ಕಾವೇರಿ ನಿಯಮ ಉಲ್ಲಂಘನೆ ಆರೋಪ; ಕರ್ನಾಟಕದ ಮೇಕೆದಾಟು DPR ವಾಪಸ್‌ ಕಳಿಸಿದ CWC

Date:

ಮಹತ್ವಾಕಾಂಕ್ಷೆಯ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಮತ್ತೊಂದು ಹಿನ್ನಡೆಯಾಗಿದ್ದು, ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪರಿಷ್ಕೃತ ವಿಸ್ತೃತ ಯೋಜನಾ ವರದಿ (DPR)ಯನ್ನು ಕೇಂದ್ರ ಜಲ ಆಯೋಗ (CWC) ವಾಪಸ್ ಕಳುಹಿಸಿದೆ. ಯೋಜನೆಯು ಕಾವೇರಿ ಜಲ ವಿವಾದ ನ್ಯಾಯಮಂಡಳಿ (CWDT) ತೀರ್ಪು ಹಾಗೂ 2018ರ ಸುಪ್ರೀಂ ಕೋರ್ಟ್ ಆದೇಶದ ವ್ಯಾಪ್ತಿಗೆ ಹೊಂದಿಕೆಯಾಗುವುದಿಲ್ಲ ಎಂದು ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ.

- Advertisement -

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿರುವಂತೆ, ಕರ್ನಾಟಕ ಸರ್ಕಾರ ಯೋಜನೆಯಲ್ಲಿ ಕುಡಿಯುವ ನೀರಿನ ಬಳಕೆಯ ಪ್ರಮಾಣವನ್ನು 4.75 ಟಿಎಂಸಿಯಿಂದ 6.95 ಟಿಎಂಸಿಗೆ ಹೆಚ್ಚಿಸಲು ಪ್ರಸ್ತಾಪಿಸಿತ್ತು. ಜೊತೆಗೆ, ಶಿವನಸಮುದ್ರ ರನ್-ಆಫ್-ದಿ-ರಿವರ್ ಜಲವಿದ್ಯುತ್ ಯೋಜನೆಯನ್ನೂ ಹೊಸದಾಗಿ ಸೇರಿಸಲಾಗಿತ್ತು. ಈ ಬದಲಾವಣೆಗಳು ಮೂಲ ಡಿಪಿಆರ್‌ನಲ್ಲಿ ಇರಲಿಲ್ಲ ಎಂದು ಸೂಚಿಸಿರುವ ಸಿಡಬ್ಲ್ಯುಸಿ, ಅಗತ್ಯ ತಿದ್ದುಪಡಿಗಳನ್ನು ಮಾಡುವಂತೆ ತಿಳಿಸಿ ಜೂನ್ 29ರಂದು ವರದಿಯನ್ನು ಹಿಂದಿರುಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

2019ರಲ್ಲಿ ಸಲ್ಲಿಸಿದ್ದ ಮೂಲ ಡಿಪಿಆರ್‌ಗೆ ಸಂಬಂಧಿಸಿದಂತೆ ಸಿಡಬ್ಲ್ಯುಸಿ ಎತ್ತಿದ್ದ ಆಕ್ಷೇಪಣೆಗಳಿಗೆ ಉತ್ತರವಾಗಿ ಕರ್ನಾಟಕ ಸರ್ಕಾರ 2026ರ ಏಪ್ರಿಲ್ 21ರಂದು ಪರಿಷ್ಕೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ‘ಶಿವನಸಮುದ್ರ ರನ್-ಆಫ್-ದಿ-ರಿವರ್ ಪವರ್ ಪ್ರಾಜೆಕ್ಟ್’ ಸೇರಿಸಲಾಗಿದ್ದು, ಇದೇ ಆಯೋಗದ ಪ್ರಮುಖ ಆಕ್ಷೇಪಣೆಗಳಲ್ಲಿ ಒಂದಾಗಿದೆ.

ಕರ್ನಾಟಕ ಸರ್ಕಾರ, 59.46 ಟಿಎಂಸಿ ಜೀವಂತ ಸಂಗ್ರಹ ಸಾಮರ್ಥ್ಯದ ಜಲಾಶಯ ಅಗತ್ಯ ಎಂದು ಸಮರ್ಥಿಸಿಕೊಂಡಿತ್ತು. ರಾಜ್ಯದ ಪ್ರಕಾರ, ಜೂನ್- ಜುಲೈ ತಿಂಗಳಲ್ಲಿ ತಮಿಳುನಾಡಿಗೆ ನೀರು ಹರಿಸಲು 13 ಟಿಎಂಸಿ, ಫೆಬ್ರವರಿಯಿಂದ ಮೇವರೆಗೆ ಪರಿಸರ ಹರಿವು ಕಾಪಾಡಲು 10 ಟಿಎಂಸಿ, 2044ರ ವೇಳೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಕ್ಕೆ 33.15 ಟಿಎಂಸಿ ಹಾಗೂ ಆವಿಯಾಗುವಿಕೆ, ಹೂಳು ಸಂಗ್ರಹಕ್ಕೆ 3.85 ಟಿಎಂಸಿ ಸೇರಿ ಒಟ್ಟು ಸುಮಾರು 60 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯ ಅಗತ್ಯವಿದೆ ಎಂದು ವಾದಿಸಿತ್ತು.

ಆದರೆ, ಈ ಲೆಕ್ಕಾಚಾರದಲ್ಲಿ ಬಳಸಿರುವ ಅಂಕಿ-ಅಂಶಗಳು ಹಳೆಯವು ಎಂದು ಸಿಡಬ್ಲ್ಯುಸಿ ಅಭಿಪ್ರಾಯಪಟ್ಟಿದೆ. ಬೆಂಗಳೂರಿನ ಭವಿಷ್ಯದ ನೀರಿನ ಬೇಡಿಕೆಯನ್ನು ಲೆಕ್ಕ ಹಾಕುವಾಗ, ರಾಜ್ಯವು 1990ರ ನೀರು ಬಳಕೆಯ ಅಂಕಿ-ಅಂಶಗಳನ್ನು ಆಧಾರವಾಗಿಸಿಕೊಂಡಿದೆ ಎಂದು ಆಯೋಗ ಹೇಳಿದೆ.

ಇದಲ್ಲದೆ, 2018ರ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕರ್ನಾಟಕದ ಒಟ್ಟು ಕುಡಿಯುವ ಹಾಗೂ ಗೃಹಬಳಕೆಯ ನೀರಿನ ಅಗತ್ಯವನ್ನು 33 ಟಿಎಂಸಿ ಎಂದು ಹಾಗೂ ಅದರಲ್ಲಿ ಬೆಂಗಳೂರುಗೆ 24 ಟಿಎಂಸಿ ಸಾಕು ಎಂದು ಈಗಾಗಲೇ ನಿರ್ಧರಿಸಲಾಗಿದೆ ಎಂದು ಸಿಡಬ್ಲ್ಯುಸಿ ಉಲ್ಲೇಖಿಸಿದೆ.

ಕಳೆದ ಮೂರು ದಶಕಗಳಲ್ಲಿ ಬೆಂಗಳೂರಿನ ಜನಸಂಖ್ಯೆ ಮತ್ತು ವ್ಯಾಪ್ತಿ ಗಣನೀಯವಾಗಿ ಹೆಚ್ಚಾಗಿದ್ದರೂ, ನಗರ ಪ್ರಸ್ತುತ ಎಷ್ಟು ನೀರನ್ನು ಬಳಸುತ್ತಿದೆ ಎಂಬ ನವೀಕೃತ ಮಾಹಿತಿ ಕರ್ನಾಟಕ ಸರ್ಕಾರ ನೀಡಿಲ್ಲ ಎಂದು ಆಯೋಗ ಗಮನಿಸಿದೆ.

ಕರ್ನಾಟಕವು ಹೆಚ್ಚುವರಿ 6.95 ಟಿಎಂಸಿ ನೀರನ್ನು ಬಳಸಲು ಅನುಮತಿ ಕೋರಿರುವುದನ್ನೂ ಸಿಡಬ್ಲ್ಯುಸಿ ಪ್ರಶ್ನಿಸಿದೆ. ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ 6.5 ಟಿಎಂಸಿ ಹೆಚ್ಚುವರಿ ಕುಡಿಯುವ ನೀರಿನ ಬಳಕೆಗೆ ಅವಕಾಶ ನೀಡಿದ್ದರೂ, ಅದರಲ್ಲಿ ಈಗಾಗಲೇ ಬಳಕೆಯಲ್ಲಿರುವ ಪ್ರಮಾಣವೂ ಸೇರಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ. 1990ರ ಲೆಕ್ಕದ ಪ್ರಕಾರ ಕರ್ನಾಟಕದ ಕುಡಿಯುವ ನೀರಿನ ಬಳಕೆ 2.9 ಟಿಎಂಸಿ ಆಗಿದ್ದರೆ, ಹೆಚ್ಚುವರಿ ಬಳಕೆಗೆ ಸುಮಾರು 3.6 ಟಿಎಂಸಿ ಮಾತ್ರ ಅವಕಾಶವಿದೆ. ಹೀಗಾಗಿ 6.95 ಟಿಎಂಸಿ ಬಳಕೆಯ ಪ್ರಸ್ತಾಪವು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಿತಿಯನ್ನು ಮೀರುತ್ತದೆ ಎಂದು ಆಯೋಗ ಹೇಳಿದೆ.

ಈ ಎಲ್ಲ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ, ಸಿಡಬ್ಲ್ಯುಸಿ 2019ರ ಡಿಪಿಆರ್ ಅನ್ನು ಅಧಿಕೃತವಾಗಿ ಹಿಂದಿರುಗಿಸಿದ್ದು, ಕಾವೇರಿ ನ್ಯಾಯಮಂಡಳಿ ತೀರ್ಪು, ಸುಪ್ರೀಂ ಕೋರ್ಟ್ ಆದೇಶ ಹಾಗೂ ಸಿಡಬ್ಲ್ಯುಸಿ ಮಾರ್ಗಸೂಚಿಗಳಿಗೆ ಅನುಗುಣವಾಗಿ ಹೊಸ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಹೊಸ ಪ್ರಸ್ತಾವನೆಯಲ್ಲಿ ನವೀಕೃತ ತಾಂತ್ರಿಕ ಮಾಹಿತಿ, ಪರಿಷ್ಕೃತ ಅಂಕಿ-ಅಂಶಗಳು ಮತ್ತು ಹೊಸ ನಕ್ಷೆಗಳನ್ನು ಸೇರಿಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: 3,991 ಕಾನ್‌ಸ್ಟೆಬಲ್ ಹುದ್ದೆಗೆ 4.54 ಲಕ್ಷ ಅರ್ಜಿ; ಪಿಎಚ್‌.ಡಿ, ಎಂಜಿನಿಯರ್‌ ಪದವೀಧರರೂ ಸ್ಪರ್ಧೆ

ತಮಿಳುನಾಡು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಡಬ್ಲ್ಯುಸಿಯ ಆಕ್ಷೇಪಣೆಗಳು ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಆರಂಭದಿಂದಲೇ ವ್ಯಕ್ತಪಡಿಸುತ್ತಿದ್ದ ಆತಂಕವನ್ನು ಸಮರ್ಥಿಸಿವೆ. ಅವರ ಪ್ರಕಾರ, ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯಗಳ ಕೆಳಭಾಗದಲ್ಲಿ ಹರಿಯುವ ಸುಮಾರು 80 ಟಿಎಂಸಿ ನೀರನ್ನು ಮೇಲ್ಭಾಗದಲ್ಲೇ ಸಂಗ್ರಹಿಸುವ ಉದ್ದೇಶದಿಂದ ಮೇಕೆದಾಟು ಯೋಜನೆ ರೂಪಿಸಲಾಗಿದೆ. ಇದರಿಂದ ತಮಿಳುನಾಡಿನ ಪಾಲಿನ ನೀರಿನ ಹರಿವಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬ ಆತಂಕವನ್ನು ರಾಜ್ಯ ಆರಂಭದಿಂದಲೇ ವ್ಯಕ್ತಪಡಿಸುತ್ತ ಬಂದಿದೆ. ಇದೇ ವೇಳೆ, ಕಾವೇರಿ ಜಲಾನಯನ ಪ್ರದೇಶವನ್ನು ಹೆಲಿಕಾಪ್ಟರ್‌ನಲ್ಲಿ ವೀಕ್ಷಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ್ದ ಆಹ್ವಾನವನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದಾಗ್ಯೂ, ಆಗಸ್ಟ್ 3ರಂದು ವಿಜಯ್ ಬೆಂಗಳೂರಿಗೆ ಭೇಟಿ ನೀಡಿ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಚರ್ಚಿಸಲಿದ್ದಾರೆ. ಸಭೆಯಲ್ಲಿ ತಮಿಳುನಾಡಿನ ಮುಖ್ಯ ಕಾರ್ಯದರ್ಶಿ ಎಂ. ಸಾಯಿ ಕುಮಾರ್ ಸಹ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನ್ಯಾ. ನಾಗಮೋಹನ್ ದಾಸರಿಂದ ಸಂವಿಧಾನ ಕುರಿತು ವಿಶೇಷ ಉಪನ್ಯಾಸ

ದಾವಣಗೆರೆ ವಿಶ್ವವಿದ್ಯಾನಿಲಯ, ಮಾನವ ಹಕ್ಕುಗಳ ವೇದಿಕೆ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ...

ಸರ್ಕಾರಿ ಶಾಲೆ ಮುಚ್ಚುವುದು, ಖಾಸಗೀಕರಣ ಎರಡೂ ಅಪಾಯದ ಸೂಚನೆ; ಅವುಗಳನ್ನು ಉಳಿಸಿ, ಉನ್ನತೀಕರಿಸಬೇಕು! ಏಕೆಂದರೆ…

ಒಂದು ಸರ್ಕಾರಿ ಶಾಲೆ ಮುಚ್ಚಿದಾಗ ಆ ಪ್ರದೇಶದ ಮಕ್ಕಳಿಗೆ ಹತ್ತಿರದಲ್ಲೇ ದೊರೆಯುತ್ತಿದ್ದ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ ಮೂಲಭೂತ ಹಕ್ಕುಗಳ ಮೇಲೇಕೆ ತೂಗುಕತ್ತಿ?

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ...

ಬಡತನದ ಸವಾಲಿನಿಂದ ಗವರ್ನರ್ ಪೀಠದವರೆಗೆ: ಅಮೆರಿಕದಲ್ಲಿ ಮೂರು ಬಾರಿ ಇತಿಹಾಸ ಸೃಷ್ಟಿಸಿದ ಡೆಬ್ ಹಾಲಂಡ್

ಅಮೆರಿಕದ ರಾಜಕೀಯ ವ್ಯವಸ್ಥೆಯಲ್ಲಿ ವಂಚಿತ ಜನಾಂಗದ ಮಹಿಳೆಯೊಬ್ಬರು ಅತ್ಯುನ್ನತ ಸ್ಥಾನಕ್ಕೇರುವುದು ಸಾಮಾನ್ಯ...