ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆ ಸ್ಥಾಪನೆ

Date:

ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ನಲ್ಲಿ ಸ್ಥಾಪಿಸಲಾಗಿರುವ ಕಲಾಲೋಕ ಮಳಿಗೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

- Advertisement -

ಕೈಗಾರಿಕಾ ಇಲಾಖೆಯ ಮೂಲಕ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಸ್ಥಾಪಿಸಲಾಗಿದೆ. ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಮಂಗಳವಾರ ಕಲಾಮಳಿಗೆಯನ್ನು ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಬಳಿಕ ಮಾತನಾಡಿದ ಅವರು, “ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತೀ ದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟ ಸಾಧಿಸಲಾಗುವುದು” ಎಂದು ತಿಳಿಸಿದರು.‌

ಸಚಿವ ಎಂ ಬಿ ಪಾಟೀಲ್ ಮಾತನಾಡಿ, “ಟರ್ಮಿನಲ್-2ರ ಸಮೀಪ ನಿರ್ಮಿತವಾಗಿರುವ ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಪಾರಂಪರಿಕ ಉತ್ಪನ್ನಗಳಾದ ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ, ಅಗರಬತ್ತಿ, ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಲಿಡ್ಕರ್ ಉತ್ಪನ್ನಗಳು, ಬಗೆಬಗೆಯ ಪರಿಮಳವಿರುವ ಕಾಫಿಪುಡಿ ಮತ್ತು ಪಾನೀಯ, ಕೈಮಗ್ಗದ ಉತ್ಪನ್ನಗಳು, ಇಳಕಲ್ ಸೀರೆ, ಲಂಬಾಣಿ ಉಡುಪು, ಗಂಧದ ಕಲಾಕೃತಿ, ಬಿದರಿ ಕಲಾಕೃತಿ, ಮೈಸೂರು ಶೈಲಿಯ ಕಲಾಕೃತಿಗಳು, ಮುಂತಾದವು ಸಿಗಲಿವೆ. ಒಟ್ಟಾರೆಯಾಗಿ ಜಿ.ಐ. ಮಾನ್ಯತೆ ಹೊಂದಿರುವ ರಾಜ್ಯದ 45 ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಎರಡೂ ಈ ಮಳಿಗೆಯಲ್ಲಿ ನಡೆಯಲಿದೆ” ಎಂದು ಹೇಳಿದರು.

“ರಾಜ್ಯವೇ ಹೆಮ್ಮೆಪಡುವಂತಹ ಪಾರಂಪರಿಕ ಮತ್ತು ಭೌಗೋಳಿಕ ವಿಶಿಷ್ಟತೆಯ ಮನ್ನಣೆ ಹೊಂದಿರುವ ಉತ್ಪನ್ನಗಳನ್ನು ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಮಳಿಗೆ ಆರಂಭದ ಆಶಯವಾಗಿದೆ. ಇದಕ್ಕೆ ಸರಕಾರಿ ಸ್ವಾಮ್ಯದ ಕೆ.ಎಸ್.ಡಿ.ಎಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಯಮಿತ, ಕೆಎಸ್ಐಸಿ, ಕಾಫಿ ಬೋರ್ಡ್ ಮತ್ತು ಲಿಡ್ಕರ್ ಮುಂತಾದ ಉದ್ದಿಮೆಗಳು ಕೈಜೋಡಿಸಿವೆ. ವಿಮಾನ ನಿಲ್ದಾಣಕ್ಕೆ ಬರುವವರಿಗೆ ಮತ್ತು ಇಲ್ಲಿಂದ ಹೋಗುವವರಿಗೆ ಒಂದೇ ತಾಣದಲ್ಲಿ ಕರ್ನಾಟಕದ ಅಸ್ಮಿತೆ ಇಲ್ಲಿ ಅನುಭವಕ್ಕೆ ಸಿಗಲಿದೆ” ಎಂದು ಸಚಿವರು ಬಣ್ಣಿಸಿದರು.

“ವಿಮಾನ ನಿಲ್ದಾಣದ ಆಡಳಿತ ಮಂಡಳಿಯು ಕಲಾಲೋಕ ಮಳಿಗೆಗೆ ಟರ್ಮಿನಲ್ -2ರ ಡೊಮೆಸ್ಟಿಕ್ ಬೇನಲ್ಲಿ 132 ಚ.ಮೀ. ಜಾಗವನ್ನು ಬಾಡಿಗೆಗೆ ಒದಗಿಸಿದೆ. ಟರ್ಮಿನಲ್-2ರಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರ ನಿರ್ಗಮನ ವಲಯದಲ್ಲಿ 140 ಚ.ಮೀ. ಜಾಗದಲ್ಲಿ ಇಂತಹುದೇ ಮತ್ತೊಂದು ಮಳಿಗೆ ಆರಂಭಿಸಲಾಗುವುದು. ಮಳಿಗೆಯನ್ನು ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಪಡಿಯಚ್ಚಿನಂತೆ ಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ. ಇದರ ಹಿಂದೆ ದೂರದೃಷ್ಟಿ ಇದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಜವಳಿ ಆಯುಕ್ತರಾದ ಜ್ಯೋತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಪಿ.ಬಸವರಾಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...