ಆಟೋ ಗ್ಯಾಸ್ ಕೊರತೆ ಎಂಬ ವದಂತಿಗಳಿಗೆ ಕಿವಿಗೊಡಬೇಡಿ: ರಾಜ್ಯ ಸರ್ಕಾರ

Date:

ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟಪಡಿಸಿದೆ.

- Advertisement -

​ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು ಸಂಸ್ಥೆಗಳಲ್ಲಿ ಮಾತ್ರ ಅಲ್ಪಮಟ್ಟಿನ ಕೊರತೆ ಕಂಡುಬಂದಿದ್ದು, ಇದನ್ನು ಸರಿಪಡಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ IOC (ಇಂಡಿಯನ್ ಆಯಿಲ್), BPC (ಭಾರತ್ ಪೆಟ್ರೋಲಿಯಂ) ಮತ್ತು HPC (ಹಿಂದೂಸ್ತಾನ್ ಪೆಟ್ರೋಲಿಯಂ) ಮೂಲಕ ಹೆಚ್ಚಿನ ಪ್ರಮಾಣದ ಅನಿಲವನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಉಡುಪಿ | ಸಿಎನ್‌ಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ಕೊರತೆ; ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ

​ಹಿಂದೆ ಈ ಮೂರು ಸಂಸ್ಥೆಗಳು ಸರಾಸರಿ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಅನ್ನು ಸರಬರಾಜು ಮಾಡುತ್ತಿದ್ದವು. ಆದರೆ ಪ್ರಸ್ತುತ ಬೇಡಿಕೆಯನ್ನು ಪೂರೈಸಲು ಸರಬರಾಜು ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸದ್ಯ ಪ್ರತಿದಿನ ಸರಾಸರಿ 83.58 ಮೆಟ್ರಿಕ್ ಟನ್ ಗ್ಯಾಸ್ ಅನ್ನು ಚಿಲ್ಲರೆ ಮಾರಾಟ ಮಳಿಗೆಗಳಿಗೆ ಪೂರೈಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

ಕಳೆದ ಏಪ್ರಿಲ್ 2ರಿಂದ ಏಪ್ರಿಲ್ 6ರವರೆಗಿನ ಅಂಕಿಅಂಶಗಳನ್ನು ಗಮನಿಸಿದರೆ, ಪೂರೈಕೆಯಲ್ಲಿ ಸ್ಥಿರತೆ ಇರುವುದು ಕಂಡುಬರುತ್ತದೆ. ಏಪ್ರಿಲ್ 2 ರಂದು 87.78 ಮೆಟ್ರಿಕ್ ಟನ್, ಏಪ್ರಿಲ್ 3 ರಂದು 86.05 ಮೆಟ್ರಿಕ್ ಟನ್, ಏಪ್ರಿಲ್ 4 ರಂದು 84.80 ಮೆಟ್ರಿಕ್ ಟನ್, ಏಪ್ರಿಲ್ 5 ರಂದು ಗರಿಷ್ಠ 94.11 ಮೆಟ್ರಿಕ್ ಟನ್ ಹಾಗೂ ಏಪ್ರಿಲ್ 6 ರಂದು 83.58 ಮೆಟ್ರಿಕ್ ಟನ್ ಅನಿಲವನ್ನು ಈ ಮೂರು ಪ್ರಮುಖ ಸಂಸ್ಥೆಗಳು ಯಶಸ್ವಿಯಾಗಿ ಪೂರೈಕೆ ಮಾಡಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

​ಆದ್ದರಿಂದ, ರಾಜ್ಯದ ಆಟೋ ಮಾಲೀಕರು ಮತ್ತು ಚಾಲಕರು ಇಂತಹ ಯಾವುದೇ ಸುಳ್ಳು ವದಂತಿಗಳನ್ನು ನಂಬಬಾರದು. ಆತಂಕಕ್ಕೊಳಗಾಗಿ ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲಬಾರದು ಎಂದು ಸರ್ಕಾರ ಮನವಿ ಮಾಡಿದೆ. ಅನಿಲ ಪೂರೈಕೆ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...