ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ, ಸೆ.1ರಿಂದ ಆರಂಭ

Date:

Advertisements

ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವು ಅ.5ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ಎಲ್ಲೆಡೆಯಿಂದ ಬಸವಣ್ಣನ ಸಾವಿರಾರು ಅನುಯಾಯಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಒಕ್ಕೂಟದ ಹಲವು ಸ್ವಾಮೀಜಿಗಳು ಅಭಿಯಾನ ಮತ್ತು ಸಮಾರೋಪ ಕಾರ್ಯಕ್ರಮದ ರೂಪುರೇಷೆ ಕುರಿತು ಸಚಿವರನ್ನು ಅವರ ಇಲ್ಲಿನ ಅಧಿಕೃತ ನಿವಾಸದಲ್ಲಿ ಬುಧವಾರ ಭೇಟಿಯಾಗಿ, ಎರಡನೇ ಸುತ್ತಿನ ಸಮಾಲೋಚನೆ ನಡೆಸಿದರು.

ಬಳಿಕ ಮಾತನಾಡಿದ ಸಚಿವರು, “ಬಸವಣ್ಣನ ಹುಟ್ಟೂರಾದ ಬಸವನ ಬಾಗೇವಾಡಿಯಲ್ಲಿ ಸೆ.1ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್‌ 5ರಂದು ಬೆಂಗಳೂರಿನಲ್ಲಿ ಅದ್ಧೂರಿ ಸಮಾರೋಪ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗುವುದು” ಎಂದು ತಿಳಿಸಿದ್ದಾರೆ.

Advertisements

ಸಭೆಯಲ್ಲಿ ಗದಗಿನ ತೋಂಟದಾರ್ಯ ಸಂಸ್ಥಾನ ಮಠದ ಸಿದ್ಧರಾಮ ಮಹಾಸ್ವಾಮಿ, ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಭಾಲ್ಕಿಯ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು, ನಾಗನೂರು ರುದ್ರಾಕ್ಷಿ ಮಠದ ಅಲ್ಲಮ ಪ್ರಭು ಸ್ವಾಮೀಜಿ, ಬಸವ ಧರ್ಮ ಪೀಠದ ಬಸವ ಯೋಗಿ ಸ್ಬಾಮೀಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಿವೃತ್ತ ಐಎಎಸ್ ಅಧಿಕಾರಿಗಳಾದ ಎಸ್.ಎಂ.ಜಾಮದಾರ್, ಡಾ.ಸಿ.ಸೋಮಶೇಖರ್ ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬಳು ಗೃಹಿಣಿ ಬಲಿ

ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ...

ಅರಸು ಜನ್ಮದಿನದಂದೇ ಅಧಿವೇಶನದಲ್ಲಿ ಒಳಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ

ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗ ರಚಿಸಲು ತೀರ್ಮಾನ ಒಳಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆ...

ಒಳಮೀಸಲಾತಿ ತೀರ್ಮಾನ, ನಮ್ಮ ಸರ್ಕಾರದಿಂದ ಅರಸು ಅವರಿಗೆ ಸಲ್ಲಿಸಿದ ನಮನ: ಡಿ ಕೆ ಶಿವಕುಮಾರ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ವಿಚಾರದಲ್ಲಿ ಎಲ್ಲಾ...

ರಾಜ್ಯಾದ್ಯಂತ ಬೀದಿನಾಯಿ ಪ್ರಕರಣ: ಕೇವಲ ಎಂಟು ತಿಂಗಳಲ್ಲಿ 26 ಮಂದಿ ಸಾವು, 2.86 ಲಕ್ಷ ಪ್ರಕರಣ ದಾಖಲು

ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿತ್ಯವೂ ಜನರಲ್ಲಿ ಆತಂಕ ಮೂಡಿಸುತ್ತಿದೆ. ಇದರ...

Download Eedina App Android / iOS

X