ಕುನನ್ ಪೋಶ್ಪೋರ ಕಾರ್ಯಕ್ರಮ: ವಿದ್ಯಾರ್ಥಿಗಳನ್ನು 2 ವರ್ಷ ಅಮಾನತುಗೊಳಿಸಿದ ಅಜೀಂ ಪ್ರೇಮ್‌ಜಿ ವಿವಿ

Date:

1991ರ ಕಾಶ್ಮೀರದ ‘ಕುನನ್ ಪೋಶ್ಪೋರ’ ಘಟನೆಗೆ ಸಂಬಂಧಿಸಿದಂತೆ ಚರ್ಚಾ ಕಾರ್ಯಕ್ರಮ ಆಯೋಜಿಸಲು ಪ್ರಯತ್ನಿಸಿದ ವಿದ್ಯಾರ್ಥಿಗಳ ವಿರುದ್ಧ ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಕಠಿಣ ಕ್ರಮ ಕೈಗೊಂಡಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಜೀಂ ಪ್ರೇಮ್‌ಜಿ ವಿವಿ ಕನಿಷ್ಠ ಇಬ್ಬರು ವಿದ್ಯಾರ್ಥಿಗಳನ್ನು ಎರಡು ವರ್ಷಗಳ ಕಾಲ ಅಮಾನತು ಮಾಡಿದೆ ಮತ್ತು ಪ್ರತಿಯೊಬ್ಬರಿಗೂ ₹50,000 ದಂಡ ವಿಧಿಸಿದೆ. ಈ ಅಮಾನತು ಆದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

- Advertisement -

2026ರ ಫೆಬ್ರವರಿಯಲ್ಲಿ ‘ಸ್ಪಾರ್ಕ್’ (Spark) ಎಂಬ ವಿದ್ಯಾರ್ಥಿ ಓದುಗರ ಬಳಗವು ‘ಕುನನ್ ಪೋಶ್ಪೋರ’ ಘಟನೆಯ 35ನೇ ವರ್ಷಾಚರಣೆಯ ಅಂಗವಾಗಿ ಚರ್ಚೆಯನ್ನು ಆಯೋಜಿಸಿತ್ತು. 1991ರ ಫೆಬ್ರವರಿ 23ರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕುನನ್ ಮತ್ತು ಪೋಶ್ಪೋರಾ ಎಂಬ ಎರಡು ಹಳ್ಳಿಗಳಲ್ಲಿ ಸೈನಿಕರು ಸಾಮೂಹಿಕ ಅತ್ಯಾಚಾರ ಮತ್ತು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ಸಂತ್ರಸ್ತರ ಹೋರಾಟವನ್ನು ಸ್ಮರಿಸಲು ಫೆಬ್ರವರಿ 23 ಅನ್ನು ‘ಕಾಶ್ಮೀರ ಮಹಿಳಾ ಪ್ರತಿರೋಧ ದಿನ’ವನ್ನಾಗಿ ಆಚರಿಸಲಾಗುತ್ತದೆ. ಈ ಸಂಬಂಧ ಚರ್ಚೆಯನ್ನು ವಿದ್ಯಾರ್ಥಿಗಳು ಆಯೋಜಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಅಜೀಂ ಪ್ರೇಮ್‌ಜಿ ವಿವಿ ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರ ದಾಂಧಲೆ: ವಿದ್ಯಾರ್ಥಿಗಳ ಮೇಲೆ ಹಲ್ಲೆ

ಈ ಕಾರ್ಯಕ್ರಮವನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದಾಂಧಲೆ ನಡೆಸಿದ್ದರು. ಸರ್ಜಾಪುರ ರಸ್ತೆಯ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ಕಾರ್ಯಕರ್ತರು ಆಸ್ತಿಯನ್ನು ಧ್ವಂಸ ಮಾಡಿ, ಬೋರ್ಡ್‌ಗಳಿಗೆ ಮಸಿ ಬಳಿದಿದ್ದರು. ಅಷ್ಟು ಮಾತ್ರವಲ್ಲದೆ ವಿದ್ಯಾರ್ಥಿ ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದರು. ಆದರೆ ಈ ದಾಂಧಲೆ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳದೆ ಕಾರ್ಯಕ್ರಮ ಆಯೋಜಿಸಿದವರ ವಿರುದ್ಧ ವಿವಿ ಎಫ್‌ಐಆರ್ ದಾಖಲಿಸಿತ್ತು. ಇದೀಗ ಅಮಾನತುಗೊಳಿಸಿದೆ.

ವಿವಿಯ ಈ ಕ್ರಮವನ್ನು ವಿದ್ಯಾರ್ಥಿಗಳು ಖಂಡಿಸಿದ್ದಾರೆ. ಈ ಅಮಾನತು ಆದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ಫೆಬ್ರವರಿ 24ರಂದು ಎಬಿವಿಪಿ ಗೂಂಡಾಗಳು ಬಲವಂತವಾಗಿ ಕ್ಯಾಂಪಸ್‌ಗೆ ಪ್ರವೇಶಿಸಿ ವಿಶ್ವವಿದ್ಯಾಲಯದ ಆವರಣವನ್ನು ಧ್ವಂಸಗೊಳಿಸಿದ ಘಟನೆಗಳ ತನಿಖೆಗಾಗಿ ರಚಿಸಲಾದ ವಿಶೇಷ ಶಿಸ್ತು ಸಮಿತಿಯ ಶಿಫಾರಸುಗಳನ್ನು ಆಧರಿಸಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ವಿಧ್ವಂಸಕ ಕೃತ್ಯ ಮತ್ತು ಘೋಷಣೆ ಕೂಗಿ ಗೂಂಡಾಗಳ ಅಕ್ರಮ ಪ್ರವೇಶವನ್ನು ವಿದ್ಯಾರ್ಥಿಗಳು ವಿರೋಧಿಸಿದ್ದರು. ಆದರೆ ವಿದ್ಯಾರ್ಥಿಗಳು ನಡೆಸುತ್ತಿದ್ದ ಓದುವ ಕಾರ್ಯಕ್ರಮದ ವಿರುದ್ಧ ಎರಡು ಜಾಮೀನು ರಹಿತ ಅಪರಾಧಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಜೀಂ ಪ್ರೇಮ್‌ಜಿ ವಿವಿಯಲ್ಲಿ ಎಬಿವಿಪಿ ದಾಂಧಲೆ: ಸೂಕ್ತ ತನಿಖೆಗೆ ಎಸ್‌ಎಫ್‌ಐ ಆಗ್ರಹ

“ಅನಿಯಂತ್ರಿತ ವಿಶೇಷ ಶಿಸ್ತು ಸಮಿತಿಯ ರಚನೆಯೇ ಕಳವಳಕಾರಿ. ವಿದ್ಯಾರ್ಥಿಗಳ ಸುರಕ್ಷತೆಗೆ ಬೆದರಿಕೆ ಹಾಕಿದ ಗೂಂಡಾಗಳ ದಾಳಿಗೆ ಸಂಬಂಧಿಸಿ ವಿವಿಯಲ್ಲಿ ‘ಶಿಸ್ತು ಸಮಿತಿ’ಯನ್ನು ರಚಿಸಲಾಗಿದೆ. ಗೂಂಡಾಗಳ ದಾಳಿಗೆ ವಿದ್ಯಾರ್ಥಿಗಳೇ ಜವಾಬ್ದಾರರು ಎಂದು ಈ ಸಮಿತಿ ಭಾವಿಸುತ್ತದೆ. ಈ ಕ್ರಮವು ಪ್ರಜಾಪ್ರಭುತ್ವ ವಿರೋಧಿ ಮತ್ತು ಕಳವಳಕಾರಿಯಾಗಿದೆ” ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ವಿವಿಯಲ್ಲಿ ದಾಂಧಲೆ ನಡೆಸಿದ ಎಬಿವಿಪಿ ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳದೆ, ಓದುಗ ವಲಯದ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳುತ್ತಿರುವುದು ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...