ಬಸವಣ್ಣನವರ ಅವಹೇಳನ : ರವಿ ಹಂಜ್‌, ವಿಶ್ವೇಶ್ವರ ಭಟ್‌ಗೆ ಜಾಮೀನು

Date:

ʼಬಸವ ಮಂಟಪʼ ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್‌ ಮತ್ತು ಪ್ರಕಾಶಕ ವಿಶ್ವೇಶ್ವರ ಭಟ್‌ಗೆ ಬೆಂಗಳೂರಿನ ಸೆಷನ್ಸ್‌ ನ್ಯಾಯಾಲಯ ಷರತ್ತು ಬದ್ದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

- Advertisement -

ಇತ್ತೀಚೆಗೆ ಬಿಡುಗಡೆಯಾದ ʼಬಸವ ಮಂಟಪʼ ಪುಸ್ತಕ ಮತ್ತು ಸಂದರ್ಶನದಲ್ಲಿ ಬಸವಣ್ಣನವರ ಕುರಿತು ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಅಂಶಗಳಿವೆ ಎಂಬ ಆರೋಪದ ಮೇಲೆ ಇಬ್ಬರ ವಿರುದ್ಧ ಎಫ್‌ಐಆರ್‌ ಹಾಕಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ವಿವಾದದ ನಂತರ ಲೇಖಕ ರವಿ ಹಂಜ್‌ ಅವರು ಅಮೆರಿಕಕ್ಕೆ ತೆರಳಿದ್ದರು ಎನ್ನಲಾಗಿದ್ದರೂ, ಅವರನ್ನು ಕೇರಳದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡರು. ಇನ್ನು ಪ್ರಕಾಶಕ ವಿಶ್ವೇಶ್ವರ ಭಟ್‌ ಅವರು ಆಸ್ಟ್ರೇಲಿಯಾ ಪ್ರವಾಸದಲ್ಲಿ ಇದ್ದಾರೆ.

ಬಸವಣ್ಣನವರ ಅವಹೇಳನದ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆಗಳ ಬೆನ್ನಲ್ಲೇ, ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು, ಕಾನೂನು ಕ್ರಮ ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು.

ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಇಬ್ಬರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನವೆಂಬರ್‌ 24ರಂದು ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯಾಲಯ, ಇಂದು ಇಬ್ಬರಿಗೂ ಕೆಳಗಿನ ಐದು ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿತು.

ಆದೇಶ ಹೊರಬಿದ್ದ 15 ದಿನಗಳ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು

ತಲಾ ಒಂದು ಲಕ್ಷದ ಬಾಂಡ್‌ ಮತ್ತು ಅಷ್ಟೇ ಮೊತ್ತಕ್ಕೆ ಜಾಮೀನುದಾರರನ್ನು ಒದಗಿಸಬೇಕು.

ಪ್ರತಿ ಭಾನುವಾರ ತನಿಖಾಧಿಕಾರಿಯ ಮುಂದೆ ಹಾಜರಾತಿ ದಾಖಲಿಸಬೇಕು

ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ವ್ಯಾಪ್ತಿ ಪ್ರದೇಶದಿಂದ ಹೊರಗೆ ಹೋಗುವಂತಿಲ್ಲ.

ಸಾಕ್ಷಿಯನ್ನು ತಿರುಚಬಾರದು ಮತ್ತು ನಾಶಮಾಡದೆ ತನಿಖೆಗೆ ಸಹಕರಿಸಬೇಕು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೈಹಿಕ–ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ: ಪೊಲೀಸ್ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸಲಹೆ

ಪೊಲೀಸರು ದೇಶದ ಒಳಗಿನ ಸೈನಿಕರಂತೆ ಕಾರ್ಯನಿರ್ವಹಿಸುವ ಮೂಲಕ ಸಮಾಜದ ರಕ್ಷಣೆ ಹಾಗೂ...

ಹೊನಗನಹಳ್ಳಿ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆ!

ವಿಜಯಪುರ ಜಿಲ್ಲೆಯ ಹುಬ್ಬಳ್ಳಿ ರಸ್ತೆಯ ಹೊನಗನಹಳ್ಳಿ ಗ್ರಾಮದ ಸಮೀಪದ ಜಮೀನಿನಲ್ಲಿ ಅಪರಿಚಿತ...

ಬಾಗಲಕೋಟೆ |ಎಣ್ಣೆಕಾಳು, ದ್ವಿದಳ ಧಾನ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಶೇ.೩೩ರಷ್ಟು ಸಹಾಯಧನ

ರೈತರು ಹಾಗೂ ಕೃಷಿ ಆಧಾರಿತ ಸಂಸ್ಥೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ೨೦೨೬-೨೭ನೇ...