ಸೌಜನ್ಯ ಪ್ರಕರಣ: ತಮ್ಮನ್ನು ಎಸ್‌ಐಟಿಯಿಂದ ಕೈಬಿಡುವಂತೆ ಎಎಸ್‌ಪಿ ವೆಂಕಟೇಶ್‌ ಪ್ರಸನ್ನ ಪತ್ರ

Date:

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ನೂತನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿರುವ ಬೆನ್ನಲ್ಲೇ, ತಂಡದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಎಎಸ್‌‌ಪಿ ಡಾ. ವೆಂಕಟೇಶ್‌ ಪ್ರಸನ್ನ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

- Advertisement -

ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ ರಾಜ್ಯ ಸರ್ಕಾರವು ಐಜಿಪಿ ಶಶಿಕುಮಾರ್‌ ನೇತೃತ್ವದಲ್ಲಿ ಇತ್ತೀಚೆಗಷ್ಟೇ ನೂತನ ಎಸ್‌ಐಟಿ ರಚಿಸಿತ್ತು. ಈ ತಂಡದಲ್ಲಿ ಮಂಗಳೂರು ಪೊಲೀಸ್‌ ಆಯುಕ್ತ ಸಿ.ಎಚ್‌. ಸುಧೀರ್‌ ಕುಮಾರ್‌ ರೆಡ್ಡಿ, ಗುಪ್ತವಾರ್ತೆಯ ಎಸ್‌ಪಿ ನಿಶಾ ಜೇಮ್ಸ್‌, ಸಿಐಡಿ ಎಸ್‌ಪಿ ಲೋಕೇಶ್‌ ಜಗಲಸಾರ್‌ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಎಸ್‌ಪಿ ವೆಂಕಟೇಶ್‌ ಪ್ರಸನ್ನ ಅವರನ್ನು ನೇಮಿಸಲಾಗಿತ್ತು. ಆದರೆ, ಈ ನೂತನ ತನಿಖಾ ತಂಡದ ಕೆಲ ಸದಸ್ಯರ ಬಗ್ಗೆ ಸೌಜನ್ಯ ಕುಟುಂಬಸ್ಥರು ಹಾಗೂ ಹಲವು ಸಾಮಾಜಿಕ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನೇಮಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನೂ ಓದಿ: ಕೂಡಲೇ ಸೌಜನ್ಯ ಎಸ್‌ಐಟಿ ಪುನರಚಿಸಿ: ರಾಜ್ಯ ಸರ್ಕಾರಕ್ಕೆ ‘ಕೊಂದವರು ಯಾರು?’ ಆಂದೋಲನ ಬಹಿರಂಗ ಪತ್ರ

ತನಿಖಾ ತಂಡದ ಅಧಿಕಾರಿಗಳ ಮೇಲೆ ಮೃತಳ ಕುಟುಂಬಸ್ಥರು ಹಾಗೂ ಹೋರಾಟಗಾರರು ಅವಿಶ್ವಾಸ ವ್ಯಕ್ತಪಡಿಸಿರುವುದರಿಂದ, ನೈತಿಕ ಹೊಣೆಹೊತ್ತು ತಂಡದಲ್ಲಿ ಮುಂದುವರಿಯದಿರಲು ವೆಂಕಟೇಶ್‌ ಪ್ರಸನ್ನ ನಿರ್ಧರಿಸಿದ್ದಾರೆ. ಮರುತನಿಖೆ ನಡೆಸುವ ತಂಡದ ಬಗ್ಗೆಯೇ ಅಪಸ್ವರ ಎದ್ದಿರುವುದರಿಂದ ಅದರಲ್ಲಿ ತಾನು ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂಬ ಕಾರಣ ನೀಡಿ, ತಮ್ಮನ್ನು ಎಸ್‌ಐಟಿಯಿಂದ ಮುಕ್ತಗೊಳಿಸುವಂತೆ ಕೋರಿ ಅವರು ಸರ್ಕಾರಕ್ಕೆ ಲಿಖಿತ ಮನವಿ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಅವ್ಯವಸ್ಥೆಗಳ ಕೂಪವಾದ ಶಿರವಾಡ ತ್ಯಾಜ್ಯ ಘಟಕ; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಉಪಲೋಕಾಯುಕ್ತ

ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ತ್ಯಾಜ್ಯ ವಿಲೇವಾರಿ ಘಟಕಕ್ಕೆ...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...