ಕನಿಷ್ಠ ವೇತನ, ಖಾಯಂಗೆ ಆಗ್ರಹಿಸಿ ಏ.21 ರಿಂದ ದೆಹಲಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Date:

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಲಾಗುತ್ತಿರುವ ಗೌರವ ಸಂಭಾವನೆಯ ಬದಲಿಗೆ ಕನಿಷ್ಠವೇತನ ಕಾಯಿದೆಯ ವ್ಯಾಪ್ತಿಗೊಳಪಡಿಸಿ ಕನಿಷ್ಠ ವೇತನ ಜಾರಿಗೊಳಿಸಬೇಕು. ತಮ್ಮ ಗೌರವ ಸೇವೆಯನ್ನು ಖಾಯಂಗೊಳಿಸಬೇಕು ಹಾಗೂ ಪೆನ್ಶನ್, ಗ್ರಾಚ್ಯುಟಿ ಸೇರಿದಂತೆ ಕಾನೂನು ಬದ್ಧ ಸೇವಾ ಸೌಲಭ್ಯಗಳನ್ನು ಒದಗಿಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಪಡಿಸಲು ಇದೇ 21 ರಿಂದ 23ರವರೆಗೆ ಮೂರು ದಿನಗಳ ಕಾಲ ದೆಹಲಿಯ ಜಂತರ್ ಮಂತರ್ ನಲ್ಲಿ ಎಐಟಿಯುಸಿ ಸಂಯೋಜಿತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

- Advertisement -

ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಸಂಘಟನೆಯ ಮುಖಂಡರು, ಕಳೆದ 50 ವರ್ಷಗಳ ಹಿಂದೆ ಜಾರಿಗೆ ತರಲಾದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಕೇವಲ ಗೌರವ ಸಂಭಾವನೆ ಪಡೆದು ಅಹರ್ನಿಷಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಎಲ್ಲಾ ರೀತಿಯ ಕಾನೂನು ಬದ್ಧ ಸೇವಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅವರ ದುಡಿಮೆಗೆ ತಕ್ಕ ವೇತನವನ್ನು ನಿಗದಿಗೊಳಿಸದೆ ಕೇವಲ ಗೌರವ ಧನವನ್ನಷ್ಟೆ ನೀಡಿ ದೀರ್ಘಕಾಲದವರೆಗೆ ದುಡಿಸಿಕೊಂಡು ಬರಲಾಗಿದೆ. ಆದುದರಿಂದ ಈ ಕೆಳಗಿನ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬೇಡಿಕೆಗಳು

  1. ಸುಪ್ರೀಂಕೋರ್ಟಿನ ಆದೇಶದಂತೆ ಅಂಗನವಾಡಿ ಉದ್ಯೋಗಿಗಳು ಪೂರ್ಣಕಾಲಿಕೆ ಸ್ಥಿರ ಉದ್ಯೋಗಿಗಳಾಗಿದ್ದು, ಅವರು ಗ್ರಾಚ್ಯುಟಿ ಪಡೆಯುವ ಹಕ್ಕನ್ನು ಹೊಂದಿದ್ದಾರೆ. ಆದುದರಿಂದ ಕೇಂದ್ರ ಸರ್ಕಾರ ಅಂಗನವಾಡಿ ನೌರರರ ಸೇವೆಯನ್ನು ಕೇವಲ ಗೌರವ ಸೇವೆಯಾಗಿ ಪರಿಗಣಿಸದೆ ಅವರನ್ನು ಖಾಯಂ ಉದ್ಯೋಗಿಯಾಗಿ ಮಾನ್ಯತೆ ನೀಡುವ ಮೂಲಕ ಅವರನ್ನು ಸಿ ಮತ್ತು ಡಿ ದರ್ಜೆಯ ನೌಕರರನ್ನಾಗಿ ಖಾಯಂಗೊಳಿಸಬೇಕು.
  1. ಕನಿಷ್ಠ ವೇತನ: ಅಂಗನವಾಡಿ ನೌಕರರಿಗೆ ವೇತನ ನೀಡದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಭಾಗಿತ್ವದ ಅನುಪಾತದಲ್ಲಿ ಕೇವಲ ಗೌರವ ಧನ ನೀಡಿ ದುಡಿಸಿಕೊಳ್ಳಲಾಗುತ್ತಿದೆ. ಇವರಿಗೆ ನೀಡುತ್ತಿರುವ ಗೌರವ ಸಂಭಾವನೆಯನ್ನು ಕನಿಷ್ಠವೇತನ ಕಾಯಿದೆಯ ವ್ಯಾಪ್ತಿಗೊಳಪಡಿಸಿ ಕನಿಷ್ಠವೇತನ ನೀಡಲು ಕ್ರಮವಹಿಸಬೇಕು.
  1. ಗ್ರಾಚ್ಯುಟಿ- ನಿವೃತ್ತಿ ವೇತನ ಜಾರಿಗೊಳಿಸಿ : ಸುಪ್ರೀಂಕೋರ್ಟಿನ ಆದೇಶದಂತೆ ಅಂಗನವಾಡಿ ಸೇವೆಗೆ ಸೇರಿ ನಿವೃತ್ತೃರಾಗಿರುವವರೆಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ಒದ ಗಿಸಲು ಕ್ರಮ ಕೈಗೊಳ್ಲಬೇಕು ಹಾಗೂ ನಿವೃತ್ತಿಯ ನಂತರ ಮಾಸಿಕ ನಿವೃತ್ತಿ ವೇತನ ನೀಡಲು ಪೆನ್ಸನ್ ಯೋಜನೆಯನ್ನು ಜಾರಿಗೊಳಿಸಿ ಅದರ ಪ್ರಯೋಜನ ಪಡೆಯಲು ಅಗತ್ಯವಾದ ಕ್ರಮಗಳನ್ನು ಜಾರಿಗೊಳಿಸಬೇಕು.
  1. ಆರೋಗ್ಯ–ವಿಮಾಯೋಜನೆ: ಅಂಗನವಾಡಿ ನೌಕರರಿಗೆ ಆರೋಗ್ಯ ಸಮಸ್ಯೆಗಳು ಎದುರಾದಾಗ ಅವರ ಚಿಕಿತ್ಸೆಗೆ ಎಲ್ಲಾ ಆಸ್ಪತ್ರೆಗಳಲ್ಲೂ ಸೇವೆ ಪಡೆಯಲು ಅವಕಾಶ ಒದಗಿಸಬೇಕು. ಹಾಗೂ ಆರೋಗ್ಯ ವಿಮೆಯನ್ನು ಜಾರಿಗೊಳಿಸಿ ಅದರ ಪ್ರಯೋಜನ ಪಡೆಯಲು ಅಗತ್ಯವಾದ ಕ್ರಮಗಳನ್ನು ಜಾರಿಗೊಳಿಸಬೇಕು.
  1. ಅಂಗನವಾಡಿ ಸೇವೆಗಳನ್ನು ಹೊರತುಪಡಿಸಿ ಬೇರಾವುದೇ ಕೆಲಸ ಕಾರ್ಯಗಳಿಗೆ ಅಂಗನವಾಡಿ ನೌಕರರನ್ನು ನಿಯೋಜಿಸದೆ ICDS ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಮವಹಿಸಬೇಕು.
  1. ಅಂಗನವಾಡಿ ಫಲಾನುಭವಿಗಳಿಗೆ ಒದಗಿಲಾಗುವ (ಪೌಷ್ಟಿಕ ಆಹಾರ-ಆರೋಗ್ಯ) ಸೌಲಭ್ಯಗಳನ್ನು ನೀಡಲು ಜಾರಿಗೊಳಿಸಲಾಗಿರುವ FRS ಪದ್ದತಿಯನ್ನು ಕೈಬಿಡಬೇಕು.

ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆಗೆ ಆದ್ಯತೆ ನೀಡಬೇಕು.

  1. ಅಂಗನವಾಡಿ ಕೇಂದ್ರಗಳನ್ನು ದತ್ತು ಪಡೆಯುವಂತೆ UGC ಹೊರಡಿಸಿರುವ ಆದೇಶ ವಾಪಸ್ಸಾಗಲಿ : ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ (UGC) ವು ಭಾರತದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ತಲಾ ಐದಾರು ಅಂಗನವಾಡಿ

ಕೇಂದ್ರಗಳನ್ನು ದತ್ತು ಪಡೆಯಬೇಕೆಂದು ಆದೇಶಿಸಿರುವುದು ಅಂಗನವಾಡಿಗಳ ಮೂಲಭೂತ ಉದ್ದೇಶವನ್ನು ಬುಡಮೇಲುಗೊಳಿಸುವಂತಹ ಕ್ರಮವಾಗಿದೆ.

ಅಂಗನವಾಡಿ ಕೇಂದ್ರಗಳ ಮೂಲಕ ದೇಶದ ಮಕ್ಕಳು ಮತ್ತು ಬಾಣಂತಿ, ಗರ್ಬಿಣಿಯರಲ್ಲಿ ಅಪೌಷ್ಟಿಕತೆ, ರಕ್ತ ಹೀನತೆಯಿಂತಹ ಸಮಸ್ಯೆಗಳನ್ನು ನಿವಾರಿಸಿ ಪೂರಕ ಪೌಷ್ಟಿಕಾಂಶ ಮತ್ತು ಆರೋಗ್ಯದ ಕಾಳಜಿವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರನ್ನು ಖಾಯಂಗೊಳಿಸಿ ಅವರನ್ನು ಸಶಕ್ತಗೊಳಿಸುವ ಬದಲು ದತ್ತು ನೀಡುವ ಕ್ರಮವು ಸರ್ಕಾರ ಅಂಗನವಾಡಿ ವ್ಯವಸ್ಥೆಯನ್ನು ಬಲಗೊಳಿಸುವ ಜವಾಬ್ದಾಯಿಂದ ನುಣುಚಿಕೊಳ್ಳುವ ನಡವಳಿಕೆಯಾಗಿದೆ. ಆದ್ದರಿಂದ ಈ ಕುರಿತಾದ UGC ಆದೇಶ ವಾಪಸ್ಸು ಪಡೆಯಬೇಕು ಹಾಗೂ ಅಂಗನವಾಡಿ ಕೇಂದ್ರಗಳನ್ನು ಸಬಲೀಕರಣಗೊಳಿಸಲು ಕೇಂದ್ರ ಸರ್ಕಾರ ಆರ್ಥಿಕ ವ್ಯವಸ್ಥೆಯನ್ನು ಒದಗಿಸುವುದು ಅಗತ್ಯವಾಗಿದೆ. ಆದುದರಿಂದ ಅಂಗನವಾಡಿ ಕೇಂದ್ರಗಳ ನಿರ್ವಹಣೆಗಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಅಮ್ಜದ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಜಿಲ್ಲಾಧ್ಯಕ್ಷರು ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನುಸೂಯ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...