ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರಶಸ್ತಿ ಸ್ಥಾಪನೆ, 114 ಸ್ಥಳದಲ್ಲಿ 114 ವೃಕ್ಷ‌: ಸಚಿವ ಈಶ್ವರ ಖಂಡ್ರೆ ಘೋಷಣೆ

Date:

114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಮತ್ತು ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

- Advertisement -

ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ ಮಹಾನ್ ಪರಿಸರ ಪ್ರೇಮಿಗೆ ಅಂತಿಮ ನಮನ ಸಲ್ಲಿಸಿದ ತರುವಾಯ ಮಾತನಾಡಿದ ಅವರು, ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೆ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇಲಾಖೆ ಅವರನ್ನು ಪರಿಸರ ರಾಯಭಾರಿಯಾಗಿ ಪುರಸ್ಕರಿಸಿತ್ತು. ಅಜ್ಜಿಯ ಪ್ರೇರಣೆಯಿಂದ ನೂರಾರು ಜನರು ತಮ್ಮ ಕೈಲಾದಷ್ಟು ಸಸಿ ನೆಟ್ಟು ಪೋಷಿಸುತ್ತಿದ್ದಾರೆ. ಲಕ್ಷಾಂತರ ಪರಿಸರ ಪ್ರೇಮಿಗಳಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕ ಅವರ ನಿಧನದಿಂದ ರಾಜ್ಯ ನಿಷ್ಠಾವಂತ ಪರಿಸರ ಕಾಳಜಿಯ ಮಹಾಜೀವಿಯನ್ನು ಕಳೆದುಕೊಂಡಿದೆ ಎಂದು ದುಃಖ ವ್ಯಕ್ತಪಡಿಸಿದರು.

ಪರಿಸರ ಸಂರಕ್ಷಣೆಯ ಮಾತನ್ನು ಕೃತಿಯಲ್ಲಿ ತೋರಿಸಿದರು: ಪರಮೇಶ್ವರ್

ಇಡೀ ನಾಡಿಗೆ ಹೊಸ ಆದರ್ಶವನ್ನು ರೂಪಿಸಿದ ಎಲ್ಲರ ಅಚ್ಚುಮೆಚ್ಚಿನ ತಾಯಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕನವರು ನಮ್ಮನ್ನು ಅಗಲಿರುವುದು ನೋವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾಲುಮರದ ತಿಮ್ಮಕ್ಕನವರ ಪಾರ್ಥಿವ ಶರೀರದ ಅಂತಿಮ‌ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

ಸಾಲುಮರದ ತಿಮ್ಮಕ್ಕನವರ ಅಗಲಿಕೆಯು ವೈಯಕ್ತಿಕವಾಗಿ ನನಗೆ ಅಪಾರವಾದ ನಷ್ಟವಾಗಿದೆ. ತಿಮ್ಮಕ್ಕನವರು ನನಗೆ ಹಾಗೂ ನಮ್ಮ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದಂತವರು. ಬಹುಶಃ ಯಾರು ಕೂಡ ನಡೆಯದ ದಾರಿಯನ್ನು ಸೃಷ್ಟಿ ಮಾಡಿ, ಪರಿಸರ ಸಂರಕ್ಷಣೆಯ ಮಾತನ್ನು, ಕೃತಿಯಲ್ಲಿ ಮಾಡಿ ತೋರಿಸಿದವರು.

ಅತ್ಯಂತ ಬಡ ಕುಟುಂಬದಿಂದ ಬಂದಂತ ಸಾಲುಮರದ ತಿಮ್ಮಕ್ಕ, ಮಕ್ಕಳಿಲ್ಲ ಎಂಬ ಕಾರಣಕ್ಕಾಗಿ ಗಿಡಗಳನ್ನು ನೆಡುವ ಮೂಲಕ ಅವೇ ತನ್ನ ಮಕ್ಕಳು ಎಂದು ಸಾಕಿದರು.

ಜಗತ್ತಿಗೆ, ಪರಿಸರ ಕ್ಷೇತ್ರಕ್ಕೆ ಆದರ್ಶವನ್ನು ಕೊಟ್ಟಿದ್ದಾರೆ. ಇತ್ತೀಚೆಗೆ ಬ್ರೆಜಿಲ್‌ನಲ್ಲಿ ನಡೆದ ಅತಿದೊಡ್ಡ ಸಮಾವೇಶದಲ್ಲಿ, ಜಗತ್ತಿನಲ್ಲಿ ಪರಿಸರ ಹಾಳಾಗುತ್ತದೆ. ಮನುಷ್ಯನ ಮೇಲೆ ಪರಿಣಾಮ ಬೀರುತ್ತದೆ ಎಂಬ ಚರ್ಚೆಗಳಾದವು. ಇದ್ಯಾವುದರ ಅರಿವಿಲ್ಲದೆ ಪರಿಸರ ಸಂರಕ್ಷಣೆಯ ಸಂದೇಶವನ್ನು ತಿಮ್ಮಕ್ಕನವರು ಜಗತ್ತಿಗೆ ಕೊಟ್ಟಿದ್ದಾರೆ.

ತಿಮ್ಮಕ್ಕನವರು ನಮ್ಮನ್ನು ಅಗಲಿರುವುದು ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲಿ. ಸಾಕುಮಗ ಉಮೇಶ್ ಆ ತಾಯಿಯನ್ನು ನಿಜವಾಗಿ ಸಾಕಿದ್ದಾನೆ‌. ಸರ್ಕಾರ ಎಲ್ಲ ರೀತಿಯ ಗೌರವಗಳನ್ನು ಸಮರ್ಪಣೆ ಮಾಡಲಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...