ಇರಾನ್‌ನ ಅಯತೊಲ್ಲಾ ಅಲಿ ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಗ್ರಾಮದಲ್ಲಿ 3 ದಿನಗಳ ಶೋಕಾಚರಣೆ

Date:

ಇಸ್ರೇಲ್–ಅಮೆರಿಕ ದಾಳಿಯಲ್ಲಿ ಇರಾನ್ ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಗ್ರಾಮದಲ್ಲಿ ತೀವ್ರ ದುಃಖದ ವಾತಾವರಣ ನಿರ್ಮಾಣವಾಗಿದೆ.

- Advertisement -

ಅಲಿಪುರದಲ್ಲಿ ಶಿಯಾ ಮುಸ್ಲಿಮರ ಸಂಖ್ಯೆ ಹೆಚ್ಚಿದ್ದು ಸಂತಾಪ ಸೂಚಿಸಲು ಸ್ವಯಂಪ್ರೇರಿತವಾಗಿ ಮೂರು ದಿನಗಳ ಕಾಲ ಶೋಕಾಚರಣೆ ನಡೆಸಲು ತೀರ್ಮಾನಿಸಿದ್ದಾರೆ. ಇದರ ಭಾಗವಾಗಿ ಗ್ರಾಮದಲ್ಲಿ ಅಘೋಷಿತ ಬಂದ್ ಜಾರಿಯಾಗಿದ್ದು,ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಶೋಕಾಚರಣೆಯ ವೇಳೆ ಕೆಲವರು ಖಮೇನಿ ಅವರ ಫೋಟೋಗಳನ್ನು ಹಿಡಿದು ಕಣ್ಣೀರು ಹಾಕಿ ದುಃಖ ವ್ಯಕ್ತಪಡಿಸಿದರು. ಮಾನವೀಯತೆಗೆ ಪ್ರತಿಬಿಂಬವಾಗಿದ್ದ ಖಾಮಿನೈ ಅವರನ್ನು ಹತ್ಯೆ ಮಾಡಿರುವ ಅಮೆರಿಕ ಹಾಗೂ ಇಸ್ರೇಲ್ ರಾಷ್ಟ್ರಗಳು ಮುಂದಿನ ದಿನಗಳಲ್ಲಿ ತಕ್ಕ ಪಾಠ ಎದುರಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಸಿಬಿಐ, ಇ.ಡಿಗೆ ಚಾಟಿ ಬೀಸಿದ ‘ಎಂಟೆದೆಯ ಬಂಟ’ ನ್ಯಾಯಾಧೀಶ ಜಿತೇಂದ್ರ ಸಿಂಗ್

ಕಪ್ಪು ಬಟ್ಟೆ ಧರಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಶಿಯಾ ಸಮುದಾಯದ ಸದಸ್ಯರು ಇಸ್ರೇಲ್ ಹಾಗೂ ಅಮೆರಿಕ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಶಾಂತಿಯುತವಾಗಿ ನಡೆದ ಶೋಕಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

ಅಲೀಪುರದ ಶಿಯಾ ಮುಸ್ಲಿಮರಿಗೆ ಇರಾನ್ ಅಚ್ಚುಮೆಚ್ಚಿನ ತಾಣ. 20 ಸಾವಿರ ಜನಸಂಖ್ಯೆಯ ಅಲೀಪುರದಲ್ಲಿ ಶಿಯಾ ಮುಸ್ಲಿಮರದ್ದೇ ಪ್ರಾಬಲ್ಯ. ಇರಾನ್‌ ತಮ್ಮ ಪವಿತ್ರ ಧಾರ್ಮಿಕ ಭೂಮಿ ಎನ್ನುವ ಪೂಜ್ಯ ಭಾವನೆ ಇಲ್ಲಿನ ಜನರದ್ದು. ಅಯತೊಲ್ಲಾ ಅಲಿ ಖಮೇನಿ ಅವರ ಧಾರ್ಮಿಕ ಆದೇಶಗಳನ್ನು ಚಾಚೂ ತಪ್ಪದೆ ಪಾಲಿಸುವ ದೊಡ್ಡ ವರ್ಗವೇ ಇಲ್ಲಿದೆ. 1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅವರು ಅಲೀಪುರಕ್ಕೆ ಭೇಟಿ ನೀಡಿದ್ದರು. ಇದು ಇರಾನ್ ಮತ್ತು ಅಲೀಪುರದ ಬಾಂಧವ್ಯಕ್ಕೆ ಸಾಕ್ಷಿ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಬೀದರ್‌ | ಮರಣಾನಂತರ ದೇಹದಾನಕ್ಕೆ ಮುಂದಾದ ಮೂವರು ಶಿಕ್ಷಕರು, ಸಾಹಿತಿ

ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಮತ್ತು ಸಂಶೋಧನೆಗೆ ನೆರವಾಗುವ ಉದ್ದೇಶದಿಂದ ಮರಣಾನಂತರ ತಮ್ಮ...