ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಜಾಮೀನು ನೀಡಿದೆ.
ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತ ಇತರೆ ಆರೋಪಿಗಳಿಗೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯವು ಏಳು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿತ್ತು.
ಇದನ್ನು ಓದಿದ್ದೀರಾ? ಬಹುಕೋಟಿ ಅದಿರು ಕಳ್ಳಸಾಗಾಣಿಕೆ: ಶಾಸಕ ಸತೀಶ್ ಸೈಲ್ ಜೈಲ್ ಜಾಡಿನ ಕುತೂಹಲಕರ ಕಥನ
ಆದರೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠವು ಈ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ತಿಳಿಸಿದೆ.
ಜೊತೆಗೆ ದಂಡದ ಮೊತ್ತದಲ್ಲಿ ಶೇ.25ರಷ್ಟು ಮೊತ್ತವನ್ನು ಕೋರ್ಟ್ನಲ್ಲಿ ಠೇವಣಿ ಇರಲು ಹೈಕೋರ್ಟ್ ತಿಳಿಸಿದೆ. ಇದಕ್ಕೆ ಆರು ವಾರಗಳ ಗಡುವನ್ನು ಕೂಡಾ ಹೈಕೋರ್ಟ್ ನೀಡಿದೆ. ಆರೋಪಿಗಳು ನಾಳೆ ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ.
