ಚಳಿಗಾಲ ಅಧಿವೇಶನ | ಪ್ರತಿಭಟನೆಗೆ ಬಳಸಲಾಗುವ ರೈತರ ಜಮೀನು ಬಾಡಿಗೆ ದರ ಹೆಚ್ಚಳ  

Date:

  • ಕಳೆದ ವರ್ಷ ರೈತರ ಜಮೀನಿಗೆ ಪ್ರತಿ ಗುಂಟೆಗೆ ರೂ. 1200 ನೀಡಲಾಗಿತ್ತು
  • ಈ ಭಾರಿ ಪ್ರತಿ ಗುಂಟೆಗೆ ರೂ. 3,000 ನೀಡುವಂತೆ ಹೆಬ್ಬಾಳಕರ್ ಸೂಚನೆ 

ವಿಧಾನ ಮಂಡಲದ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ನಡೆಯಲಿರುವ ವಿವಿಧ ಪ್ರತಿಭಟನೆಗಳಿಗೆ ಬಳಸಲಾಗುವ ರೈತರ ಜಮೀನಿನ ಬಾಡಿಗೆಯನ್ನು ಹೆಚ್ಚಳ ಮಾಡಲಾಗಿದೆ.

ರೈತರ ಮನವಿಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕಳೆದ ವರ್ಷ ಪ್ರತಿಭಟನೆಯ ಟೆಂಟ್ ನಿರ್ಮಾಣಕ್ಕೆ ಬಳಸಲಾಗಿದ್ದ ರೈತರ ಜಮೀನಿಗೆ ಪ್ರತಿ ಗುಂಟೆಗೆ ರೂ. 1200 ನೀಡಲಾಗಿತ್ತು. ಆ ಜಮೀನಿನಲ್ಲಿ ಯಾವುದೇ ಫಸಲು ಬೆಳೆದಿರಲಿಲ್ಲ.

ಈ ಬಾರಿ ಹಲಗಾ ಗ್ರಾಮದ ರೈತರ 3.28 ಎಕರೆ ಜಮೀನನ್ನು ಪ್ರತಿಭಟನಾ ಟೆಂಟ್‌ಗಾಗಿ ಬಳಸಲಾಗುತ್ತಿದೆ. ಈ ಜಮೀನಿನಲ್ಲಿ ರೈತರು ಫಸಲು ಬೆಳೆದಿದ್ದರಿಂದ ಪ್ರತಿ ಗುಂಟೆಗೆ ರೂ. 3,000 ನೀಡುವಂತೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಚಿವರ ಸೂಚನೆಯಂತೆ ರೈತರಿಗೆ ಪ್ರತಿ ಗುಂಟೆಗೆ ರೂ. 3,000 ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ರೈತರು ಜಮೀನಿನ ಬಾಡಿಗೆ ಹೆಚ್ಚಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಲ್ಲಿ ಮನವಿ ಮಾಡಿದ್ದರು. ಸಚಿವರು ರೈತರ ಮನವಿಗೆ ಸ್ಪಂದಿಸಿದಂತಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...