ರೈತ ಮುಖಂಡ ಬಡಗಲಪುರ ನಾಗೇಂದ್ರರ ಮೇಲೆ ಹಲ್ಲೆಗೆ ಯತ್ನ; ಪ್ರಕರಣ ದಾಖಲು

Date:

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮೇಲೆ ಹಲ್ಲೆಗೆ ಯತ್ನಿಸಿರುವ ಸಂಬಂಧ ಮಂಡ್ಯದಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಮಂಗಳವಾರ ರೈತ ಸಂಘದ ಎರಡು ಬಣಗಳ ನಡುವೆ ಆಗಿರುವ ಮುಖಾಮುಖಿಯ ಸಂಬಂಧ ದೂರು ಪ್ರತಿದೂರು ಸಲ್ಲಿಕೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ರೈತ ಮುಖಂಡ ನಾಗೇಂದ್ರ ಅವರ ಮೇಲೆ ಮತ್ತೊಂದು ಬಣದ ಇಂಗಲಗುಪ್ಪೆ ಕೃಷ್ಣ ಅವರು ಹಲ್ಲೆ ನಡೆಸಲು ಯತ್ನಿಸಿರುವುದಾಗಿ ಆರೋಪ ಬಂದಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಡಗಲಪುರ ನಾಗೇಂದ್ರ ಅವರು, “ಸಂಘಟನೆಯ ಕೆಲಸದ ನಿಮಿತ್ತ ಮಂಡ್ಯಕ್ಕೆ ಬಂದಿದ್ದೆ. ಜಿಲ್ಲಾಧಿಕಾರಿ ಕಚೇರಿಗೆ ಸ್ನೇಹಿತರೊಂದಿಗೆ ಹೋಗುತ್ತಿದ್ದೆ. ಇಂಗಲಗುಪ್ಪೆ ಕೃಷ್ಣೇಗೌಡರ ಕಾರನ್ನು ಅತಿವೇಗವಾಗಿ ಓಡಿಸಿಕೊಂಡು ಬಂದು ನಾನು ಹೋಗುತ್ತಿದ್ದಲ್ಲಿ ಬ್ರೇಕ್ ಹಾಕಿ ನಿಲ್ಲಿಸಲಾಯಿತು. ಮೂರು ಜನರು ಕಾರಿನಿಂದ ಇಳಿದರು. ಕೃಷ್ಣೇಗೌಡ ಮಾತನಾಡುತ್ತಾ, ‘ಏನ್ ಮಂಡ್ಯ ಜಿಲ್ಲೆಗೆ ಬಂದುಬಿಟ್ಟಿದ್ದೀಯಾ? ನನ್ನ ಮೇಲೆ ಕಂಪ್ಲೇಟ್ ಕೊಟ್ಟಿದ್ರಿ. ನಿಮ್ಮನ್ನೆಲ್ಲ ಹೆಂಗೆ ನೋಡಿಕೊಳ್ಳಬೇಕೋ ನೋಡಿಕೊಳ್ಳುತ್ತೇನೆ. ಮುಂದೆ ನಿನ್ನನ್ನು ಮುಗಿಸುತ್ತೇನೆ’ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆಬೆದರಿಕೆ ಹಾಕುವ ಜೊತೆಗೆ ನನ್ನ ಮೇಲೆ ದೌರ್ಜನ್ಯವನ್ನೂ ನಡೆಸಿದ್ದಾರೆ. ನಮ್ಮ ಸ್ನೇಹಿತರೆಲ್ಲ ಓಡಿಬಂದಾಗ, ಜಿಲ್ಲಾಧಿಕಾರಿ ಕಚೇರಿಗೆ ಕೃಷ್ಣ ಅವರು ಓಡಿಹೋದರು. ಈ ಕುರಿತು ದೂರು ನೀಡಿದ್ದೇನೆ. ಐಪಿಸಿ ಸೆಕ್ಷನ್‌ 506, 341, 323, 279 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದ್ದಾರೆ.

“ರೈತ ಸಂಘದ ಹೆಸರು ಹೇಳಿಕೊಂಡು ಜನರಿಗೆ ಮೋಸ ಮಾಡುತ್ತಿರುವ ವ್ಯಕ್ತಿ ಕೃಷ್ಣ. ಪೋರ್ಜರಿ ದಾಖಲಾತಿ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಸಾಲ ತೆಗೆದಿದ್ದಾರೆ. ಈ ಕುರಿತು ತನಿಖೆಯಾಗಲಿ ಎಂದು ಒತ್ತಾಯಿಸಿದ್ದೆವು. ರೌಡಿ ಶೀಟರ್‌ ಆಗಿರುವ ಇವರು ಹಸಿರು ಟವೆಲ್ ಹಾಕಿಕೊಂಡು ರಕ್ಷಣೆ ಪಡೆಯುತ್ತಿದ್ದಾರೆ” ಎಂದು ದೂರಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಕೃಷ್ಣ, “ರಸ್ತೆ ದುರಸ್ತಿ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ನೀಡಲು ಹೋಗಿದ್ದಾಗ ಬಡಗಲಪುರ ನಾಗೇಂದ್ರ ಮತ್ತು ಮತ್ತವರ ಬೆಂಬಲಿಗರು ಬೆದರಿಕೆ ಒಡ್ಡಿದರು. ನಂತರ ಕಾರು ತಡೆದು ಹಲ್ಲೆಗೆ ಯತ್ನಿಸಿದರು. ಘಟನೆ ವಿಡಿಯೊ ಮಾಡುತ್ತಿದ್ದ ಬೆಂಬಲಿಗರ ಮೇಲೂ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಆರೋಪ ಪ್ರತ್ಯಾರೋಪ ಸಂಬಂಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...