ಬೆಂಗಳೂರು | ಹಿರಿಯ ಪತ್ರಕರ್ತ ಆರ್ ಜಯಕುಮಾರ್ ಇನ್ನಿಲ್ಲ

Date:

Advertisements

ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಡಗಿನವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು.

ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿ ಮಾಡಿದ್ದರು.

Advertisements

ಜನಪರ ಹೋರಾಟದಲ್ಲಿ ಭಾಗವಹಿಸಿದ್ದ ಕಾಮ್ರೆಡ್ ಜಯಕುಮಾರ್ ಅವರು, ಇತ್ತೀಚೆಗೆ ಗಾಂಧಿ ಮರೆತ ನಾಡಿನಲ್ಲಿ ಮತ್ತು ಕಾಡು ಹಾದಿಯ ಬೆಳಕಿನ ಜಾಡಿನಲ್ಲಿ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು.

ಇಂದು ಸಂಜೆ ಅವರ ದೇಹವನ್ನು ಬೆಂಗಳೂರು ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.

ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ

ಹಿರಿಯ ಮತ್ತು ಕ್ರಿಯಾಶೀಲ ಪತ್ರಕರ್ತರಾಗಿದ್ದ ಆರ್.ಜಯಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡ ಮಾಡುವ ಪ್ರಶಸ್ತಿಗೆ ಆರ್.ಜಯಕುಮಾರ್ ಭಾಜನರಾಗಿದ್ದರು. ಅನಾರೋಗ್ಯದ ಕಾರಣದಿಂದ ಚಿತ್ರದುರ್ಗದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದ ಕಾರಣ, ಮೈಸೂರಿನ ಅವರ ತೋಟದ ಮನೆಗೆ ಹೋಗಿ ಅಲ್ಲಿ ಕೆಯುಡಬ್ಲೂಜೆ ಪ್ರಶಸ್ತಿ ಪ್ರದಾನ ಮಾಡಿತ್ತು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಜಯಕುಮಾರ್ ನಿಧನದಿಂದ ಕ್ರೀಯಾಶೀಲ ಪತ್ರಕರ್ತನನ್ನು ಸುದ್ದಿಮನೆ ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ಕರುಣಿಸಲಿ ಎಂದು ತಗಡೂರು ಪ್ರಾರ್ಥಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X