ಬಿಜೆಪಿ ಜೊತೆ ಮೈತ್ರಿ | ಜೆಡಿಎಸ್ ತೊರೆದ ಮತ್ತೊಬ್ಬ ಮುಸ್ಲಿಂ ನಾಯಕ

Date:

  • ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಶಾಸಕ ಎಸ್.ಶಫಿ ಅಹ್ಮದ್
  • ವಾಟ್ಸಪ್‌ನಲ್ಲಿ ದೇವೇಗೌಡ, ಕುಮಾರಸ್ವಾಮಿಗೆ ರಾಜೀನಾಮೆ ಪತ್ರ ರವಾನೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂಬ ಮಾಹಿತಿ ಜೆಡಿಎಸ್‌ ವರಿಷ್ಠರಿಂದ ಸ್ಪಷ್ಟವಾಗುತ್ತಿದ್ದಂತೆ ಪಕ್ಷದೊಳಗಿನ ಮುಸ್ಲಿಂ ಮುಖಂಡರೆಲ್ಲ ಒಬ್ಬೊಬ್ಬರಾಗಿ ಪಕ್ಷ ತೊರೆಯುತ್ತಿದ್ದಾರೆ.

ಕಳೆದ ಶನಿವಾರ ಜನತಾದಳ (ಜಾತ್ಯತೀತ) ಕರ್ನಾಟಕ ಘಟಕದ ಉಪಾಧ್ಯಕ್ಷ ಸೈಯದ್ ಶಫೀವುಲ್ಲಾ ಸಾಹೇಬ್ ಅವರು ಕೇಸರಿ ಪಕ್ಷದೊಂದಿಗಿನ ಮೈತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಇದೀಗ ಬಿಜೆಪಿ ಜತೆಗಿನ ಮೈತ್ರಿಯನ್ನು ವಿರೋಧಿಸಿ ಜೆಡಿಎಸ್ ಪಕ್ಷದ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದ ತುಮಕೂರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಪ್ರಮುಖ ನಾಯಕ ಹಾಗೂ ಮಾಜಿ ಶಾಸಕ ಎಸ್.ಶಫಿ ಅಹ್ಮದ್ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎಸ್.ಶಫಿ ಅಹ್ಮದ್ ಅವರು ಜೆಡಿಎಸ್‌ನ ಪ್ರಾಥಮಿಕ ಸದಸ್ಯತ್ವ ಮತ್ತು ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಪತ್ರವನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರಿಗೆ ವಾಟ್ಸಪ್ ಮೂಲಕ ರವಾನಿಸಿದ್ದಾರೆ.

ಜೆಡಿ(ಎಸ್) ಪಕ್ಷಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿರುವುದಾಗಿ ಅಹ್ಮದ್ ತಮ್ಮ ಎರಡು ಸಾಲಿನ ರಾಜೀನಾಮೆ ಪತ್ರದಲ್ಲಿ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು

ಎಸ್.ಶಫಿ ಅಹ್ಮದ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಆದರೆ ಈಗ ಅವರ ಮುಂದಿನ ನಡೆಯ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

ಬಿಜೆಪಿ ಜತೆ ಕೈಜೋಡಿಸಲು ಪಕ್ಷ ನಿರ್ಧರಿಸಿದ ಬೆನ್ನಲ್ಲೇ ಜೆಡಿಎಸ್‌ನ ಅಲ್ಪಸಂಖ್ಯಾತ ಮುಖಂಡರು ಈಗಾಗಲೇ ಸಭೆ ನಡೆಸಿದ್ದಾರೆ. ಆದರೆ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ‌ ಎಂ ಇಬ್ರಾಹಿಂ ಈ ಬೆಳವಣಿಗೆಯ ಬಗ್ಗೆ ಮೌನ ಮುರಿದಿಲ್ಲ. ಆದರೆ ಅವರು ಕೂಡ ಪಕ್ಷವನ್ನು ತೊರೆಯಲು ಯೋಚಿಸುತ್ತಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...