ಕೋಳಿ ಅಂಕಕ್ಕೆ ಪ್ರಚೋದನೆ: ಶಾಸಕ ಅಶೋಕ್ ರೈ ವಿರುದ್ಧ ಪ್ರಕರಣ ದಾಖಲು

Date:

ಬಂಟ್ವಾಳ ತಾಲೂಕಿನ ಕೇಪು ಉತ್ಸವದ ಪ್ರಯುಕ್ತ ನಡೆಯುವ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರು ತಡೆನೀಡಿದ್ದರೂ, ಕೋಳಿ ಅಂಕ ನಡೆಸಲು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಖುದ್ದು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಟ್ಲ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕೋಳಿ ಅಂಕ ನಡೆಸಲಾಗಿದ್ದು, ಪೊಲೀಸ್ ಇದನ್ನು ಅಕ್ರಮ ಎಂಬ ಸೂಚನೆ ನೀಡಿದರೂ ಶಾಸಕ ರೈ ಪ್ರೇರಣೆ ನೀಡಿ ಕೋಳಿ ಅಂಕ ಮುಂದುವರೆಸಿದ್ದಾರೆ. ಅಂಕಕ್ಕೆ ಬಳಸಲಾಗಿರುವ 22 ಹುಂಜಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, 16 ಜನರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಕೇಪು ಉಳ್ಳಾಲ್ತಿ ದೈವಸ್ಥಾನದ ಉತ್ಸವದ ಪ್ರಯುಕ್ತ ನಡೆಯುತ್ತಿದ್ದ ಈ ಜೂಜು ರಹಿತವಾದ ಕೋಳಿ ಅಂಕವನ್ನು ಮಾದರಿ ಕೋಳಿ ಅಂಕವೆಂದು ಬಿಂಬಿಸಲಾಗಿದೆ. ಧಾರ್ಮಿಕ ಹಿನ್ನೆಲೆಯ ಈ ಅಂಕಕ್ಕೆ ಪೊಲೀಸ್ ಸಮ್ಮತಿ ಇರಬಹುದೆಂದು ಸಾವಿರಾರು ಮಂದಿ ನೆರೆದಿದ್ದರು. ಆದರೆ, ಪೊಲೀಸ್ ಸೂಚನೆ ಹೊರಬೀಳುತ್ತಿದ್ದಂತೆ ಎಲ್ಲರೂ ದಿಕ್ಕಾಪಾಲು ಓಡಲು ಆರಂಭಿಸಿದ್ದರು. ಆದಾಗ್ಯೂ, ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ಆಗಮಿಸಿದ ಶಾಸಕ ಅಶೋಕ್ ರೈ, ಎಲ್ಲರನ್ನೂ ಹುರಿದುಂಬಿಸಿ ಮತ್ತೆ ಸಂಜೆ ಆರುಗಂಟೆಯವರೆಗೆ ಕೋಳಿ ಅಂಕ ನಡೆಸಲು ಮುಂದಾಳುತ್ವ ವಹಿಸಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...