ಮೊದಲ ಕಂತಿನ ಪೂರಕ ಅಂದಾಜು ವೆಚ್ಚಗಳಿಗೆ ವಿಧಾನಸಭೆ ಅಂಗೀಕಾರ

Date:

Advertisements

ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭಾ ಕಲಾಪದಲ್ಲಿ ಬುಧವಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2023-24ನೇ ಸಾಲಿನ ಮೊದಲನೇ ಪೂರಕ ಅಂದಾಜುಗಳ ವೆಚ್ಚ ರೂ.3,542.10 ಕೋಟಿಗಳಿಗೆ ಅಂಗೀಕಾರ ದೊರಕಿದೆ.

ಸದನದ ಅಂಗೀಕಾರ ಕೋರಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಹಿಂದೆ ಜುಲೈನಲ್ಲಿ ರೂ.3,41,321 ಕೋಟಿಗಳ ಆಯವ್ಯಯ ಮಂಡಿಸಲಾಗಿತ್ತು. ಆಯವ್ಯಯದಲ್ಲಿ ಘೋಷಿಸಿದ ಹೊರತಾಗಿ ಸರ್ಕಾರದ ಕೆಲವು ಖರ್ಚುಗಳಿಗೆ ರಾಜ್ಯದ ತುರ್ತ ನಿಧಿಯಡಿ ಅನುದಾನವನ್ನು ಒದಗಿಸಲಾಗಿದೆ. ಹೀಗೆ ವೆಚ್ಚ ಮಾಡಿದ ಮೊಬಲಗನ್ನು ತೋರಿಸುವ ಪೂರಕ ಅಂದಾಜು ವಿವರಣೆಯನ್ನು ರಾಜ್ಯದ ಸದನದಲ್ಲಿ ಇಟ್ಟು ಒಪ್ಪಿಗೆ ಪಡೆದುಕೊಳ್ಳಬೇಕು. ಇದಕ್ಕೆ ಸಂವಿಧಾನದ 205(1)(ಎ) ಅನುಚ್ಛೇದ ಅವಕಾಶ ಕಲ್ಪಿಸಿದೆ. ಈಗ ಮಂಡಿಸಿದ ಪೂರಕ ಅಂದಾಜಿನ ಗಾತ್ರ 2023-24ರ ಆಯವ್ಯಯದ ಶೇ.1 ರಷ್ಟು ಮಾತ್ರ ಎಂದರು.

ಮೊದಲನೇ ಪೂರಕ ಅಂದಾಜಿನಲ್ಲಿ ಒದಗಿಸಿರುವ ಒಟ್ಟು ಮೊತ್ತ ರೂ.3,542.10 ಕೋಟಿಯಲ್ಲಿ ರೂ.17.66 ಕೋಟಿ ಪ್ರಭೃತ ವೆಚ್ಚ ಮತ್ತು ರೂ.3,524.44 ಕೋಟಿ ಪುರಸ್ಕೃತ ವೆಚ್ಚಗಳು ಸೇರಿವೆ. ಇದರಲ್ಲಿ ರೂ.326.98 ಕೋಟಿ ರಿಸರ್ವ ಫಂಡ್ ಠೇವಣಿ ಹಾಗೂ ಎಸ್.ಎನ್.ಎ ಖಾತೆಗಳಿಂದ ಭರಿಸಲಾಗುವುದು. ರೂ.684.28 ಕೋಟಿ ಕೇಂದ್ರ ಸರ್ಕಾರ ಸಹಾಯಕ್ಕೆ ಸಂಬಂಧಿಸಿವೆ ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಕೇವಲ 1 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು : ತನಿಖೆಗೆ ಎಎಪಿ ಆಗ್ರಹ

ಪೂರಕ ಅಂದಾಜಿನಲ್ಲಿ ರೂ.915 ಕೋಟಿ ಬಂಡವಾಳ ವೆಚ್ಚವಾಗಿ ಅಭಿವೃದ್ಧಿ ಕಾರ್ಯಗಳಿಗೆ ವ್ಯಯಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ಎಸ್.ಇ.ಪಿ ಹಾಗೂ ಟಿ.ಎಸ್.ಪಿ ಯೋಜನಗೆ ರೂ.508 ಕೋಟಿ, ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರಕ್ಕೆ ರೂ.502 ಕೋಟಿ, ಸಮಗ್ರ ಶಿಶು ಅಭಿವೃದ್ದಿ ಯೋಜನೆಗೆ ರೂ.310 ಕೋಟಿ, ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯ ಸಾಗಾಣಿಕೆ ವೆಚ್ಚಗಳಿಗೆ ರೂ.297 ಕೋಟಿ, ಎಸ್.ಸಿ.ಡಿ.ಎಸ್‌ಗೆ ರೂ.284 ಕೋಟಿ, ಉಗ್ರಾಣ ನಿಗಮಕ್ಕೆ ಸಾಲವಾಗಿ ರೂ.229 ಕೋಟಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರೋಗ್ಯ ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲು ರೂ.189 ಕೋಟಿ, ನಬಾರ್ಡ ರಸ್ತೆಗಳಿಗೆ ರೂ.150 ಕೋಟಿ, ಕೇಂದ್ರದ ಹದಿಹರೆಯದ ಗ್ರಂಥಾಲಯ ಇ ಲೈಬ್ರರಿಗೆ ಯೋಜನೆಗೆ ರಾಜ್ಯದ ಪಾಲಾಗಿ ರೂ.132 ಕೋಟಿ, ಕೃಷಿ ಭಾಗ್ಯ ಯೋಜನೆಗೆ ರೂ.100 ಸೇರಿದಂತೆ ತೋಟಗಾರಿಕೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಕಂದಾಯ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು, ವಾಣಿಜ್ಯ ಮತ್ತು ಕೈಗಾರಿಕೆ, ನಗರಾಭಿವೃದ್ಧಿ ಮತ್ತು ವಸತಿ, ಲೋಕೋಪಯೋಗಿ, ನೀರಾವರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಆರ್ಥಿಕ ಇಲಾಖೆಗಳಿಗೆ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.

ರಾಜ್ಯ ಸರ್ಕಾರ ರೂ.39,000 ಕೋಟಿಗಳ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದರ ನಡುವೆಯು ಆರ್ಥಿಕ ಶಿಸ್ತು ಕಾಪಾಡಿಕೊಂಡು ಬರಲಾಗಿದೆ. ಹಿಂದಿನ ಸರ್ಕಾರಗಳು ಸಹ ಪೂರಕ ಅಂದಾಜು ಮಂಡಿಸಿವೆ. ಸದನವು 2023-24ನೇ ಸಾಲಿನ ಪೂರಕ ಅಂದಾಜಿಗೆ ಅಂಗೀಕಾರ ನೀಡುವಂತೆ ಕೋರಿದರು. ಪೂರಕ ಅಂದಾಜಿನ ಧನವಿಯೋಗಕ್ಕೆ ಅನುವಾಗುವಂತೆ 2023ನೇ ಸಾಲಿನ ಕರ್ನಾಟಕ ಧನವಿನಯೋಗ ಸಂಖ್ಯೆ-4 ವಿಧೇಯಕವನ್ನು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದರು.

ಚರ್ಚೆಯ ನಂತರ ಸದನದಲ್ಲಿ ಪೂರಕ ಅಂದಾಜು ಹಾಗೂ ಧನವಿನಯೋಗ ವಿಧೇಯಕಕ್ಕೆ ಅನುಮೋದನೆ ನೀಡಿ ಅಂಗೀಕರಿಸಲಾಯಿತು. ಈವುಗಳು ಇದೇ ಅಧಿವೇಶನದಲ್ಲಿ ವಿಧಾನ ಪರಿಷತ್ ಅಂಗೀಕಾರಕ್ಕಾಗಿ ಚರ್ಚೆಗೆ ಬರಲಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X