ಜೂನ್‌ 13ರಿಂದ SIR ವಿರೋಧಿ ಜನಜಾಗೃತಿ ಜಾಥಾ; 20ರಂದು ಪ್ರತಿರೋಧ ಸಮಾವೇಶ

Date:

ರಾಜ್ಯ ಚುನಾವಣಾ ಆಯೋಗ ಎಸ್‌ಐಆರ್‌ಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಎಸ್‌ಐಆರ್ ವಿರೋಧಿ ಒಕ್ಕೂಟ ಹಾಗೂ ಎದ್ದೇಳು ಕರ್ನಾಟಕದ ವತಿಯಿಂದ ಜೂ.13ರಿಂದ ಜೂ.18ರವರೆಗೆ ರಾಜ್ಯದಾದ್ಯಂತ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ.

- Advertisement -

ಈ ಕುರಿತು ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್, ರೈತ ಹೋರಾಟಗಾರ ಜೆ.ಎಂ.ವೀರಸಂಗಯ್ಯ, ಎದ್ದೇಳು ಕರ್ನಾಟಕ ಪದಾಧಿಕಾರಿ ಕೆ ಎಲ್ ಅಶೋಕ್ ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ‘ಇದು ಕರ್ನಾಟಕ ಇಲ್ಲಿ ನಡೆಯದು ಯಾವುದೇ ದುಷ್ಟ ಆಟ’ ಎಂಬ ಘೋಷಾವಾಕ್ಯದೊಂದಿಗೆ ಜನಜಾಗೃತಿ ಅಭಿಯಾನ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? ಪ್ರಜಾಪ್ರಭುತ್ವ ಕಗ್ಗೊಲೆ ಆರೋಪ; ಎಸ್‌ಐಆರ್ ವಿರುದ್ಧ ಕಲಬುರಗಿಯಲ್ಲಿ ಪ್ರತಿಭಟನೆ

ಜನಜಾಗೃತಿ ಅಭಿಯಾನವು ಐದು ಮಾರ್ಗಗಳಲ್ಲಿ ನಡೆಯಲಿದೆ. ಮಾರ್ಗ-1ರಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ, ಮಾರ್ಗ-2ರಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಮಾರ್ಗ-3ರಲ್ಲಿ ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಾವರಣಗೆರೆ, ಚಿತ್ರದುರ್ಗ, ಮಾರ್ಗ-4ರಲ್ಲಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ, ರಾಮನಗರ ಹಾಗೂ ಮಾರ್ಗ-5ರಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಜಾಥಾ ಸಾಗಲಿದೆ.

“ಇಂದಿನ ಚುನಾವಣಾ ಆಯೋಗವು ಸಂವಿಧಾನ ಆಶಯ, ಮೌಲ್ಯಗಳನ್ನು ಮರೆತು ಬಿಜೆಪಿ ಸರ್ಕಾರಕ್ಕೆ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದೆ” ಎಂದು ಆರೋಪಿಸಿರುವ ಸಂಘಟನೆಯ ಮುಖಂಡರು, “ಸಂವಿಧಾನ ಎಲ್ಲ ನಾಗರಿಕರಿಗೂ ಸಮಾನ ಮತ ಹಕ್ಕನ್ನು ನೀಡಿದೆ. ಅದನ್ನು ಕಾಪಾಡುವುದು ಚುನಾವಣಾ ಆಯೋಗದ ಕರ್ತವ್ಯ. ಮತದಾನದ ಹಕ್ಕು ಕೇವಲ ಆಡಳಿತಾತ್ಮಕ ವಿಷಯವಲ್ಲ, ಅದು ನಾಗರಿಕ ಸಮಾನತೆಯ ಮತ್ತು ಸಂವಿಧಾನ ಮೌಲ್ಯಗಳ ಪ್ರತೀಕ. ಅದನ್ನು ಮರೆತಿರುವುದು ದುರಂತ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಎಸ್‌ಐಆರ್ ನಡೆದ ರಾಜ್ಯಗಳಲ್ಲಿ 20 ಲಕ್ಷದಿಂದ ಆರಂಭಿಸಿ 3 ಕೋಟಿಯ ತನಕ ಅರ್ಹ ಮತದಾರರನ್ನು ಮತಪಟ್ಟಿಯಿಂದ ಹೊರಗಿಡಲಾಗಿದೆ. ಎಸ್‌ಐಆರ್ ಮೂಲಕ ನುಸುಳುಕೋರರನ್ನು ಪತ್ತೆ ಹಚ್ಚುತ್ತಿಲ್ಲ, ಬದಲಿಗೆ ಮತದಾನದ ಹಕ್ಕು ಇಲ್ಲದ ಎರಡನೇ ದರ್ಜೆಯ ಜನ ವರ್ಗವನ್ನು ಸೃಷ್ಟಿಸುವ ಹುನ್ನಾರ ಇದರಲ್ಲಿ ಅಡಗಿದೆ. ‘ಶರಣ, ಸೂಫಿ, ಸಂತರ ನಾಡಿನಲ್ಲಿ ಇಂತಹ ಯಾವುದೇ ದುಷ್ಟ ನೀತಿಗಳು ನಡೆಯುವುದಿಲ್ಲ’ ಎಂದು ಚುನಾವಣಾ ಆಯೋಗಕ್ಕೆ ಎಚ್ಚರಿಸಿದ್ದಾರೆ.

ಇದನ್ನು ಓದಿದ್ದೀರಾ? ಬಸವಕಲ್ಯಾಣ | ಎಸ್‌ಐಆರ್ ವಿರೋಧಿಸಿ ಮೇ 30ಕ್ಕೆ ಪ್ರತಿಭಟನೆ : ಸಂದೀಪ ಮುಕಿಂದೆ

ವಿವಿಧ ರಾಜ್ಯಗಳಲ್ಲಿ ನಡೆಸಿದ ಸ್ವರೂಪದಲ್ಲಿಯೇ ಎಸ್‌ಐಆರ್ ಅನ್ನು ಕರ್ನಾಟಕದಲ್ಲಿ ಜಾರಿ ಮಾಡಲು ಬಿಡುವುದಿಲ್ಲ. ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಫ್ಟ್ವೇರ್ ಬಳಸಬಾರದು, ಗ್ರಾಮ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಬೇಕು, ಮತದಾರರ ಪಟ್ಟಿಯನ್ನು ಮಷಿನ್ ರೀಡಬಲ್ ಫಾರ್ಮ್ಯಾಟ್ ಮೂಲಕ ಪಾರದರ್ಶಕತೆ ಪಾಲಿಸಬೇಕು, ಮನವಿ,ಆಕ್ಷೇಪಣೆ ಸಲ್ಲಿಸಲು ಅಗತ್ಯ ದಾಖಲೆ ಒದಗಿಸಲು ಕನಿಷ್ಠ ಆರು ತಿಂಗಳ ಸಮಯವಕಾಶ ನೀಡಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಮತದಾನದ ಹಕ್ಕನ್ನು ದುರ್ಬಲಗೊಳಿಸುವ, ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿಯುವ, ಆಡಳಿತಾತ್ಮಕ ಅಧಿಕಾರವನ್ನು ಮನಬಂದಂತೆ ಬಳಸುವ ಯಾವುದೇ ದುಷ್ಟ ಪ್ರಯತ್ನಗಳನ್ನು ಕರ್ನಾಟಕದ ಪ್ರಜ್ಞಾವಂತ ಜನತೆ ಸಹಿಸುವುದಿಲ್ಲ. ರಾಜ್ಯ ಚುನಾವಣಾ ಆಯೋಗ ನಾಗರಿಕ ಸಮಾಜಕ್ಕೆ ಉತ್ತರ ಕೊಡಲೇಬೇಕು. ನಮ್ಮ ಎಲ್ಲ ಹಕ್ಕೊತ್ತಾಯಗಳನ್ನು ಈಡೇರಿಸಲೇಬೇಕು ಎಂಬ ಆಗ್ರಹದೊಂದಿಗೆ ಜೂ.20 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿರೋಧ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...