ವರ್ತೂರು ಪ್ರಕಾಶ್ ಹೆಸರಲ್ಲಿ ಆಪ್ತೆ ವಂಚನೆ, 2.1 ಕೆ.ಜಿ ಚಿನ್ನಾಭರಣ ಪತ್ತೆ

Date:

ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಅವರು ಆಪ್ತೆ ಶ್ವೇತಾಗೌಡ ಮಾಡಿದ ವಂಚನೆ ಪ್ರಕರಣಕ್ಕೆ ಸಂಬಂಧ ಬೆಂಗಳೂರು ನಗರ ಪೊಲೀಸರು 2.1 ಕೆ.ಜಿ ಚಿನ್ನಾಭರಣದ ಮೂಲ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಕೆಜಿಗಟ್ಟಲೆ ಚಿನ್ನಾಭರಣ ವಂಚಿಸಿದ ಆರೋಪದಲ್ಲಿ
ಶ್ವೇತಾಗೌಡ‌‌ರನ್ನು ಬಂಧಿಸಲಾಗಿತ್ತು. ಆರೋಪಿ ಶ್ವೇತಾಗೌಡ ಬಂಧಿತರಾಗಿದ್ದರೂ ಕೂಡ ಚಿನ್ನದ ಮೂಲ ಗೊತ್ತಾಗಿರಲಿಲ್ಲ. ಬಾಗಲಗುಂಟೆಯಿಂದ ರಾಜಸ್ಥಾನಕ್ಕೆ ಹೋಗಿ ಹುಡುಕಾಡಿದರೂ ಕೂಡ ಬಚ್ಚಿಟ್ಟಿದ್ದ ಚಿನ್ನಾಭರಣದ ಸುಳಿವು ಸಿಕ್ಕಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ವಿಚಾರಣೆ ಬಳಿಕ ಶ್ವೇತಾಗೌಡ ನೀಡಿದ ಸುಳಿವು ಆಧರಿಸಿ ಜೋಧಪುರದಲ್ಲಿ ಮೋಹನ್ ಲಾಲ್ ಎಂಬಾತನನ್ನು ಬಂಧಿಸಿದ ಕರೆತಂದಾಗ ಚಿನ್ನ ಎಲ್ಲಿದೆ ಎಂಬ ಮಾಹಿತಿ ಬಯಲಾಗಿದೆ. ನವರತ್ನ ಜ್ಯುವೆಲ್ಲರಿ ಮಾಲೀಕ ಸಂಜಯ್ ಭಾಷಾ ಬಳಿ ಶ್ವೇತಾ ಗೌಡ ಪಡೆದಿದ್ದ 2 ಕೆ.ಜಿ 945 ಗ್ರಾಂ ಚಿನ್ನದಲ್ಲಿ 800 ಗ್ರಾಂ ವಶ ಪಡಿಸಿಕೊಳ್ಳಲಾಗಿತ್ತು. ಉಳಿದ 2 ಕೆ.ಜಿ 145 ಗ್ರಾಂ ಚಿನ್ನದ ಸುಳಿವೇ ಸಿಕ್ಕಿರಲಿಲ್ಲ.

ಶ್ವೇತಾ ವಿಚಾರಣೆ ವೇಳೆ ರಾಮ್‌ದೇವ್ ಜ್ಯುವೆಲರಿ ಮಾಲೀಕ ಚೆನ್ನಾರಾಮ್‌ಗೆ ನೀಡಿದ್ದಾಗಿ ಮಾಹಿತಿ ನೀಡಿದ್ದಳು.
ರಾಮ್‌ದೇವ್ ಜ್ಯುವೆಲ್ಲರಿ ಮಾಲೀಕ ಚೆನ್ನಾರಾಮ್ ಬಂಧಿಸಿ ವಿಚಾರಣೆ ನಡೆಸಿದಾಗ ಚೆನ್ನಾರಾಮ್‌ನ ಸಂಬಂಧಿ ಮೋಹನ್ ಲಾಲ್ ಚಿನ್ನಾಭರಣ ಪಡೆದಿರೋದಾಗಿ ಮಾಹಿತಿ ನೀಡಿದ್ದ.

ಮೋಹನ್ ಲಾಲ್‌ನ ಜೋಧಪುರದಿಂದ ಬಂಧಿಸಿ ಕರೆತಂದಾಗ ಬಾಗಲಗುಂಟೆಯ ತೋಟದ ಗುಡ್ಡದಹಳ್ಳಿಯ ಬೇರಾರಾಮ್ ಬಳಿಯಿದೆ ಎಂದು ಮಾಹಿತಿ ನೀಡಿದ್ದಾನೆ. ಬೇರಾ ರಾಮ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ನಂಬರ್ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರು ಬಿಟ್ಟು ಬೇರೆ ರಾಜ್ಯಕ್ಕೆ ಪರಾರಿಯಾಗಿದ್ದಾನೆ. ಸದ್ಯ ನಾಪತ್ತೆಯಾಗಿರುವ ಬೇರಾ ರಾಮ್‌ಗಾಗಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...