ಬಂಡವಾಳ ಹೂಡಿಕೆಗೆ ಬಾಂಗ್ಲಾ ಉದ್ಯಮಿಗಳು ಆಸಕ್ತಿ, ಜವಳಿ ಸಚಿವರೊಂದಿಗೆ ಚರ್ಚೆ

Date:

ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಇಂದು (ಜೂ.11) ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದರು.

- Advertisement -

ಪೆಂಟಗಾನ್ ನಿಟ್ ಕಾಂನ ಮಾಹಿತಿ ಪಡೆದ ಸಚಿವರು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿದೆ. ಗೌರಿಬಿದನೂರು, ಚಿಕ್ಕಬಳ್ಳಾಪುರ, ಶಿಗ್ಗಾವಿಯಲ್ಲಿ ಯೂನಿಟ್ ಆರಂಭಿಸಬಹುದು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ಮೂರೂ ಕಡೆ ಅಗತ್ಯ ಮೂಲ ಸೌಕರ್ಯಗಳಿವೆ. ಶಿಗ್ಗಾವಿಗೆ ವಿಮಾನ ಸಂಪರ್ಕ ಮತ್ತು ರೈಲ್ವೆ ಸಂಪರ್ಕ ಇದೆ. ಕೇವಲ ಮೂರು ತಿಂಗಳ ಅವಧಿಯಲ್ಲಿ ಯೂನಿಟ್ ಆರಂಭಿಸಬಹುದು. ಇನ್ನೆರಡು ಸ್ಥಳಗಳು ರಾಜಧಾನಿಗೆ ಸಮೀಪದಲ್ಲಿವೆ. ಈ ಸ್ಥಳಗಳಿಗೆ ಭೇಟಿ ನೀಡಿ, ಯಾವುದು ಸೂಕ್ತ ಎಂಬುದನ್ನು ನಿರ್ಧರಿಸಿ ಎಂದು ಸಚಿವರು ಸಲಹೆ ಕೊಟ್ಟರು.

ಪೆಂಟಗಾನ್ ನಿಟ್ಕಾಂ ಬಗ್ಗೆ ಮಾಹಿತಿ ಪಡೆದ ಸಚಿವರು, “ಬಾಂಗ್ಲಾದಲ್ಲಿ ಅಲ್ಲಿನ ಸರ್ಕಾರ ಜವಳಿ ಉದ್ಯಮಕ್ಕೆ ಯಾವ ಯಾವ ಸೌಕರ್ಯ ಕಲ್ಪಿಸಿದೆ ಎಂಬ ವಿವರ ಪಡೆದರು. ಬಾಂಗ್ಲಾಗೆ ಹೋಲಿಕೆ ಮಾಡಿದರೆ ಕರ್ನಾಟಕ ಸರ್ಕಾರವೇ ಹೆಚ್ಚಿನ ಸೌಕರ್ಯ ಕಲ್ಪಿಸುತ್ತಿದೆ. ವಿದ್ಯುತ್ ಶುಲ್ಕ ಬಾಂಗ್ಲಾಗಿಂತ ಕರ್ನಾಟಕದಲ್ಲಿ ಕಡಿಮೆ ಇದೆ. ರಾಜ್ಯ ಸರ್ಕಾರ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡುತ್ತಿದೆ” ಎಂದು ತಿಳಿಸಿದರು.

ಪೆಂಟಗಾನ್ ನಿಟ್ ಕಾಂ ಬಗ್ಗೆ ಮಾಹಿತಿ ನೀಡಿದ ಮಾಲೀಕ ಬಿಪಿನ್ ಮುದ್ರಾ ಅವರು, “ವಾರ್ಷೀಕ 13 ಸಾವಿರ ಮಿಲಿಯನ್ ಡಾಲರ್ ವಹಿವಾಟು ಹೊಂದಿದ್ದು, 1980ರಿಂದ ಜವಳಿ ಕ್ಷೇತ್ರದಲ್ಲಿದ್ದೇವೆ. ಉದ್ಯಮ ವಿಸ್ತರಣೆ ಉದ್ದೇಶದಿಂದ ಕರ್ನಾಟಕದಲ್ಲಿ ಉದ್ಯಮ ಆರಂಭಿಸುವ ಅಭಿಲಾಷೆ ಹೊಂದಿದ್ದೇವೆ” ಎಂದು ಮಾಹಿತಿ ನೀಡಿದರು.

ಬಾಂಗ್ಲಾದೇಶದಲ್ಲಿ ಪ್ರತಿ ಯೂನಿಟ್ ವಿದ್ಯುತ್‌ಗೆ 9 ರೂ. ಇದೆ. ಸದ್ಯದ ಪರಿಸ್ಥಿತಿ ಅಲ್ಲಿ ಜವಳಿ ಕ್ಷೇತ್ರಕ್ಕೆ ಪೂರಕ ವಾತಾವರಣ ಇಲ್ಲ. ಕರ್ನಾಟಕದ ನಂಟು ಇರುವ ಕಾರಣ ಇಲ್ಲಿ ಉದ್ಯಮ ಆರಂಭಿಸುವ ಉದ್ದೇಶ ಹೊಂದಿದ್ದೇವೆ. ಏಕಗವಾಕ್ಷಿ ಪದ್ದತಿ ಇದ್ದರೆ ಅನುಕೂಲ, ಆಡಳಿತಾತ್ಮಕವಾಗಿ ವಿಳಂಬವಾಗದಿದ್ದರೆ ತ್ವರಿತವಾಗಿ ಬಂಡವಾಳ ಹೂಡಲು ಸಿದ್ದರಿದ್ದೇವೆ” ಎಂದು ತಿಳಿಸಿದರು.

ಜವಳಿ ಇಲಾಖೆ ಆಯುಕ್ತೆ ಜ್ಯೋತಿ, ಕೆಎಸ್‌ಟಿಐಡಿಸಿ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ರವೀಂದ್ರ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...