ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

Date:

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಉದ್ದೇಶದಿಂದ ಸಂಘಟಿತವಾಗಿ ಸುಳ್ಳು ಫಾರ್ಮ್‌-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು FIR ದಾಖಲಿಸಿ ತನಿಖೆ ನಡೆಸುವಂತೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಹಾಗೂ ವಕೀಲ ರಮೇಶ್ ಬಾಬು ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

- Advertisement -

ʼಮಲ್ಲೇಶ್ವರಂನಲ್ಲಿ ಫಾರ್ಮ್‌-7 ಅರ್ಜಿಗಳ ಮೂಲಕ ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿದೆ ಎಂಬುದರ ಕುರಿತು ಈ ದಿನ.ಕಾಂ ಅ.6ರಂದು ವರದಿ ಮಾಡಿತ್ತು. ಈ ವರದಿಯನ್ನು ದೂರಿನೊಂದಿಗೆ ಲಗತ್ತಿಸಿರುವ ರಮೇಶ್ ಬಾಬು, ವರದಿಯಲ್ಲಿ ಉಲ್ಲೇಖಿಸಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಅರ್ಜಿಗಳನ್ನು ಸಲ್ಲಿಸುವ ಉದ್ದೇಶಕ್ಕಾಗಿ ಪಕ್ಷದ ಕಚೇರಿಯನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪವನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಆರೋಪಗಳು ಸತ್ಯವಾಗಿದ್ದರೆ, ಸುಳ್ಳು ಘೋಷಣೆಗಳು ಹಾಗೂ ಆಕ್ಷೇಪಣೆಗಳ ಮೂಲಕ ಕಾನೂನುಬದ್ಧ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಸಂಘಟಿತ ಪ್ರಯತ್ನವಾಗಬಹುದು. ಇಂತಹ ಕೃತ್ಯವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಾಗೂ ಸಂವಿಧಾನದ 326ನೇ ವಿಧಿಯಡಿ ಖಾತರಿಪಡಿಸಿರುವ ಮತದಾನದ ಹಕ್ಕಿನ ಮೇಲೆ ಪರಿಣಾಮ ಬೀರುತ್ತದೆ ಎಂದು ರಮೇಶ್ ಬಾಬು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ(ಬಿಎನ್‌ಎಸ್‌ಎಸ್), 2023ರ ಸೆಕ್ಷನ್ 173ರ ಅಡಿ ಎಫ್‌ಐಆರ್ ದಾಖಲಿಸಿ, ಸಮಯಬದ್ಧ ತನಿಖೆ ನಡೆಸಬೇಕು. ಫಾರ್ಮ್‌-7 ಅರ್ಜಿಗಳನ್ನು ಸಲ್ಲಿಸಿದವರು ಮಾತ್ರವಲ್ಲದೆ, ಅವುಗಳನ್ನು ಸಿದ್ಧಪಡಿಸಿದವರು, ಸಂಗ್ರಹಿಸಿದವರು ಅಥವಾ ಸಂಘಟಿಸಿದವರು ಹಾಗೂ ಈ ಉದ್ದೇಶಕ್ಕೆ ಸ್ಥಳ ಅಥವಾ ಸಂಪನ್ಮೂಲ ಒದಗಿಸಿದವರ ಪಾತ್ರವನ್ನೂ ತನಿಖೆ ನಡೆಸಬೇಕು ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ

ಅಲ್ಲದೆ, ಮಲ್ಲೇಶ್ವರಂ ಕ್ಷೇತ್ರದ ಚುನಾವಣಾ ನೋಂದಣಿ ಅಧಿಕಾರಿಯಿಂದ ಸ್ವೀಕರಿಸಲಾದ ಎಲ್ಲ ಫಾರ್ಮ್‌-7 ಅರ್ಜಿಗಳು, ಅರ್ಜಿದಾರರ ವಿವರಗಳು, ಮೊಬೈಲ್ ಸಂಖ್ಯೆಗಳು ಹಾಗೂ ಸಲ್ಲಿಸಿರುವ ದಾಖಲೆಗಳನ್ನು ಪಡೆದು ಪರಿಶೀಲಿಸಬೇಕು. ಅರ್ಜಿದಾರರು ನಿಜವಾಗಿಯೂ ಅಸ್ತಿತ್ವದಲ್ಲಿದ್ದಾರೆಯೇ ಮತ್ತು ಅವರೇ ಅರ್ಜಿಗಳನ್ನು ಸಲ್ಲಿಸಿದ್ದಾರೆಯೇ ಎಂಬುದನ್ನೂ ಪರಿಶೀಲಿಸಬೇಕು ಎಂದು ಕೋರಲಾಗಿದೆ.

ಇದನ್ನೂ ಓದಿ: SIR | ಮಲ್ಲೇಶ್ವರಂನಲ್ಲಿ ಬಿಜೆಪಿಯಿಂದ ಭಾರೀ ಅಕ್ರಮ; ಮೇಲಧಿಕಾರಿಗಳೇ ಶಾಮೀಲು ಶಂಕೆ- ʼಈ ದಿನʼಕ್ಕೆ ಸಿಕ್ಕಿದೆ ಸಾಕ್ಷ್ಯ

ಪ್ರಕರಣಕ್ಕೆ ಸಂಬಂಧಿಸಿದ ಡಿಜಿಟಲ್ ಸಾಕ್ಷ್ಯಗಳನ್ನು ಸಂರಕ್ಷಿಸಬೇಕು. ಇದರಲ್ಲಿ ಎಲೆಕ್ಟ್ರಾನಿಕ್ ಸಾಧನಗಳ ಮಾಹಿತಿ, ಸಂದೇಶಗಳು, ಸಿಸಿಟಿವಿ ದೃಶ್ಯಗಳು ಹಾಗೂ ಅರ್ಜಿಗಳನ್ನು ಸಿದ್ಧಪಡಿಸಲು ಬಳಸಲಾಗಿದೆ ಎನ್ನಲಾದ ಸ್ಥಳಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸುವಂತೆ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಅರ್ಜಿಗಳ ಆಧಾರದ ಮೇಲೆ ಯಾವುದೇ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದೂ ದೂರಿನಲ್ಲಿ ಒತ್ತಾಯಿಸಲಾಗಿದೆ.

ಈ ದೂರು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ, ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಚುನಾವಣಾ ನೋಂದಣಿ ಅಧಿಕಾರಿಗೂ ಕಳುಹಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಬೀದರ್‌ | ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿ ದಾಳಿ, ಬ್ರಿಮ್ಸ್‌ಗೆ ದಾಖಲು

ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ,...