ರೈತರಿಗೆ ನಿವೇಶನ ಹಂಚಿಕೆ, ನೈಸ್ ಅಕ್ರಮದ ಸಕ್ರಮ ಪ್ರಯತ್ನ; ಕೆಪಿಆರ್‌ಎಸ್‌ ಆಪಾದನೆ

Date:

ನೈಸ್ ಸಂಸ್ಥೆಯ ಭೂಸ್ವಾಧೀನವನ್ನು ರದ್ದುಪಡಿಸಿರುವ ಹೈಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ, ಅದೇ ಭೂಮಿಯಲ್ಲಿ ಪೆರಿಫೆರಲ್‌ ರಿಂಗ್‌ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ನೀಡಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌)ದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ ಟಿ ಖಂಡಿಸಿದ್ದಾರೆ.

- Advertisement -

ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲೇ ಪೆರಿಫೆರಲ್‌ ರಿಂಗ್‌ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ಎರಡು ತಿಂಗಳೊಳಗೆ ನಿವೇಶನ ನೀಡಲು ಸರ್ಕಾರ ಗಡುವು ನೀಡಿದೆ. ಇದು ಹೈಕೋರ್ಟ್‌ ತೀರ್ಪನ್ನು ಉಲ್ಲಂಘಿಸುವುದಷ್ಟೇ ಅಲ್ಲದೆ, ನೈಸ್‌ ಸಂಸ್ಥೆಯ ಅಕ್ರಮವನ್ನು ಅಡ್ಡಮಾರ್ಗದ ಮೂಲಕ ಸಕ್ರಮಗೊಳಿಸುವ ಪ್ರಯತ್ನವಾಗಿದೆ ಎಂದು ಆಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಮೂಲ ಒಪ್ಪಂದದ ಚೌಕಟ್ಟನ್ನು ಉಲ್ಲಂಘಿಸಿ ನೈಸ್‌ ಸಂಸ್ಥೆ ಕೆಐಎಡಿಬಿ ಮೂಲಕ ಅಕ್ರಮವಾಗಿ ಭೂಸ್ವಾಧೀನ ಮಾಡಿಕೊಂಡಿದೆ. 2026ರ ಜುಲೈ 29ರಂದು ನ್ಯಾಯಮೂರ್ತಿ ಡಿ.ಕೆ. ಸಿಂಗ್‌ ನೇತೃತ್ವದ ಹೈಕೋರ್ಟ್‌ ವಿಭಾಗೀಯ ಪೀಠ ನೈಸ್‌ ಕಂಪನಿಯ ಭೂಸ್ವಾಧೀನವನ್ನು ರದ್ದುಪಡಿಸಿದೆ. ನೈಸ್‌ ಸಂಸ್ಥೆಯ ಅಕ್ರಮಗಳ ಕುರಿತು ಫೊರೆನ್ಸಿಕ್‌ ಆಡಿಟ್‌ ಹಾಗೂ ಸ್ವತಂತ್ರ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದ್ದರೂ, ತೀರ್ಪನ್ನು ಜಾರಿಗೊಳಿಸಬೇಕಾದ ರಾಜ್ಯ ಸರ್ಕಾರವೇ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ರೈತರಿಗೆ ನಿವೇಶನ ನೀಡಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಕಾನೂನು ಆಳ್ವಿಕೆಯನ್ನು ರಿಯಲ್‌ ಎಸ್ಟೇಟ್‌ ಮಾಫಿಯಾ ಹೇಗೆ ನಿಯಂತ್ರಿಸುತ್ತಿದೆ ಎಂಬುದಕ್ಕೆ ಇದು ಜ್ವಲಂತ ಉದಾಹರಣೆ ಎಂದು ಯಶವಂತ ಟೀಕಿಸಿದ್ದಾರೆ.

1,453 ರೈತರಿಗೆ ನಿವೇಶನ ನೀಡಲು ಸರ್ಕಾರದ ನಿರ್ಧಾರ

ಇನ್ನೊಂದೆಡೆ, ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ (ಬಿಎಂಐಸಿ) ಯೋಜನೆಗೆ ನೈಸ್‌ ಸಂಸ್ಥೆಗೆ ಸ್ವಯಂಪ್ರೇರಿತವಾಗಿ ಭೂಮಿ ನೀಡಿದ ರೈತರಿಗೆ ನೈಸ್‌ ಟೌನ್‌ಶಿಪ್‌ನಲ್ಲಿ ನಿವೇಶನ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.

ಅಂದಿನ ಜಿಲ್ಲಾಧಿಕಾರಿ ನೇತೃತ್ವದ ಸಮಿತಿಯು ಸ್ವಯಂಪ್ರೇರಿತವಾಗಿ ಭೂಮಿ ನೀಡಿದವರಿಗೆ ನಿವೇಶನ ನೀಡಲು ಈ ಹಿಂದೆ ತೀರ್ಮಾನಿಸಿತ್ತು. ಅದರಂತೆ, ಒಂದು ಎಕರೆವರೆಗೆ ಜಮೀನು ನೀಡಿದವರಿಗೆ 30X40 ಅಡಿ ಹಾಗೂ ಒಂದು ಎಕರೆಗಿಂತ ಹೆಚ್ಚು ಜಮೀನು ನೀಡಿದವರಿಗೆ 40X60 ಅಡಿ ನಿವೇಶನ ನೀಡಲು ನಿರ್ಧರಿಸಲಾಗಿತ್ತು. ಇದಕ್ಕೆ ನೈಸ್‌ ಸಂಸ್ಥೆಯೂ ಒಪ್ಪಿಕೊಂಡಿತ್ತು. ಆದರೆ, ಈ ಅಂಶವು ‘ಫ್ರೇಮ್‌ವರ್ಕ್‌ ಅಗ್ರಿಮೆಂಟ್‌’ನಲ್ಲಿ ಇರಲಿಲ್ಲ ಎಂದು ಅವರು ಹೇಳಿದ್ದಾರೆ.

ಸ್ವಯಂಪ್ರೇರಿತವಾಗಿ ಭೂಮಿ ನೀಡಿದ 1,453 ರೈತರಿಗೆ ನಾಲ್ಕು ಕಡೆಗಳಲ್ಲಿ ನಿವೇಶನ ನೀಡಲು ನಿರ್ಧರಿಸಲಾಗಿದೆ. ಸದ್ಯ 570 ನಿವೇಶನಗಳು ಲಭ್ಯವಿದ್ದು, 30X40 ಅಡಿಯ 231 ಹಾಗೂ 40X60 ಅಡಿಯ 243 ನಿವೇಶನಗಳಿವೆ. ಇನ್ನೂ 579 ನಿವೇಶನಗಳ ಅಗತ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.

ನೈಸ್‌ ಸಂಸ್ಥೆಯು ವರಾಹಸಂದ್ರ, ಮಾದಾವರ, ಶ್ರೀಕಂಠಪುರ ಹಾಗೂ ಗಂಗೊಂಡನಹಳ್ಳಿ ಭಾಗಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಜಮೀನಿನಲ್ಲಿ ನಿವೇಶನ ಅಭಿವೃದ್ಧಿಪಡಿಸಿ ರೈತರಿಗೆ ನೀಡಬೇಕು ಎಂದು ಸೂಚಿಸಲಾಗಿದೆ. ಎರಡು ತಿಂಗಳೊಳಗೆ ರೈತರಿಗೆ ನಿವೇಶನಗಳನ್ನು ನೀಡುವಂತೆ ನೈಸ್‌ ಸಂಸ್ಥೆಗೆ ಸೂಚನೆ ನೀಡಲಾಗಿದೆ ಎಂದು ಪರಮೇಶ್ವರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...