ರಾಜ್ಯದ ಶಕ್ತಿ ಯೋಜನೆ ಅಧ್ಯಯನಕ್ಕಾಗಿ ಆಂಧ್ರ ಸಚಿವರ ನೇತೃತ್ವದ ನಿಯೋಗ ನಾಳೆ ಬೆಂಗಳೂರಿಗೆ ಭೇಟಿ

Date:

ರಾಜ್ಯದಲ್ಲಿ ಜನಪ್ರಿಯವಾಗಿರುವ ಶಕ್ತಿ ಯೋಜನೆಯನ್ನು ಆಂಧ್ರ ಪ್ರದೇಶ ಸರ್ಕಾರವು ಜಾರಿಗೊಳಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಶಕ್ತಿ ಯೋಜನೆ ಅಧ್ಯಯನಕ್ಕಾಗಿ ಆಂಧ್ರದ ಸಚಿವರ ಹಾಗೂ ಅಧಿಕಾರಿಗಳ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ.

- Advertisement -

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜನ‌ಮೆಚ್ಚುಗೆ ಗಳಿಸಿದೆ. ಕಳೆದ ಎರಡು ವರ್ಷದಿಂದ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಕಾಂಗ್ರೆಸ್ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಜನಪ್ರಿಯ ಗಳಿಸಿರುವ ಯೋಜನೆಯಾಗಿದೆ. ಈಗಾಗಲೇ ಶಕ್ತಿ ಯೋಜನೆಯಡಿ ಸುಮಾರು 300 ಕೋಟಿ ರೂಪಾಯಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸುತ್ತಿದ್ದಾರೆ. ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಮಹಿಳೆಯರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ರಾಜ್ಯದ ಶಕ್ತಿ ಯೋಜನೆಯತ್ತ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಚಿತ್ತ ನೆಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆಂಧ್ರ ಪ್ರದೇಶ ಸರ್ಕಾರ ಅಲ್ಲಿ ಕರ್ನಾಟಕ ಮಾದರಿಯಲ್ಲೇ ಶಕ್ತಿ ಯೋಜನೆಯನ್ನು ಜಾರಿ ಮಾಡಲು ಒಲವು ಹೊಂದಿದೆ. ಈ ನಿಟ್ಟಿನಲ್ಲಿ ಆಂಧ್ರದ ಸಚಿವರು ಹಾಗೂ ಅಧಿಕಾರಿಗಳ ನಿಯೋಗ ನಾಳೆ (ಜ.2ಕ್ಕೆ) ರಾಜ್ಯಕ್ಕೆ ಭೇಟಿ ನೀಡಲಿದೆ. ಬೆಂಗಳೂರಿಗೆ ಆಗಮಿಸಿ ಶಕ್ತಿ ಯೋಜನೆ ಬಗ್ಗೆ ಅಧ್ಯಯನ ನಡೆಸಲಿದೆ. ರಾಜ್ಯದ ಶಕ್ತಿ ಯೋಜನೆ ಅನುಷ್ಠಾನ, ಸಾಧಕ ಬಾಧಕಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ ಎಂದು ಕೆಎಸ್​ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

ರಾಜ್ಯಕ್ಕೆ ಆಂಧ್ರ ಪ್ರದೇಶದ ಮೂವರು ಸಚಿವರು ಸೇರಿ ಹಿರಿಯ ಅಧಿಕಾರಿಗಳ ಸುಮಾರು 15 ಸದಸ್ಯರ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ. ಜ.3ರಂದು ಸಿಎಂ, ಸಾರಿಗೆ ಸಚಿವ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರನ್ನು ಭೇಟಿಯಾಗಿ ಶಕ್ತಿ ಯೋಜನೆಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ನಿಯೋಗದಲ್ಲಿ ಆಂಧ್ರದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ಶೆಟ್ಟಿ, ಗೃಹ ಮತ್ತು ವಿಪತ್ತು ನಿರ್ವಹಣೆ ಸಚಿವೆ ವಂಗಲಪುಡಿ ಅನಿತಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ಇರಲಿದ್ದಾರೆ. ಇದರ ಜೊತೆಗೆ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಹಣಕಾಸು ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಎಪಿಎಸ್​ಆರ್​ಟಿಸಿಯ ಅಧಿಕಾರಿಗಳನ್ನೊಳಗೊಂಡ 15 ಅಧಿಕಾರಿಗಳ ತಂಡ ಆಗಮಿಸಿ ಶಕ್ತಿ ಯೋಜನೆಯ ಅಧ್ಯಯನ ನಡೆಸಲಿದೆ.

ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಆಂಧ್ರ ಪ್ರದೇಶ ಸರ್ಕಾರದ ಸಚಿವರ ನೇತೃತ್ವದ ನಿಯೋಗ ಜ.3ಕ್ಕೆ ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಶಕ್ತಿ ಯೋಜನೆ ಅನುಷ್ಠಾನ, ಹಣಕಾಸು ನಿರ್ವಹಣೆ, ಹೊರೆ, ನಿರ್ವಹಣೆ, ಮಾನದಂಡಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಶಕ್ತಿ ಯೋಜನೆಯ ಯಶಸ್ಸು, ರಸ್ತೆ ಸಾರಿಗೆ ನಿಗಮ ತೆಗೆದುಕೊಂಡ ಕ್ರಮಗಳ ಬಗ್ಗೆ ನಿಯೋಗಕ್ಕೆ ವಿವರಿಸಲಿದ್ದೇವೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...