ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿ ಇರುವ ‘ಗ್ರೂಪ್-ಸಿ’ ಕ್ಲರ್ಕ್-ಕಮ್-ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿಶೇಷವಾಗಿ, ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ನಡೆಸುವುದಿಲ್ಲ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ಟೈಪಿಂಗ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಒಟ್ಟು 26 ಕ್ಲರ್ಕ್-ಕಮ್-ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಉಳಿಕೆ ಮೂಲ ವೃಂದ (RPC): 25 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ (KKR): 1 ಹುದ್ದೆ ಎಂದು ವರ್ಗೀಕರಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ, ಕನ್ನಡ ಮತ್ತು ಇಂಗ್ಲಿಷ್ ಜೂನಿಯರ್ ಗ್ರೇಡ್ ಟೈಪಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಎಂದು ಹೇಳಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ವಯಸ್ಸಿನವರಾಗಿರಬೇಕು ಎಂದು ವಯಸ್ಸು ನಿಗದಿಪಡಿಸಲಾಗಿದೆ.
ಸರ್ಕಾರದ ಮೀಸಲಾತಿ ನಿಯಮಗಳಂತೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಎಸ್ಸಿ, ಎಸ್ಟಿ ಮತ್ತು ಪ್ರವರ್ಗ-1ಕ್ಕೆ 5 ವರ್ಷ ಮತ್ತು 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇರಲಿದೆ.
ಅರ್ಜಿ ಶುಲ್ಕವು; ಸಾಮಾನ್ಯ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 250 ರೂ. ಮತ್ತು ಎಸ್ಸಿ, ಎಸ್ಟಿ, ಪ್ರವರ್ಗ-1, ಮಾಜಿ ಸೈನಿಕರು, ತೃತೀಯಲಿಂಗಿಗಳು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 34,100 ರಿಂದ 67,600 ರೂ. ವೇತನ ಶ್ರೇಣಿ ದೊರೆಯಲಿದೆ.
ಅರ್ಜಿ ಸಲ್ಲಿಕೆ ಆರಂಭ: ಜುಲೈ 17, 2026
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 17, 2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಆಗಸ್ಟ್ 18, 2026





