ಹನಿಟ್ರ್ಯಾಪ್ ಆರೋಪಿ, BJP ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌

Date:

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಮತ್ತು ಆಕೆಯ ಕುಟುಂಬಕ್ಕೆ ಬೆದರಿಕೆ ಹಾಕಿದ ಆರೋಪದಡಿ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

- Advertisement -

ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಬೆಂಗಳೂರಿನ ಯಶವಂತಪುರ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 72 ಮತ್ತು 351(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನಕ್ಕೆ 77 – ಈಡೇರದ ಕನಸು…..

ಸಂವಿಧಾನ ದಿನ ಒಂದು ಬಗೆಯ ಲಯವಿದೆ. ಅಂದು ಮುಂಜಾನೆಯಿಂದ ಇರುಳಿನವರೆಗೂ ಸಂವಿಧಾನದ್ದೇ ಸದ್ದು. ಅದರ ಮಹತ್ವ, ಅಗತ್ಯ, ಅನಿವಾರ್ಯತೆ, ಅನುಕೂಲತೆ ಬಗ್ಗೆ ಸ್ಮರಿಸಿಕೊಂಡು ಸಂಭ್ರಮಿಸುತ್ತೇವೆ. ಪ್ರಧಾನಿಯಿಂದ ಗ್ರಾಮ ಪಂಚಾಯಿತಿ ಸದಸ್ಯರವರೆಗೂ ಪ್ರಶ್ನಿಸಲು ಇರುವ "ಅಧಿಕಾರಭಾಗ್ಯ"...

ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ...

ನವೆಂಬರ್ 26ರ ಸಂವಿಧಾನ ದಿನಾಚರಣೆಯಿಂದ ನವೆಂಬರ್ 26, 2027ರವರೆಗೆ ಐಕ್ಯ ಹೋರಾಟ ಸಮಿತಿಯ ಒಂದು ವರ್ಷದ ಅಭಿಯಾನ; ಅಂಬೇಡ್ಕರ್ ಕನಸಿನ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಹೊಸ ಸಂಕಲ್ಪ ನಮಗೆ ಸ್ವಾತಂತ್ರ್ಯ ಬಂದು ಏಳು ದಶಕಗಳಿಗೂ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್...

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ ಸ್ವಾವಲಂಬನೆ, ಮಹಿಳೆಯರಿಗೆ ಉದ್ಯೋಗಾವಕಾಶ, ಗ್ರಾಮೀಣ ಜನರಿಗೆ ಬದುಕಿನ ಭದ್ರತೆ ಹಾಗೂ ದೇಶಕ್ಕೆ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ದೊರಕಿಸಿಕೊಟ್ಟ ದೂರದೃಷ್ಟಿಯ ನಾಯಕರು. ಭಾರತದ...

ಈ ಹಿಂದೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಹಿಳೆಯೇ ಇದೀಗ ಮತ್ತೊಂದು ದೂರು ನೀಡಿದ್ದಾರೆ.

“ನವೆಂಬರ್ 8ರಂದು ಯಶವಂತಪುರದ ಬಿ.ಕೆ. ನಗರದಲ್ಲಿ ನಡೆದ ಬಿಜೆಪಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುನಿರತ್ನ ತಮ್ಮ ಗುರುತು ಬಹಿರಂಗವಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಅಲ್ಲದೆ, ನವೆಂಬರ್ 14ರಂದು ಸುದ್ದಿವಾಹಿನಿಯೊಂದರಲ್ಲಿ ಪ್ರಸಾರವಾದ ವಿಡಿಯೋದಲ್ಲಿಯೂ ತಮ್ಮ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಲಾಗಿದೆ” ಎಂದು ಸಂತ್ರಸ್ತೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

“ತಮ್ಮ ಕುಟುಂಬದ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿ, ಬೆದರಿಕೆ ಹಾಕಿರುವುದಲ್ಲದೆ, ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿಯದಂತೆ ಒತ್ತಡ ಹೇರುವ ಪ್ರಯತ್ನ ನಡೆದಿದೆ” ಎಂದೂ ಅವರು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್ ಪಾರಾಗಲು ಸಾಧ್ಯವೇ?

ಅಂದಹಾಗೆ, ಈಗಾಗಲೇ ಮುನಿರತ್ನ ವಿರುದ್ಧ ಗುತ್ತಿಗೆದಾರರೊಬ್ಬರಿಗೆ ಬೆದರಿಕೆ, ಜಾತಿ ನಿಂದನೆ, ಲಂಚಕ್ಕೆ ಬೇಡಿಕೆ ಹಾಗೂ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಹಲವು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

2024ರ ಸೆಪ್ಟೆಂಬರ್‌ನಲ್ಲಿ, ಸಂತ್ರಸ್ತೆಯು (ಈಗ ಮತ್ತೊಂದು ದೂರು ನೀಡಿರುವ ಮಹಿಳೆ) ಮುನಿರತ್ನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಹಾಗೂ ರಾಜಕೀಯ ವಿರೋಧಿಗಳನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿದ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ (SIT) 2024ರ ಡಿಸೆಂಬರ್‌ನಲ್ಲಿ 2,481 ಪುಟಗಳ ಆರೋಪಪಟ್ಟಿ ಸಲ್ಲಿಸಿತ್ತು.

2025ರ ಮೇ ತಿಂಗಳಲ್ಲಿ ಮತ್ತೊಬ್ಬ ಮಹಿಳೆಯ ದೂರಿನ ಮೇರೆಗೆ ಮುನಿರತ್ನ ಮತ್ತು ಅವರ ಸಹಚರರ ವಿರುದ್ಧ ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಾಗಿತ್ತು. ಆದರೆ, ಆ ಪ್ರಕರಣದಲ್ಲಿ ಎಸ್‌ಐಟಿ ನಂತರ ಆರೋಪಗಳಿಗೆ ಸಾಕ್ಷ್ಯಾಧಾರಗಳಿಲ್ಲ ಎಂದು ಬಿ-ರಿಪೋರ್ಟ್ ಸಲ್ಲಿಸಿತ್ತು.

ಹನಿಟ್ರ್ಯಾಪ್ ಮತ್ತು ಕೊಲೆ ಸಂಚಿನ ಮತ್ತೊಂದು ಪ್ರಕರಣದಲ್ಲಿ ಎಸ್‌ಐಟಿ ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು 2026ರ ಮಾರ್ಚ್‌ನಲ್ಲಿ ನ್ಯಾಯಾಲಯ ತಿರಸ್ಕರಿಸಿದ್ದು, ಹೆಚ್ಚಿನ ತನಿಖೆಗೆ ಆದೇಶಿಸಿದೆ.

ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ ಆರೋಪದಡಿ ಮುನಿರತ್ನ ವಿರುದ್ಧ ಹೊಸ ಎಫ್‌ಐಆರ್ ದಾಖಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧನರಾಜ್ ಹತ್ಯೆ ಪ್ರಕರಣ: ಮೂವರು RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ; 16 ಮಂದಿ ಖುಲಾಸೆ!

2016ರಲ್ಲಿ ಪಯ್ಯನ್ನೂರಿನಲ್ಲಿ ನಡೆದ ಸಿಪಿಐ(ಎಂ) ಸ್ಥಳೀಯ ಮುಖಂಡ ಹಾಗೂ ಡಿವೈಎಫ್‌ಐ ನಾಯಕ...

ಸಂವಿಧಾನ ದಿನ | ಸಂವಿಧಾನದ ರಕ್ಷಣೆಗೆ ಗಾಂಧಿ, ಖರ್ಗೆ ಕರೆ; ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳ ಆಕ್ರೋಶ

ದೇಶಾದ್ಯಂತ ಸಂವಿಧಾನ ದಿನ ಅಚರಣೆ ನಡೆಯುತ್ತಿದೆ. ಮೋದಿ ಸರ್ಕಾರವು ಸಂವಿಧಾನವನ್ನು ತಿರುಚುವ...

ಒಬಿಸಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ವಿಪಕ್ಷಗಳ ಯತ್ನ: ಪ್ರಧಾನಿ ಮೋದಿ

ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು...

ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ ಐಕ್ಯತೆ ಬಲವಾಗಲಿ

ನವೆಂಬರ್ 26ರ ಸಂವಿಧಾನ ದಿನಾಚರಣೆಯಿಂದ ನವೆಂಬರ್ 26, 2027ರವರೆಗೆ ಐಕ್ಯ ಹೋರಾಟ...