ಕಲ್ಯಾಣ ಕರ್ನಾಟಕ | ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಘೋಷಣೆ

Date:

Advertisements

ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದೆ. ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ 51 ತಾಲೂಕುಗಳಲ್ಲಿ ಪ್ರತಿ ತಾಲೂಕಿಗೆ ಒಬ್ಬರಂತೆ ಫೆಲೋಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿದೆ.

ಸ್ಥಳೀಯ ಆಡಳಿತ ಹಾಗೂ ವಿಕೇಂದ್ರೀಕರಣ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ಈ ಫೆಲೋಶಿಪ್ ಸ್ಥಾಪಿಸಲಾಗಿದ್ದು, ಪಂಚಾಯತ್ ರಾಜ್ ಕ್ಷೇತ್ರದಲ್ಲಿ ನಿರಂತರ ಸಾಮಾಜಿಕ ಆರ್ಥಿಕ ಸಮಸ್ಯೆಗಳನ್ನು ನಿಭಾಯಿಸಲು ಸ್ಥಳೀಯ ಆಡಳಿತಕ್ಕೆ ಇವರು ನೆರವಾಗಲಿದ್ದಾರೆ.

ಹೊಸ ದೃಷ್ಟಿಕೋನಗಳು, ಆಲೋಚನೆಗಳು ಮತ್ತು ಚಿಂತನೆಗಳ ಮೂಲಕ ಸ್ಥಳೀಯ ಆಡಳಿತದಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿದ್ಯಾವಂತ, ತರಬೇತಿ ಪಡೆದ ಮತ್ತು ಪ್ರೇರಿತ ಯುವ ವೃತ್ತಿಪರರ ಕೌಶಲ್ಯತೆಯನ್ನು ಬಳಸಿಕೊಳ್ಳುವುದು ಫೆಲೋಶಿಪ್‌ ಆರಂಭಿಸಿರುವ ಪ್ರಮುಖ ಕಾರಣವಾಗಿದೆ.

Advertisements

kalyan scheme

ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಭಿವೃದ್ಧಿ ಚಟುವಟಿಕೆಗಳ ಅನುಷ್ಠಾನದಲ್ಲಿ ತೊಡಗಿಕೊಂಡು, ಸ್ಥಳೀಯ ಅಡಳಿತ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಕ್ಷೇತ್ರಮಟ್ಟದ ಸ್ಥಿತಿ-ಗತಿ ಮತ್ತು ಕಲಿಕೆಗಳ ಅಧ್ಯಯನ ಮಾಡುವುದನ್ನು ಪ್ರಮುಖ ಹೊಣೆಯಾಗಿ ಈ ಯುವ ಸಮೂಹ ಹೊರಲಿದ್ದಾರೆ. ಕಾರ್ಯಕ್ರಮದ ಅವಧಿ ಎರಡು ವರ್ಷಗಳಾಗಿದ್ದು, ಆಯ್ಕೆಯದ ಅಭ್ಯರ್ಥಿಗಳಿಗೆ ಮಾಸಿಕ 60,000 ರೂ. ಶಿಷ್ಯವೇತನವನ್ನು ಸರ್ಕಾರ ನೀಡಲಿದೆ.

ಫೆಲೋಗಳು ತಮ್ಮ ಚಟುವಟಿಕೆಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯತಿ ಕಾರ್ಯನಿರ್ವಹಣೆ ಶ್ರೇಣೀಕರಣದಲ್ಲಿ ಕೊನೆಯಲ್ಲಿರುವ 10 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ತಮ್ಮ ಚಟುವಟಿಕೆಗಳನ್ನು ಕೇಂದ್ರೀಕರಿಸಲಿದ್ದಾರೆ. ಅವಧಿ ಮುಗಿಯುವವರೆಗೆ ನಿಯುಕ್ತಿಗೊಳಿಸಲಾದ ತಾಲೂಕಿನಲ್ಲಿಯೇ ವಾಸ್ತವ್ಯ ಹೂಡಬೇಕಲ್ಲದೆ, ಗ್ರಾಮ ಪಂಚಾಯತಿಗಳಿಗೆ ನಿರಂತರವಾಗಿ ಪ್ರವಾಸ ಕೈಗೊಂಡು ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ ಎಂಬ ನಿಯಮವನ್ನು ಹಾಕಲಾಗಿದೆ.

“ನೈಜ ಸಮಾಜ ಸೇವೆಯಲ್ಲಿ ಆಸಕ್ತಿಯಿರುವ ಯುವಜನರು ಈ ಫೆಲೋಶಿಪ್‌ ಪ್ರಯೋಜನ ಪಡೆಯಬೇಕು” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X