಿತ ತಂತ್ರಜ್ಞಾನವನ್ನು ಬಳಸುವ ಕುರಿತು ಸಮಾವೇಶದಲ್ಲಿ ಮಹತ್ವದ ಸಲಹೆಗಳು ವ್ಯಕ್ತವಾಗಿವೆ. ಈ ವಿಚಾರವನ್ನು ಕೇಂದ್ರ ಸರ್ಕಾರದ ಮಟ್ಟಕ್ಕೆ ಕೊಂಡೊಯ್ಯಲಾಗುವುದು ಎಂದರು.

ಸಮಾವೇಶದಲ್ಲಿ ವ್ಯಕ್ತವಾದ ಸಲಹೆಗಳು ಕೇವಲ ಚರ್ಚೆಗೆ ಸೀಮಿತವಾಗುವುದಿಲ್ಲ. CWP ಭಾರತ ವಲಯ, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಮಹಿಳಾ ಸಬಲೀಕರಣ ಸಮಿತಿ ಸಮನ್ವಯದಿಂದ ಕಾರ್ಯಸಾಧ್ಯವಾದ ಶಿಫಾರಸುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಿವೆ ಎಂದು ತಿಳಿಸಿದರು.

ಹೊಸದಾಗಿ ಆಯ್ಕೆಯಾಗುವ ಮಹಿಳಾ ಜನಪ್ರತಿನಿಧಿಗಳಿಗೆ ನೀತಿ ನಿರೂಪಣೆ, ಹಣಕಾಸು ನಿರ್ವಹಣೆ ಮತ್ತು ಶಾಸನಾತ್ಮಕ ಕಾರ್ಯಚಟುವಟಿಕೆಗಳ ಕುರಿತು ತರಬೇತಿ ನೀಡುವ ಅಗತ್ಯವಿದೆ. ಈ ಉದ್ದೇಶಕ್ಕಾಗಿ ವಲಯವಾರು ಮಾರ್ಗದರ್ಶನ ಕಾರ್ಯಕ್ರಮಗಳನ್ನು ನಡೆಸುವ ಸಾಧ್ಯತೆಯನ್ನೂ ಪರಿಶೀಲಿಸಲಾಗುವುದು ಎಂದು ಹೇಳಿದರು.

ಮಹಿಳೆಯರ ಋತುಬಂಧ (Menopause) ಮತ್ತು ಆರೋಗ್ಯದ ಕುರಿತು ನಡೆದ ವಿಶೇಷ ಅಧಿವೇಶನದಲ್ಲಿಯೂ ಮಹತ್ವದ ವಿಚಾರಗಳು ಚರ್ಚೆಯಾಗಿದ್ದು, ಈ ವಿಷಯದಲ್ಲಿನ ಸಾಮಾಜಿಕ ಮುಜುಗರ ನಿವಾರಣೆ ಮತ್ತು ಜಾಗೃತಿ ಹೆಚ್ಚಿಸಲು ಗಮನಹರಿಸಲಾಗುವುದು ಎಂದರು.

ಸಮಾವೇಶಕ್ಕೆ ಸಂಪೂರ್ಣ ಸಹಕಾರ ನೀಡಿದ ಲೋಕಸಭಾಧ್ಯಕ್ಷ ಓಂ ಬಿರ್ಲಾ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಹಾಗೂ ಕರ್ನಾಟಕ ಸರ್ಕಾರಕ್ಕೆ ಡಾ. ಪುರಂದೇಶ್ವರಿ ಕೃತಜ್ಞತೆ ಸಲ್ಲಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ.30 ರಂದು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ: ಸಚಿವ ಯುಟಿ‌ ಖಾದರ್

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ...

ಪೆಟ್ರೋಲ್‌ನಲ್ಲಿ ಶೇ 31.2ರವರೆಗೆ ಎಥೆನಾಲ್ ಮಿಶ್ರಣ: ಕೇಂದ್ರಕ್ಕೆ ರಾಜ್ಯದ ಪತ್ರ

ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಯೋಜನೆಯ ಅನುಷ್ಠಾನದ ಬಗ್ಗೆ...

ವಿಜಯಪುರ |ನ.23ರಂದು ಪಟ್ಟಣಕ್ಕೆ ಆರೋಗ್ಯ ಸಚಿವ ಯು.ಟಿ.ಖಾದರ್ ಭೇಟಿ

ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ನ.23ರಂದು ಪಟ್ಟಣಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ...

ಬೆಂಗಳೂರು ಟೆಕ್ ಸಮಿಟ್-2026; ಸ್ಟಾರ್ಟ್‌ಅಪ್‌ಗಳಿಗೆ ಸರ್ಕಾರವೇ ಮೊದಲ ಗ್ರಾಹಕ: ಸಚಿವ ಪ್ರಿಯಾಂಕ್ ಖರ್ಗೆ

ನವೋದ್ಯಮಗಳು ರೂಪಿಸುವ ನವೀನ ಆವಿಷ್ಕಾರಗಳನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳುವ ಮೂಲಕ, ದೇಶದಲ್ಲೇ ಮೊದಲ...