ಪ್ರಾಧ್ಯಾಪಕರ ನೇಮಕಾತಿ | ಡಿಸೆಂಬರ್ ಅಂತ್ಯದೊಳಗೆ ಆದೇಶ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್

Date:

  • 2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ
  • ವಾರದೊಳಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭ

2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಆರಂಭಿಸಿ, ಡಿಸೆಂಬರ್ ಅಂತ್ಯದೊಳಗೆ ಆದೇಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಹೇಳಿದರು.

ಗುರುವಾರ ನಗರದ ಸಚಿವರ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ 150ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಬಳಗದ ವತಿಯಿಂದ ಮನವಿ ಮಾಡಿದ ಸಂದರ್ಭದಲ್ಲಿ ಅಭ್ಯರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಕೆಎಟಿಯಿಂದ ತೀರ್ಪು ಪ್ರಕಟವಾಗಿದೆ. ಸರ್ಕಾರದ ಸುತ್ತೋಲೆಯ ಪರವಾಗಿ ಜಯವಾಗಿದೆ. ತೀರ್ಪನ್ನು ಸ್ವಾಗತಿಸುತ್ತೇನೆ. ಇನ್ನು ಸಿಸಿಬಿ ವರದಿಯ ಪರಿಶೀಲನೆಗಾಗಿ ನೇಮಿಸಿದ ತ್ರಿಸದಸ್ಯ ಸಮಿತಿಯಿಂದ 6 ದಿನಗಳ ಒಳಗೆ ವರದಿಯನ್ನು ಪಡೆದು, ಕೂಡಲೇ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ಅಭ್ಯರ್ಥಿಗಳು ಆತಂಕ ಪಡಬೇಡಿ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2021ರ ಕುರಿತಾಗಿ ಮಾನ್ಯ ಕರ್ನಾಟಕ ಆಡಳಿತ ನ್ಯಾಯಾಧಿಕರಣವು 01-02-2023ರ ಕಲ್ಯಾಣ ಕರ್ನಾಟಕ ಮೀಸಲಾತಿ ಕುರಿತ ಕರ್ನಾಟಕ ಸರ್ಕಾರದ ಮಧ್ಯಂತರ ಸುತ್ತೋಲೆಯನ್ನು ಎತ್ತಿ ಹಿಡಿದು ಸದರಿ ನೇಮಕಾತಿಯ ವ್ಯಾಜ್ಯವನ್ನು ಬಗೆಹರಿಸಿ ತೀರ್ಪು ಪ್ರಕಟಿಸಿದೆ. ನೇಮಕಾತಿಗೆ ಮುಂದೆ ಯಾವುದೇ ಕಾನೂನಾತ್ಮಕ ತೊಡಕುಗಳು ಎದುರಾಗದಂತೆ ದಯವಿಟ್ಟು ಸರ್ಕಾರದ ಕಡೆಯಿಂದಲೇ ಗೌರವಾನ್ವಿತ ಉಚ್ಚ ನ್ಯಾಯಾಲಯಕ್ಕೆ ಕೇವಿಯಟ್ ಸಲ್ಲಿಸಬೇಕೆಂದು” ಅಭ್ಯರ್ಥಿಗಳು ಆಗ್ರಹಿಸಿದರು. ಸಚಿವರು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ನಾಳೆಯೇ ಕೇವಿಯಟ್ ಸಲ್ಲಿಸಬೇಕೆಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಃಕರಣವಿರುವವರ ನಿದ್ದೆಗೆಡಿಸುವ ಮೂರು ಸುದ್ದಿಗಳು

“ಈಗಾಗಲೇ ನೇಮಕಾತಿ ಆರಂಭವಾಗಿ 3 ವರ್ಷಗಳು ಮುಗಿಯುತ್ತಿದ್ದು, ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಖಾಯಂ ಪ್ರಾಧ್ಯಾಪಕರ ನೇಮಕಾತಿ ಅತ್ಯಂತ ಜರೂರಾಗಬೇಕಿದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿರುವಂತಹ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳೆಲ್ಲರೂ ಈಗಾಗಲೇ ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ. ನೇಮಕಾತಿ ಯಾವಾಗ ಆರಂಭವಾಗಿ, ನೇಮಕಾತಿ ಆದೇಶವನ್ನು ಯಾವಾಗ ಪಡೆಯುತ್ತೇವೆ ಎಂಬ ಚಿಂತೆಯಲ್ಲೇ ದಿನದೂಡುವಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಇತ್ತ ಪದವಿ ವಿದ್ಯಾರ್ಥಿಗಳಿಗೆ ಬೋಧಿಸಲು ಖಾಯಂ ಪ್ರಾಧ್ಯಾಪಕರಿಲ್ಲದಂತಾಗಿದೆ. ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡುವ ಇಚ್ಛಾಶಕ್ತಿಯನ್ನು ಸರ್ಕಾರ ಮಾಡಬೇಕಿದೆ. ಆಯ್ಕೆಯಾದ ಎಲ್ಲ ಸಹಾಯಕ ಪ್ರಾಧ್ಯಾಪಕರಿಗೆ ಉದ್ಯೋಗ ನೀಡುವ ಮೂಲಕ ನಿರುದ್ಯೋಗವನ್ನು ಹೋಗಲಾಡಿಸಬೇಕು. ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ನೆರವಾಗಬೇಕಿದೆ” ಎಂದು ಅಭ್ಯರ್ಥಿಗಳು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಳದ ನಾಗಲಕ್ಷ್ಮೀ, ಪ್ರಿಯಾಂಕ, ಜಯಶಂಕರ್, ರಮೇಶ್, ಅಶೋಕ್, ಯದುಕುಮಾರ್, ಯಲ್ಲಪ್ಪ, ಮತ್ತಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು...

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...