ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಬರ ತಾಲೂಕು ಪಟ್ಟಿ ಘೋಷಿಸಿದರೂ ಹೊಲದತ್ತ ಬಾರದ ಅಧಿಕಾರಿಗಳು; ರೈತರ ಆರೋಪ
ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.