ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಸೆಪ್ಟೆಂಬರ್ 27ಕ್ಕೆ ವಿಚಾರಣೆ ಮುಂದೂಡಿಕೆ

Date:

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ.

- Advertisement -

ಪೋಕ್ಸೊ ಪ್ರಕರಣ ರದ್ದತಿ ಮತ್ತು ಅದೇ ಪ್ರಕರಣದಲ್ಲಿ ಜಾಮೀನು ಕೋರಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರಿನ ಮಹಿಳೆಯೊಬ್ಬರು, ತಮ್ಮ ಪುತ್ರಿಯ ಮೇಲೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಆರೋಪಿಸಿ ಮಾರ್ಚ್ 14ರಂದು ಪ್ರಕರಣ ದಾಖಲಿಸಿದ್ದರು. ಆದರೆ, ಆ ಮಹಿಳೆಯು ಇತ್ತೀಚೆಗೆ (ಮೇ 26) ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಈ ನಡುವೆ ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಬಳಿಕ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿದ್ದರು.

ಅದಾದ ಬಳಿಕ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...