ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿರುಸಿನ ಮತದಾನ ಆರಂಭ

Date:

ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನವು ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದ ಹಕ್ಕು ಚಲಾಯಿಸುತ್ತಿದ್ದಾರೆ. ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಗ್ರಾಮೀಣ ಹಾಗೂ ನಗರ ಪ್ರದೇಶಗಳೆರಡರಲ್ಲೂ ಮುಂಜಾನೆಯಿಂದಲೇ ಮತಗಟ್ಟೆಗಳತ್ತ ಜನರ ದಂಡು ಹರಿದುಬರುತ್ತಿದ್ದು, ಬಿರುಸಿನ ಮತದಾನ ಕಂಡುಬರುತ್ತಿದೆ. ಮತದಾನ ಪ್ರಕ್ರಿಯೆಯು ಸಂಜೆ 6 ಗಂಟೆಯವರೆಗೆ ನಡೆಯಲಿದೆ.

- Advertisement -

​ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಸ್ಥಾನಕ್ಕೆ ಈ ಉಪಚುನಾವಣೆ ನಡೆಯುತ್ತಿದೆ. ಇಲ್ಲಿ ಕಾಂಗ್ರೆಸ್‌ನಿಂದ ಉಮೇಶ ಮೇಟಿ ಹಾಗೂ ಬಿಜೆಪಿಯಿಂದ ವೀರಣ್ಣ ಚರಂತಿಮಠ ಕಣದಲ್ಲಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ. ಇನ್ನು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಹಾಗೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ (ಶ್ರೀನಿವಾಸ್ ಟಿ.) ನಡುವೆ ನೇರ ಹಣಾಹಣಿ ಇದ್ದು, ಎಸ್‌ಡಿಪಿಐ ಕೂಡ ಕಣದಲ್ಲಿದೆ. ಈ ಎರಡೂ ಕ್ಷೇತ್ರಗಳಿಂದ ಒಟ್ಟು 34 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಈ ಲೇಖನ ಓದಿದ್ದೀರಾ?: ಚುನಾವಣೆ 2026 | ಹಿಮಂತ, ಮಮತಾ, ಸ್ಟಾಲಿನ್, ಪಿಣರಾಯಿ – ಯಾರಿಗೆ ಉಳಿಯಲಿದೆ ಅಧಿಕಾರ?

​ಮುಕ್ತ ಹಾಗೂ ಸುಗಮ ಮತದಾನಕ್ಕಾಗಿ ಚುನಾವಣಾ ಆಯೋಗವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎರಡೂ ಕ್ಷೇತ್ರಗಳಲ್ಲಿ ಸುಮಾರು 2,500 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಮತಗಟ್ಟೆಗಳ ಮುಂದೆ ಕಾಂಗ್ರೆಸ್ ಮತ್ತು ಬಿಜೆಪಿ ಏಜೆಂಟರು ಮತ ಚೀಟಿಗಳನ್ನು ನೀಡುತ್ತಿದ್ದು, ಮತದಾನ ಚುರುಕು ಪಡೆದುಕೊಂಡಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪುತ್ರ ನವೀನ ಚರಂತಿಮಠ ಮುಂಜಾನೆಯೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಉಪಚುನಾವಣೆಯ ಫಲಿತಾಂಶವು ಮೇ 4 ಸೋಮವಾರದಂದು ಪ್ರಕಟವಾಗಲಿದೆ.

​ರಾಜ್ಯದ ಈ ಎರಡೂ ಕ್ಷೇತ್ರಗಳ ಉಪಚುನಾವಣೆಯ ಜೊತೆಗೆ, ಇಂದು ಕೇರಳ (140 ಸ್ಥಾನಗಳು), ಅಸ್ಸಾಂ (126 ಸ್ಥಾನಗಳು) ಮತ್ತು ಪುದುಚೇರಿ (30 ಸ್ಥಾನಗಳು) ವಿಧಾನಸಭಾ ಚುನಾವಣೆಗಳಿಗೂ ಕೂಡ ಬಿರುಸಿನ ಮತದಾನ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...