ಶಿವಮೊಗ್ಗ ಗಲಾಟೆ | ಧಾರ್ಮಿಕ ಕಾರ್ಯಕ್ರಮಕ್ಕೆ ಯಾರೇ ಧಕ್ಕೆ ತಂದರೂ ಸಹಿಸಲ್ಲ: ಸಿದ್ದರಾಮಯ್ಯ

Date:

Advertisements
  • ‘ಕಲ್ಲೆಸೆಯುವುದು, ಧಕ್ಕೆ ಮಾಡುವುದು ಕಾನೂನುಬಾಹಿರ’
  • ’40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ’

ಇನ್ನೊಬ್ಬರ ಧಾರ್ಮಿಕ ಕಾರ್ಯಕ್ರಮಕ್ಕೆ ಬೇರೆಯವರು ಕಲ್ಲೆಸೆಯುವುದು, ಧಕ್ಕೆ ಮಾಡುವುದು ಕಾನೂನುಬಾಹಿರ. ಇಂತಹ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಶಿವಮೊಗ್ಗ ಹೊರವಲಯದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯುವ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಅಲ್ಲಿದ್ದ ಪೊಲೀಸರ ಮೇಲೂ ಕಲ್ಲು ಎಸೆಯಲಾಗಿದೆ. ಪೊಲೀಸರು ಅನಿವಾರ್ಯವಾಗಿ ಅಲ್ಲಿ ಲಾಠಿ ಚಾರ್ಜ್ ಮಾಡಿದ್ದಾರೆ” ಎಂದರು.

“ಗಲಾಟೆಗೆ ಕಾರಣರಾದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಈಗ ಸಂಪೂರ್ಣ ನಿಯಂತ್ರಣದಲ್ಲಿದೆ. ಪೊಲೀಸರು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ” ಎಂದು ತಿಳಿಸಿದರು.

Advertisements

ಕಾರಣ ಬಹಿರಂಗಪಡಿಸಲ್ಲ: ಪರಮೇಶ್ವರ

ಗೃಹ ಸಚಿವ ಜಿ. ಪರಮೇಶ್ವರ್ ಈ ಬಗ್ಗೆ ಪ್ರತಿಕ್ರಿಯಿಸಿ, “ಶಿವಮೊಗ್ಗದಲ್ಲಿ ದೊಡ್ಡ ಪ್ರಮಾಣದ ಗಲಾಟೆಯನ್ನು ಪೊಲೀಸರು ತಪ್ಪಿಸಿದ್ದಾರೆ. ಗಲಾಟೆಗೆ ಕಾರಣರಾದ ಎರಡೂ ಗುಂಪಿನ ಜನರನ್ನು ನಮ್ಮ ಪೊಲೀಸರು ಬಂಧಿಸಿದ್ದಾರೆ” ಎಂದರು.

“ಘಟನೆ ಕುರಿತು ಹೇಳಿಕೆ ಕೊಡುವವರು ಕೊಡುತ್ತಾರೆ. ನಾವು ಮೊದಲೇ ಕಟ್ಟೆಚ್ಚರ ವಹಿಸಿದ್ದೆವು. ಶಿವಮೊಗ್ಗದ ಘಟನೆಗೆ ಕಾರಣ ಏನು ಎಂದು ಬಹಿರಂಗಗೊಳಿಸಲು ಸಾಧ್ಯವಿಲ್ಲ. ಘಟನೆ ಸುತ್ತ ನಮಗೆ ಮಾಹಿತಿ ಗೊತ್ತಿದೆ” ಎಂದು ಹೇಳಿದರು.

”ಗಲಾಟೆಯಲ್ಲಿ ಕತ್ತಿ ಬಳಕೆ ಮಾಡಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ, ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟ ಮಾಡಿರುವ ಮಾಹಿತಿ ಇದೆ. ಶಿವಮೊಗ್ಗ ಘಟನೆಗೆ ಯಾರನ್ನೂ ಹೊರಗಿನಿಂದ ಬರಲು ಬಿಟ್ಟಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಬಗರ್‌ ಹುಕುಂ ಸಮಸ್ಯೆ ಬಗೆಹರಿಸಿದರಷ್ಟೇ ಅರಣ್ಯ ಒತ್ತುವರಿ ತೆರವು ಸಲೀಸು

ಸ್ವಾರ್ಥಕ್ಕೆ ಗಲಾಟೆ: ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ ಕೂಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, “ರಾಗಿಗುಡ್ಡದಲ್ಲಿ ಮಾತ್ರ ಗೊಂದಲ ಆಗಿದೆ. ಉಳಿದ ಕಡೆ ಯಾವುದೇ ಗಲಾಟೆ ಆಗಿಲ್ಲ. ಯಾವುದೋ ಸ್ವಾರ್ಥಕ್ಕೆ ಗಲಾಟೆ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.

“ಶಿವಮೊಗ್ಗದಲ್ಲಿ ಈದ್ ಮಿಲಾದ್, ಗಣೇಶ ವಿಸರ್ಜನೆ ಎರಡೂ ಒಟ್ಟಿಗೆ ಬಂದಿತ್ತು. ನಾವು ಎರಡೂ ಕಡೆಯ ಮುಖಂಡರ ಸಭೆ ಮಾಡಿದ್ದೆವು. ಈದ್ ಮಿಲಾದ್ ಮೆರವಣಿಗೆ ಅ. 1ರಂದು ಮಾಡುತ್ತೇವೆ ಎಂದು ತಿಳಿಸಿದ್ದರು. ಯಾರೋ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. 12 ಜನರಿಗೆ ಚಿಕ್ಕಪುಟ್ಟ ಗಾಯಗಳಾಗಿದೆ” ಎಂದು ವಿವರಿಸಿದರು.

“ಟಿಪ್ಪು ಫೋಟೊ ಇರುವುದೇ ಘಟನೆಗೆ ಮೂಲ ಕಾರಣವೆಂದು ಹೇಳಲಾಗುತ್ತಿದೆ. ಅದಕ್ಕೆಲ್ಲ ಈಗ ಉತ್ತರ ಕೊಡಲು ಹೋಗುವುದಿಲ್ಲ. ಸ್ಥಳೀಯ ಶಾಸಕರಿಗೆ ಎಲ್ಲ ಮಾಹಿತಿ ಗೊತ್ತಾ? ಜವಾಬ್ದಾರಿ ಸ್ಥಾನದಲ್ಲಿ ಇರುವವರು ಏನೇನೋ ಮಾತನಾಡಬಾರದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X