SC-ST ಮೀಸಲಾತಿ ರಕ್ಷಣೆಗೆ ಸುಪ್ರೀಂಗೆ ಮೇಲ್ಮನವಿ, 9ನೇ ಅನುಸೂಚಿಗೆ ಸೇರ್ಪಡೆ ಅಗತ್ಯ: ನ್ಯಾ. ನಾಗಮೋಹನ್ ದಾಸ್

Date:

ಪ.ಜಾತಿ ಮತ್ತು ಪ.ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದರ ಜತೆಗೆ, ಹೆಚ್ಚುವರಿ ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಹಾಗೂ ಸಂವಿಧಾನ ತಿದ್ದುಪಡಿ ಮೂಲಕ ಕಾನೂನುಬದ್ಧ ರಕ್ಷಣೆ ಕಲ್ಪಿಸಲು ಸರಕಾರದ ಮೇಲೆ ಒತ್ತಡ ತರುವುದರ ಜೊತೆಗೆ ಸಂಘಟಿತ ಚಳವಳಿ ಅಗತ್ಯ ಎಂದು ನಿವೃತ್ತ ನ್ಯಾಯಮೂರ್ತಿ ಎಚ್. ಎನ್. ನಾಗಮೋಹನ್ ದಾಸ್ ಹೇಳಿದ್ದಾರೆ.

- Advertisement -

ಗುರುವಾರ ನಗರದ ಶಾಸಕರ ಭವನದಲ್ಲಿ ಜಾಗೃತ ಕರ್ನಾಟಕ, ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟ, ಹಿಂದುಳಿದ ವರ್ಗಗಳ ಒಕ್ಕೂಟ, ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ, ರಾಜ್ಯ ಪ.ಪಂಗಡ ಸಂಘಟನೆಗಳ ಒಕ್ಕೂಟದ ವತಿಯಿಂದ ‘ಶೇ.56ರಷ್ಟು ಮೀಸಲಾತಿ ತಡೆ-ಶೋಷಿತ ಸಮುದಾಯಗಳಿಗೆ ದೊಡ್ಡ ಅನ್ಯಾಯ’ ವಿಷಯದ ಕುರಿತು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಹೋರಾಟಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

2020ರ ಜುಲೈನಲ್ಲಿ ತಮ್ಮ ಆಯೋಗವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿ ಶಿಫಾರಸು ಮಾಡಿತ್ತು. ಸರಕಾರ ಶಿಫಾರಸನ್ನು ಒಪ್ಪಿ ಆದೇಶ ಹೊರಡಿಸಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಜಾರಿಗೊಳಿಸಿತ್ತು. ಆದರೆ, ಎರಡು ವರ್ಷಗಳ ಬಳಿಕ ಸರಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ಸಂವಿಧಾನ ಮತ್ತು ಸುಪ್ರೀಂಕೋರ್ಟ್ನ ಹಿಂದಿನ ತೀರ್ಪುಗಳ ಹಿನ್ನೆಲೆಯಲ್ಲಿ ಮೀಸಲಾತಿ ಹೆಚ್ಚಳದ ಆದೇಶವನ್ನು ರದ್ದುಪಡಿಸಿತು ಎಂದು ನಾಗಮೋಹನ್ ದಾಸ್ ವಿವರಿಸಿದರು.

ಇದನ್ನೂ ಓದಿ: ನ್ಯಾ. ನಾಗಮೋಹನ್ ದಾಸ್ ಅವರನ್ನು ಭೇಟಿ ಮಾಡಿದ ಒಳಮೀಸಲಾತಿ ಅನುಷ್ಠಾನ ಹೋರಾಟ ಸಮಿತಿ, ಬೇಡಿಕೆ ಈಡೇರಿಕೆಗೆ ಮನವಿ

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯೂಎಸ್) ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಸಂಬಂಧ ಸಂವಿಧಾನಕ್ಕೆ 103ನೇ ತಿದ್ದುಪಡಿ ತರಲಾಗಿದೆ. ಇದರಿಂದ ಶೇ.50ರ ಮೀಸಲಾತಿ ಮಿತಿ ದಾಟಿಯೂ ಅವಕಾಶ ಕಲ್ಪಿಸಿರುವುದನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದೇ ಮಾದರಿಯಲ್ಲಿ ಪ.ಜಾತಿ ಮತ್ತು ಪ.ಪಂಗಡಗಳಿಗೂ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ಕುರಿತು ಸರಕಾರ ಕ್ರಮ ಕೈಗೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ಇಡಬ್ಲ್ಯೂಎಸ್ ಮೀಸಲಾತಿಯಿಂದ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಿಂದ ಶೇ.59ಕ್ಕೆ ಏರಿಕೆಯಾಗಿದೆ. ಹೀಗಿರುವಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆ, ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆ ಹಾಗೂ ಆಡಳಿತದಲ್ಲಿ ಸಮರ್ಪಕ ಪ್ರಾತಿನಿಧ್ಯದ ಕೊರತೆಯನ್ನು ಪರಿಗಣಿಸಿ ಮೀಸಲಾತಿ ಹೆಚ್ಚಳಕ್ಕೆ ಅವಕಾಶ ಕಲ್ಪಿಸಬೇಕಿದೆ ಎಂದರು.

ಮೀಸಲಾತಿ ಪ್ರಮಾಣ ನಿಗದಿಗೆ ಜನಸಂಖ್ಯೆಯೊಂದನ್ನೇ ಮಾನದಂಡವನ್ನಾಗಿ ಪರಿಗಣಿಸಬಾರದು. ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಿಂದುಳಿದಿರುವಿಕೆ ಹಾಗೂ ಮಾನವ ಅಭಿವೃದ್ಧಿ ಸೂಚ್ಯಂಕಗಳನ್ನೂ ಪರಿಗಣಿಸಬೇಕು. ರಾಜ್ಯದ ಏಕೀಕರಣದ ಬಳಿಕ ವಿವಿಧ ಪ್ರದೇಶಗಳ ಸಮುದಾಯಗಳು ಪ.ಜಾತಿ ಮತ್ತು ಪ.ಪಂಗಡಗಳ ಪಟ್ಟಿಗೆ ಸೇರ್ಪಡೆಯಾದರೂ, ಅದಕ್ಕೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಳವಾಗಲಿಲ್ಲ. ಇದರಿಂದ ಜನಸಂಖ್ಯೆ ಹೆಚ್ಚಾದರೂ ಲಭ್ಯವಿರುವ ಅವಕಾಶಗಳನ್ನು ಹಂಚಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಯಿತು ಎಂದು ವಿವರಿಸಿದರು.

ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿನ ಪ್ರಾತಿನಿಧ್ಯದ ಅಂಕಿಅಂಶಗಳನ್ನು ಉಲ್ಲೇಖಿಸಿದ ಅವರು, ಕೆಳಹಂತದ ಹುದ್ದೆಗಳಲ್ಲಿ ಹೆಚ್ಚಿನ ಪ್ರಾತಿನಿಧ್ಯ ಕಂಡುಬಂದರೂ ಉನ್ನತ ಆಡಳಿತಾತ್ಮಕ ಹುದ್ದೆಗಳಲ್ಲಿ ಸಮುದಾಯಗಳ ಪ್ರಾತಿನಿಧ್ಯ ಕಡಿಮೆಯಿದೆ. ಈ ಅಸಮಾನತೆಯೂ ಮೀಸಲಾತಿ ಹೆಚ್ಚಳದ ಅಗತ್ಯವನ್ನು ಪ್ರತಿಪಾದಿಸುತ್ತದೆ ಎಂದು ನಾಗಮೋಹನ್ ದಾಸ್ ತಿಳಿಸಿದರು.

ಇದನ್ನೂ ಓದಿ: ಪರಿಶಿಷ್ಟರ ಒಳಮೀಸಲಾತಿ: ವರದಿ ಸಲ್ಲಿಸಿದ ನಿವೃತ್ತ ನ್ಯಾ.ನಾಗಮೋಹನ್‌ ದಾಸ್‌ ಆಯೋಗ

ನೇಮಕಾತಿ ಅಭ್ಯರ್ಥಿಗಳ ಅತಂತ್ರ ಸ್ಥಿತಿಗೆ ಪರಿಹಾರವೇನು?

ಶೇ.56ರಷ್ಟು ಮೀಸಲಾತಿ ಆಧಾರದಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಹೈಕೋರ್ಟ್ ತೀರ್ಪಿನ ಬಳಿಕ ನೇಮಕಾತಿ ಆದೇಶ ಮತ್ತು ಉದ್ಯೋಗವಿಲ್ಲದೆ ಅತಂತ್ರರಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ನಿಂದ ತಡೆಯಾಜ್ಞೆ ದೊರೆಯದ ಹೊರತು ಸರಕಾರ ನೇಮಕಾತಿ ಆದೇಶ ನೀಡಲು ಕಾನೂನಾತ್ಮಕ ಅಡಚಣೆ ಎದುರಾಗಬಹುದು. ಹೀಗಾಗಿ ಸರಕಾರ ತಕ್ಷಣ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಚಳವಳಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಬೇಕೇ ಅಥವಾ ಸಂಘಟನಾತ್ಮಕವಾಗಿ ಹೋರಾಟ ನಡೆಸಬೇಕೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯದಿಂದ ಹೊರತಾದ ಕ್ಷೇತ್ರ ಯಾವುದೂ ಇಲ್ಲ. ಹೋರಾಟದ ಕಾರ್ಯತಂತ್ರವನ್ನು ಸಂಘಟನೆಗಳೇ ರೂಪಿಸಿಕೊಳ್ಳಬೇಕು. ತಮ್ಮ ಪಾತ್ರ ಕಾನೂನು ವಿಚಾರಗಳು ಮತ್ತು ಆಯೋಗದ ವರದಿಯಲ್ಲಿನ ಅಂಶಗಳ ಕುರಿತು ಸ್ಪಷ್ಟನೆ ನೀಡುವುದಕ್ಕೆ ಸೀಮಿತವಾಗಿದೆ. ಹೋರಾಟವನ್ನು ಸಂಘಟಿಸುವ ಜವಾಬ್ದಾರಿ ಮುಖಂಡರು ಮತ್ತು ಕಾರ್ಯಕರ್ತರ ಮೇಲಿದೆ ಎಂದು ಹೇಳಿದರು.

ಸಭೆಯಲ್ಲಿ ಒಳಮೀಸಲಾತಿ ಹೋರಾಟಗಾರರಾದ ಬಸವರಾಜ್ ಕೌತಾಳ್, ಅಂಬಣ್ಣ ಅರೋಲಿಕರ್, ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಮುಹಮ್ಮದ್ ಯಾಸಿನ್ ಮಲ್ಪೆ, ಜಾಗೃತ ಕರ್ನಾಟಕ ಮುಖಂಡರಾದ ಮುತ್ತುರಾಜು, ಅನಿಲ್ ಕುಮಾರ್, ವಿನೋದ್ ಕುಮಾರ್, ಕೃಷ್ಣ, ಆದಂ ಖಾನ್, ಶ್ರೀಧರ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರು, ಹೋರಾಟಗಾರರು ಸೇರಿದಂತೆ ಹಲವರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು...

ಬೀದರ್‌ | ಜನಗಣತಿಯಲ್ಲಿ ನಿಖರ ದತ್ತಾಂಶ ಸಂಗ್ರಹಿಸಿ : ಅಪರ ಜಿಲ್ಲಾಧಿಕಾರಿ ಸುರೇಖಾ

2027ರ ಜನಗಣತಿಯಲ್ಲಿ ಯಾವುದೇ ಮನೆ ಅಥವಾ ವ್ಯಕ್ತಿ ಹೊರಗುಳಿಯದಂತೆ ಅಧಿಕಾರಿಗಳು ಮತ್ತು...

ಪ್ರತಿ ರೈತನಿಗೆ ಬರ ಪರಿಹಾರವಾಗಿ ಗರಿಷ್ಠ 5000 ರೂ. ನೀಡಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

“ದಸರಾ ಮುಗಿದು ದೀಪಾವಳಿ ಬಂದಿದೆ. ರೈತರು ಬಿಕ್ಕಟ್ಟಿನಲ್ಲಿದ್ದಾರೆ. ಅವರ ಬದುಕಿಗೆ ಬೆಳಕು...

ಟ್ರಂಪ್‌ ಪಕ್ಷದ ಹೀನಾಯ ಸೋಲಿನ ಹಿಂದಿವೆ ಈ 5 ಕಾರಣಗಳು

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟರು ಜಯ ಗಳಿಸಿದ್ದಾರೆ. ಅಮೆರಿಕದ ಸಂಸತ್ತು ಎನಿಸಿರುವ...