ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

Date:

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವತಿಯಿಂದ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆಯಲಿರುವ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟವು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

- Advertisement -

ಈ ಸಂದರ್ಭದಲ್ಲೇ, ದೆಹಲಿಯ ಪೊಲೀಸರು, ಕೇಂದ್ರ ಸರಕಾರ ಪ್ರಜಾಪ್ರಭುತ್ವದ ಆಶಯಗಳಲ್ಲಿ ಒಂದಾಗಿರುವ ಹೋರಾಟ ನಡೆಸುವ, ಪ್ರತಿಭಟಿಸುವ ಪ್ರಜಾಸತ್ತಾತ್ಮಕ ಹಕ್ಕಿನ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ಕರ್ನಾಟಕ ಸಹಿಸುವುದಿಲ್ಲ ಎಂದು ಒಕ್ಕೂಟ ಎಚ್ಚರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂಬುದು ಒಕ್ಕೂಟವು ಆಗ್ರಹಿಸಿದೆ.

ಇದನ್ನೂ ಓದಿ: ‘ಸರ್ವಾಧಿಕಾರಿ SIR ಪ್ರಕ್ರಿಯೆ’ಯನ್ನು ತಿರಸ್ಕರಿಸಲು ಎಸ್‌ಐಆರ್ ವಿರೋಧಿ ಒಕ್ಕೂಟ ತೀರ್ಮಾನ

ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಗರಿಕ ಸಂಘಟನೆಗಳು, ಪ್ರಜಾಸತ್ತಾತ್ಮಕ ಶಕ್ತಿಗಳು, ಯುವಜನರು ಮತ್ತು ಮತದಾರರ ಹಕ್ಕುಗಳ ಪರ ಹೋರಾಡುವ ಎಲ್ಲ ಸಂಘಟನೆಗಳು ರಾಜ್ಯದ ಎಲ್ಲ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಅ.10ರಂದು ಪಂಜಿನ ಮೆರವಣಿಗೆ, ಪ್ರತಿರೋಧ ಸಭೆಗಳನ್ನು ಆಯೋಜಿಸುವಂತೆ ಎಸ್‌ಐಆರ್ ವಿರೋಧಿ ಒಕ್ಕೂಟ ಕರೆ ನೀಡಿದೆ.

ಅಕ್ಟೋಬರ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ದಿಢೀರ್ ಹೋರಾಟಕ್ಕೆ ಸಹಕರಿಸಿದ ಎಲ್ಲ ನಾಗರಿಕ ಸಂಘಟನೆಗಳಿಗೆ ಮತ್ತು ವಿಶೇಷವಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಹೋರಾಟವನ್ನು ಯಶಸ್ವಿಗೊಳಿಸಿದ ಯುವಜನರಿಗೆ ಒಕ್ಕೂಟ ಧನ್ಯವಾದ ಸಲ್ಲಿಸಿದೆ. ಎಸ್‌ಐಆರ್‌ನಿಂದ ಉಂಟಾಗಿರುವ ಸಮಸ್ಯೆಗಳ ವಿರುದ್ಧ ಯುವಜನರು ತೋರಿದ ಸ್ಪಂದನೆ ಮತ್ತು ಉತ್ಸಾಹವು ಮತದಾನದ ಹಕ್ಕಿನ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಹೊಸ ಬಲವನ್ನು ನೀಡಿದೆ ಎಂದಿದೆ.

ನಿನ್ನೆಯ ಹೋರಾಟದಲ್ಲಿ ನೂರಾರು ಎಸ್‌ಐಆರ್ ಸಂತ್ರಸ್ತರು ಭಾಗವಹಿಸಿದ್ದರು. ಆದರೆ, ಹೋರಾಟ ಅನಿರೀಕ್ಷಿತವಾಗಿ ಆಯೋಜನೆಯಾದ ಕಾರಣ ಸಂತ್ರಸ್ತರನ್ನು ಸೂಕ್ತ ರೀತಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಒಕ್ಕೂಟ ವಿಷಾದ ವ್ಯಕ್ತಪಡಿಸುತ್ತದೆ. ಸಂತ್ರಸ್ತರ ಅನುಭವಗಳು, ಸಮಸ್ಯೆಗಳು ಮತ್ತು ಅವರ ನ್ಯಾಯದ ಬೇಡಿಕೆಗಳಿಗೆ ಹೋರಾಟದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯಬೇಕೆಂಬುದು ಒಕ್ಕೂಟದ ಆಶಯ ಎಂದೂ ಈ ವೇಳೆ ತಿಳಿಸಿದೆ.

ಇದೇ ಆಶಯದೊಂದಿಗೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮವನ್ನು ರಾಷ್ಟ್ರಮಟ್ಟದಲ್ಲಿ ಅಕ್ಟೋಬರ್ 15ರಂದು ದೆಹಲಿಯಲ್ಲಿ ಆಯೋಜಿಸಲಾಗುತ್ತಿದೆ. ರಾಜ್ಯದಲ್ಲಿ ಎಸ್‌ಐಆರ್‌ನಿಂದ ತೊಂದರೆಗೊಳಗಾಗಿರುವ ಎಲ್ಲ ಸಂತ್ರಸ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂತ್ರಸ್ತರು ತಮ್ಮ ಅನುಭವಗಳನ್ನು ರಾಷ್ಟ್ರಮಟ್ಟದಲ್ಲಿ ಹಂಚಿಕೊಳ್ಳುವ ಮೂಲಕ ಮತದಾರರ ಹಕ್ಕುಗಳ ರಕ್ಷಣೆಯ ಹೋರಾಟವನ್ನು ಬಲಪಡಿಸಬೇಕು ಎಂದು ಹೇಳಿದೆ.

ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಆಧಾರವಾಗಿದೆ. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಚುನಾವಣಾ ವ್ಯವಸ್ಥೆಯ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಎಸ್‌ಐಆರ್ ಪ್ರಕ್ರಿಯೆಯಿಂದ ಉಂಟಾಗಿರುವ ಸಮಸ್ಯೆಗಳಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಎಂದು ಆಗ್ರಹಿಸಿದೆ.

ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ನಡೆಯುವ ಹೋರಾಟವನ್ನು ಹತ್ತಿಕ್ಕುವ ಯಾವ ನಡೆಯನ್ನು ನಾವು ಸಹಿಸುವುದಿಲ್ಲ. ಎಸ್‌ಐಆರ್ ಸಂಪೂರ್ಣ ರದ್ದಾಗುವವರೆಗೆ, ಮತದಾನದ ಹಕ್ಕು ರಕ್ಷಿಸಲ್ಪಡುವವರೆಗೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ನ್ಯಾಯ ದೊರೆಯುವವರೆಗೆ ನಮ್ಮ ಪ್ರತಿರೋಧ ಮುಂದುವರಿಯಲಿದೆ ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜಿಪಂ, ತಾಪಂ ಮೀಸಲಾತಿ ಕರಡು ಪಟ್ಟಿ ಬಿಡುಗಡೆ; ಆಕ್ಷೇಪಣೆ ಸಲ್ಲಿಸಲು ಅ. 19 ಕೊನೆಯ ದಿನಾಂಕ

ಶಿವಮೊಗ್ಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣಾ ಕ್ಷೇತ್ರಗಳ ಮೀಸಲಾಟ ಕರಡು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಜಂತರ್‌ ಮಂತರ್‌ನಲ್ಲಿ ವರದಿಗಾರರಿಗೂ ಪೊಲೀಸರ ನಿರ್ಬಂಧ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಮೊಳೆಗಳು, ಬ್ಯಾರಿಕೇಡ್‌ಗಳು ಹಾಗೂ...

ಸಿಜೆಪಿ ಪ್ರತಿಭಟನೆ| ದೆಹಲಿಯಲ್ಲಿ ವಿಮಾನದೊಳಗೇ ದೀಪ್ಕೆ, ದಾಸ್, ರಾಂಕಾ ಬಂಧನ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...