ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

Date:

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ ಕಾಲುವೆಗೆ ಎಸೆದು, ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಹೃದಯವಿದ್ರಾವಕ, ಆಘಾತಕಾರಿ ಘಟನೆ ವರದಿಯಾಗಿದೆ.

- Advertisement -

ಬಳ್ಳಾರಿ ನಗರದ ಅಲ್ಲಿಪುರ ಬಳಿ ಈ ದುರಂತ ಸಂಭವಿಸಿದೆ. ಮೃತರನ್ನು ಬಳ್ಳಾರಿ ನಗರದ ಮಿಲ್ಲರ್ ಪೇಟೆ ನಿವಾಸಿ 29 ವರ್ಷದ ಲತೀಪಾ ಸಿಮ್ರಾನ್, 3 ವರ್ಷದ ಮಹಮ್ಮದ್ ಅಯಾನ್ ಹಾಗೂ 2 ವರ್ಷದ ಆಯಿಷಾ ಫಾತಿಮಾ ಎಂದು ಗುರುತಿಸಲಾಗಿದೆ. ಪತಿಯ ವರದಕ್ಷಿಣೆ ಕಿರುಕುಳ ಮತ್ತು ನಿತ್ಯದ ದೈಹಿಕ ಹಾಗೂ ಮಾನಸಿಕ ಹಿಂಸೆಯಿಂದ ನೊಂದ ತಾಯಿ ಲತೀಪಾ ಸಿಮ್ರಾನ್, ತನ್ನ ಇಬ್ಬರು ಮಕ್ಕಳನ್ನು ವೇಲ್‌ಗೆ ಕಟ್ಟಿ ತುಂಗಭದ್ರಾ ಕಾಲುವೆಗೆ ಎಸೆದಿದ್ದು, ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಘಟನೆಗೆ ಸಂಬಂಧಿಸಿದಂತೆ ಮೊದಲು ತಾಯಿ ಲತೀಪಾ ಸಿಮ್ರಾನ್ ಅವರ ಮೃತದೇಹ ಪತ್ತೆಯಾಗಿದ್ದು, ನಂತರ ಕರ್ನಾಟಕದ ಗಡಿಭಾಗದ ನಾಗಲಾಪುರ ಬಳಿ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ವರದಕ್ಷಿಕೆಗಾಗಿ ಪತಿ ಸದ್ದಾಂ ಹುಸೇನ್ ಮತ್ತು ಕುಟುಂಬದವರು ನಿತ್ಯ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿದ್ದರು ಎಂದು ಸಿಮ್ರಾನ್ ಅವರ ಕುಟುಂಬಸ್ಥರು ಆರೋಪಿಸಿದ್ದು, ಪತಿ ಸೇರಿದಂತೆ ಆರು ಜನರ ವಿರುದ್ಧ ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಬೌದ್ಧ ಧರ್ಮ ಚಾರಿಕಾ ಕಾರ್ಯಕ್ರಮ

ಮಾತಾ ರಮಾಬಾಯಿ ಅಂಬೇಡ್ಕರ್ ಮಹಿಳಾ ಟ್ರಸ್ಟ್ ಹಾಗೂ ಸರ್ವೋದಯ ಸಿದ್ಧಾರ್ಥ ಕ್ಲಬ್...

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....