ಹೆಚ್ಚುವರಿ ಪರಿಹಾರ ಕೋರಿ ಕೇಂದ್ರಕ್ಕೆ ಮತ್ತೊಂದು ಮನವಿ ಸಲ್ಲಿಸುತ್ತೇವೆ: ಕೃಷ್ಣಬೈರೇಗೌಡ

Date:

  • 22 ತಾಲೂಕುಗಳನ್ನು ಹೆಚ್ಚುವರಿ ಬರ ಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ
  • ‘ಹೆಚ್ಚುವರಿ 300 ರಿಂದ 350 ಕೋಟಿ ರೂ. ಬರ ಪರಿಹಾರ ಕೋರಲು ಅವಕಾಶ ಇದೆ’

ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಹಾಗೂ ಬೆಳೆ ಸಮೀಕ್ಷೆ ದೃಢೀಕರಣ ವರದಿ ಅನ್ವಯ ಹೆಚ್ಚುವರಿ 22 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವ ಬೆನ್ನಲ್ಲೇ ಈ ಸಂಬಂಧ ಹೆಚ್ಚುವರಿ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮುಂದಿನ ಸೋಮವಾರ ಮತ್ತೊಂದು ಮನವಿ ಪತ್ರ (ಮೆಮೊರಾಂಡಮ್) ಸಲ್ಲಿಸಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

- Advertisement -

ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ಮೊದಲ ಹಂತದಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿತ್ತು. ಆದರೆ, ಈ ವರ್ಷ ಇತಿಹಾಸ ಕಾಣದ ತೀವ್ರ ಬರ ಎದುರಾಗಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಮಳೆ ಕೊರತೆ ಎದುರಾಗಿದೆ. ಹೀಗಾಗಿ ಉಳಿದ ತಾಲೂಕುಗಳನ್ನೂ ಸಹ ‘ಬರ ಪೀಡಿತ’ ಎಂದು ಘೋಷಿಸುವಂತೆ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬರ ಘೋಷಣೆಯಿಂದ ಹೊರಗುಳಿದ 34 ತಾಲೂಕುಗಳ ಪೈಕಿ 22 ತಾಲೂಕುಗಳಲ್ಲಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಹಾಗೂ ಬೆಳೆ ಸಮೀಕ್ಷೆ ದೃಢೀಕರಣ (Ground Truthing) ನಡೆಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿತ್ತು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಇದೀಗ 22 ತಾಲೂಕುಗಳನ್ನೂ ಬರ ಪೀಡಿತ ಎಂದು ಘೋಷಿಸಲಾಗಿದ್ದು, ಈ ಪೈಕಿ 11 ತಾಲ್ಲೂಕುಗಳಲ್ಲಿ ‘ತೀವ್ರ ಬರ’ ಹಾಗೂ 11 ತಾಲೂಕುಗಳಲ್ಲಿ, ‘ಸಾಧಾರಣ ಬರ’ ಪೀಡಿತ ತಾಲ್ಲೂಕು ಎಂದು ಘೋಷಿಸುವ ಅರ್ಹತೆ ಪಡೆದಿರುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಲ್ಲದೆ, ಸೆಪ್ಟೆಂಬರ್ ಅಂತ್ಯದವರೆಗಿನ ಬೆಳೆ ಸಮೀಕ್ಷೆಯನ್ನಷ್ಟೇ ಪರಿಗಣಿಸುವುದಾದರೆ 22 ತಾಲೂಕುಗಳ ಪೈಕಿ 17 ತಾಲ್ಲೂಕುಗಳನ್ನು ‘ತೀವ್ರ ಬರಪೀಡಿತ’ ತಾಲ್ಲೂಕು ಎಂದು ಮತ್ತು ಉಳಿದ 5 ತಾಲೂಕನ್ನು ಸಾಧಾರಣ ಬರಪೀಡಿತ ಎಂದು ಗುರುತಿಸಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 236 ತಾಲೂಕುಗಳ ಪೈಕಿ 189 ತೀವ್ರ ಬರಪೀಡಿತ ಹಾಗೂ 27 ಸಾಧಾರಣಾ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದಂತಾಗಿದೆ” ಎಂದು ವಿವರಿಸಿದ್ದಾರೆ.

ಮನವಿ ಸಲ್ಲಿಸುವ ಹಕ್ಕು ರಾಜ್ಯಕ್ಕಿದೆ

“ರಾಜ್ಯದ ಮನವಿಗೆ ಸ್ಪಂದಿಸಿದ್ದ ಕೇಂದ್ರ ಸರ್ಕಾರ ಒಂದೇ ವಾರದ ಅವಧಿಯಲ್ಲಿ ಬರ ಪರಿಸ್ಥಿತಿಯ ವಾಸ್ತವ ಅಧ್ಯಯನಕ್ಕೆ ತಂಡವನ್ನೂ ಕಳುಹಿಸಿತ್ತು. ರಾಜ್ಯಕ್ಕೆ ಆಗಮಿಸಿದ್ದ ತಂಡ ಮೂರು ಭಾಗಗಳಾಗಿ ರಾಜ್ಯದ ವಿವಿಧ ಬರ ಪೀಡಿತ ಜಿಲ್ಲೆಗಳಿಗೆ ಮೂರು ದಿನಗಳ ಪ್ರವಾಸ ಕೈಗೊಂಡಿತ್ತು. ಬರ ಅಧ್ಯಯನದ ನಂತರ ಸಭೆ ನಡೆಸಿದ್ದ ಕೇಂದ್ರ ತಂಡ ರಾಜ್ಯದ ಮನವಿ ಪತ್ರ (ಮೆಮೊರಾಂಡಮ್) ವಾಸ್ತವದಿಂದಲೇ ಕೂಡಿದೆ ಎಂದು ಅಭಿಪ್ರಾಯ ಪಟ್ಟಿತ್ತು. ಅಲ್ಲದೆ, ಎರಡನೇ ಸುತ್ತಿನಲ್ಲಿ ಮತ್ತಷ್ಟು ತಾಲೂಕುಗಳನ್ನೂ ಸಹ ಬರ ಪೀಡಿತ ಪಟ್ಟಿಗೆ ಸೇರಿಸಿ ಮತ್ತೊಂದು ಮನವಿ ಪತ್ರ ಸಲ್ಲಿಸುವ ಹಕ್ಕು ರಾಜ್ಯಕ್ಕಿದೆ ಎಂದು ತಿಳಿಸಿತ್ತು” ಎಂದು ಸಚಿವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರವೇನೋ ಬದಲಾಯಿತು, ಕೋಮುವಾದಿಗಳ ಆಟಾಟೋಪಗಳಿಗೆ  ಅಂಕುಶ ಯಾವಾಗ?

“ಮನವಿ ಪತ್ರ (ಮೆಮೊರಾಂಡಮ್) ಸಿದ್ದಪಡಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಸೋಮವಾರ (ಅಕ್ಟೋಬರ್ 16) ಮನವಿ ಪತ್ರ ಸಲ್ಲಿಸಲಾಗುವುದು, ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಹೆಚ್ಚುವರಿ 300 ರಿಂದ 350 ಕೋಟಿ ರೂ. ಬರ ಪರಿಹಾರ ಕೋರಲು ಅವಕಾಶ ಇದೆ” ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಮೆಮೊರಾಂಡಮ್ ಜೊತೆಗೆ ಕೇಂದ್ರ ಸಚಿವರ ಭೇಟಿಗೂ ಮನವಿ

ಕೇಂದ್ರ ಗೃಹ ಸಚಿವರು ಹಾಗೂ ಕೃಷಿ ಸಚಿವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿ ಮನವಿ ಸಲ್ಲಿಸಲು ಈ ಹಿಂದೆಯೇ ಅವಕಾಶ ಕೇಳಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಕೇಂದ್ರಕ್ಕೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಕೋರಿದ್ದರು. ಆದರೆ, ಕೇಂದ್ರ ಸಚಿವರು ಈವರೆಗೆ ಭೇಟಿಗೆ ಅವಕಾಶ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರ ಸಲ್ಲಿಸಲಿರುವ ಎರಡನೇ ಮೆಮೊರಾಂಡಮ್ ನಲ್ಲಿ ಮತ್ತೊಮ್ಮೆ ಕೇಂದ್ರ ಗೃಹ ಮತ್ತು ಕೃಷಿ ಸಚಿವರ ಭೇಟಿಗೆ ಅವಕಾಶ ನೀಡುವಂತೆ ಕೋರಲಾಗುವುದು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ...

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ...

ಬಿಜೆಪಿ ಹೇಳಿದ ತಕ್ಷಣ ಇನ್ಸ್‌ಪೆಕ್ಟರ್ ಅಮಾನತು ಮಾಡೋಕಾಗಲ್ಲ: ಪ್ರಿಯಾಂಕ್ ಖರ್ಗೆ

ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ...