ಕಲ್ಯಾಣ ಕರ್ನಾಟಕಕ್ಕೆ ನೆರೆ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಿ: ಹೆಚ್ ಡಿ ಕುಮಾರಸ್ವಾಮಿ ಆಗ್ರಹ

Date:

ಬೆಂಗಳೂರಿನಲ್ಲಿ ಎಸಿ ರೂಂಗಳಲ್ಲಿ ಕೂತು ಕಾಲಹರಣ ಮಾಡುವುದಲ್ಲ, ಸೋಮಾರಿತನ ಬಿಟ್ಟು ಮೊದಲು ನೆರೆ ಸಂತ್ರಸ್ತರ ನೆರವಿಗೆ ಬನ್ನಿ. ತಕ್ಷಣವೇ ಕಲ್ಯಾಣ ಕರ್ನಾಟಕ್ಕೆ ನೆರೆ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

- Advertisement -

ನವದೆಹಲಿಯಲ್ಲಿ ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಕರೆದು ಮಾತನಾಡಿದ ಅವರು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕಲ್ಯಾಣ ಕರ್ನಾಟಕದಲ್ಲಿ ನೆರೆ ಸಂಕಷ್ಟದಲ್ಲಿ ಜನರಿದ್ದರೆ ರಾಜ್ಯದಲ್ಲಿರುವ ಸರಕಾರ ʼಕುಂಭಕರ್ಣ ನಿದ್ರೆʼಯಲ್ಲಿದೆ. ಮುಖ್ಯಮಂತ್ರಿ ಸೇರಿ ಸಂಪುಟದ 36 ಸಚಿವರಿಗೆ ಇವತ್ತು ಜ್ಞಾನೋದಯವಾಗಿದೆ. ಅಷ್ಟೂ ಸಚಿವರು ಇಲ್ಲಿವರೆಗೆ ಏನು ಮಾಡುತ್ತಿದ್ದರು? ಮಾಧ್ಯಮಗಳು ಮತ್ತು ಪ್ರತಿಪಕ್ಷಗಳಿಂದ ಸರಕಾರದ ವಿರುದ್ಧ ಟೀಕೆಗಳು ಶುರುವಾದ ಮೇಲೆ ಮುಖ್ಯಮಂತ್ರಿಗಳು ನೆರೆಪೀಡಿತ ಜಿಲ್ಲೆಗಳಿಗೆ ತೆರಳಿ ಏರಿಯಲ್‌ ಸರ್ವೇ ಮಾಡಿದ್ದಾರೆ. ಆದರೆ, ನೆರೆ ಪ್ರತಿ ವರ್ಷದ ಸಮಸ್ಯೆ. ಕಳೆದ 3 ತಿಂಗಳಿಂದ ಈ ಸರಕಾರ ಗಾಢ ನಿದ್ರೆಯಲ್ಲಿತ್ತು” ಎಂದು ಕಿಡಿಕಾರಿದರು.

ಸಿಎಂ ಹೇಳಿಕೆ ಬಗ್ಗೆ ನಿರಾಶೆ ಆಗಿದೆ

“ಪರಿಹಾರಕ್ಕೆ ಒತ್ತಾಯ ಮಾಡುತ್ತಿರುವ ಪ್ರತಿಪಕ್ಷಗಳ ಬಗ್ಗೆ ಮುಖ್ಯಮಂತ್ರಿ ನೀಡುತ್ತಿರುವ ಉತ್ತರ, ಹೇಳಿಕೆಗಳನ್ನು ನೋಡಿದರೆ ನಿರಾಶೆಯಾಗುತ್ತದೆ. ಪ್ರತಿಪಕ್ಷವನ್ನು ಬೈದರೆ ನೆರೆ ಸಂತ್ರಸ್ತರ ಸಮಸ್ಯೆ ನೀಗುತ್ತದೆಯೇ? ಅವರ ಹೇಳಿಕೆಗಳು ಅವರು ಅಲಂಕರಿಸುವ ಹುದ್ದೆಗೆ ತಕ್ಕುದಾಗಿಲ್ಲ. ಸಂಪುಟದಲ್ಲಿ 36 ಜನ ಮಂತ್ರಿಗಳಿದ್ದಾರೆ. ಅವರೆಲ್ಲರೂ ಎಲ್ಲಿ ಹೋಗಿದ್ದಾರೆ? ಎಸಿ ರೂಂಗಳಲ್ಲಿ ಕೂತು ಕಾಲಹರಣ ಮಾಡಿದ್ದು ಸಾಕು ಎಂದು ಗುಡುಗಿದ ಅವರು; ಮೊದಲು ಜಡತ್ವ ಬಿಟ್ಟು ಪ್ರತೀ ಜಿಲ್ಲೆಗೂ ಇಬ್ಬರು-ಮೂವರು ಮಂತ್ರಿಗಳನ್ನು ಕಳಿಸಿ. ವಿಶೇಷ ತಂಡಗಳನ್ನು ನಿಯೋಜಿಸಿ. ಸಚಿವರು ಕನಿಷ್ಠ 3 ದಿನ ಜಿಲ್ಲೆಗಳಲ್ಲಿಯೇ ಮೊಕ್ಕಾಂ ಹೂಡಲಿ. ಮೊದಲು ಜನರ ಬಳಿಗೆ ಹೋಗಿ ಅವರ ಕಷ್ಟಕ್ಕೆ ಮಿಡಿಯಲಿ” ಎಂದು ಒತ್ತಾಯಿಸಿದರು.

“ನನಗೆ ಆರೋಗ್ಯ ಸಮಸ್ಯೆ ಇಲ್ಲದೇ ಇದ್ದಿದ್ದರೆ ನೆರೆಪೀಡಿತ ಪ್ರದೇಶಗಳಲ್ಲಿ ಕನಿಷ್ಠ ಒಂದು ವಾರ ಕಾಳವಾದರೂ ಕ್ಯಾಂಪ್ ಮಾಡುತ್ತಿದ್ದೆ. ಇನ್ನೊಂದು ಕಡೆ 2 ದಿನಗಳ ಹಿಂದೆಯೇ ನಾನು ನೆರೆ ಪ್ರದೇಶಗಳಿಗೆ ಹೋಗಲು ಸಿದ್ದವಾಗಿದ್ದೆ. ಹವಾಮಾನ ಸರಿ ಇಲ್ಲದ ಕಾರಣ ಅಧಿಕಾರಿಗಳು ಬರಬೇಡಿ ಎಂದರು. ಪ್ರವಾಹ ಬಂದು ಎರಡುಮೂರು ದಿನಗಳು ಆದ ಮೇಲೆ ಮಂತ್ರಿಗಳು ಕಾಟಾಚಾರಕ್ಕೆ ಭೇಟಿ ನೀಡಿದ್ದಾರೆ. ಹೀಗೆ ಮಾಡಿದರೆ ಹೇಗೆ” ಎಂದು ಪ್ರಶ್ನೆ ಮಾಡಿದರು.

“ಪದೇ ಪದೆ ಕೇಂದ್ರ ಸರಕಾರದ ಜೊತೆ ಘರ್ಷಣೆ ಮಾಡಿಕೊಳ್ಳಬೇಡಿ. ಅದರಿಂದ ಉಪಯೋಗ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸ ಇಡಿ. ಸರಿಯಾದ ರೀತಿಯಲ್ಲಿ ಮನವಿ ಕೊಟ್ಟು ಪರಿಹಾರ ಕೇಳಿದರೆ ಕೇಂದ್ರದ ನೆರವು ಸಿಗುತ್ತದೆ. ಮೊದಲು ಒರಟು ಮಾತು ಬಿಡಿ. ಈವರೆಗೂ ರಾಜ್ಯದ ಒಬ್ಬ ಸಚಿವ ಅಥವಾ ಅಧಿಕಾರಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರನ್ನು ಭೇಟಿ ಮಾಡಿಲ್ಲ” ಎಂದು ಹರಿಹಾಯ್ದರು.

ಬೆಂಗಳೂರು ಪರಿಸ್ಥಿತಿ ನೋಡಿ

“ಬೆಂಗಳೂರು ನಗರದ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡುತ್ತಿದ್ದೀರಿ. ಬೆಂಗಳೂರು ಉಸ್ತುವಾರಿ ಸಚಿವರು ಭಾರೀ ಬಿಜಿ ಇದ್ದರು, ಹಾಗಾಗಿ ಅವರನ್ನು ಬಿಟ್ಟೇ ಸಿಎಂ ನಗರ ಪ್ರದಕ್ಷಿಣೆ ಮಾಡಿದರು. ಸಿಎಂ ಅವರು ಮುಚ್ಚಿದ ಗುಂಡಿ ನೋಡ್ಕೊಂಡು ಹೋಗುತ್ತಿದ್ದರೆ ಅವರ ಹಿಂದೆ ಹಾಕಿರುವ ಟಾರು ಕಿತ್ತುಕೊಂಡು ಹೋಗಿದೆ. ಗ್ಯಾರಂಟಿ ಸ್ಕೀಮ್ ಮಾಡಿ ಖಜಾನೆ ಖಾಲಿ ಅಂಥ ನಾನು ಹೇಳಲ್ಲ. ಜನರೂ ಕೇಳಿರಲಿಲ್ಲ. ಆದರೆ ದಸರಾ ಹೆಸರಲ್ಲಿ ಈಗ ಬಸ್ ಟಿಕೆಟ್ ಬೆಲೆ ಹೆಚ್ಚಳ ಮಾಡಿದೆ ಸರಕಾರ. ಖಾಸಗಿ ಬಸ್ಸುಗಳ ಜತೆ ಕೆಎಸ್‌ಆರ್‌ಟಿಸಿ ಕೂಡ ದರ ಏರಿಕೆಗೆ ಪೈಪೋಟಿಗೆ ಬಿದ್ದಿದೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...