ಬೆಳಗಾವಿ | ಮಧ್ಯರಾತ್ರಿಯಿಂದಲೇ ರಾಜ್ಯೋತ್ಸವ ಸಂಭ್ರಮ, ಇಂದು ಬೃಹತ್‌ ಮೆರವಣಿಗೆ

Date:

ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆರಂಭಗೊಂಡಿದೆ. ಸಿಡಿಮದ್ದು ಪ್ರದರ್ಶನ ಮೂಲಕ ಕನ್ನಡ ಅಭಿಮಾನಿಗಳು ರಾತ್ರಿವಿಡಿ ಕುಣಿದು ಕುಪ್ಪಳಿಸಿದ್ದಾರೆ.

- Advertisement -

ಇದೇ ಮೊದಲ ಬಾರಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಿಡಿ ಮದ್ದಿನ ಪ್ರದರ್ಶನ ಹಮ್ಮಿಕೊಂಡಿದ್ದರು. ಸರಿಯಾಗಿ ರಾತ್ರಿ 12 ಗಂಟೆ ಆಗುತ್ತಿದ್ದಂತೆ ಸಿಡಿದ ಸಿಡಿ ಮದ್ದುಗಳು ಆಕಾಶದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ಕರ್ನಾಟಕ ರಾಜ್ಯೋತ್ಸವಕ್ಕೆ ಜಯವಾಗಲಿ, ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಜಯವಾಗಲಿ, ಯಾರಪ್ಪಂದ ಏನೈತಿ – ಬೆಳಗಾವಿ ನಮ್ಮದೈತಿ, ಪ್ರಾಣ ಕೊಟ್ಟೇವು – ಬೆಳಗಾವಿ ಬಿಡೆವು..” ಸೇರಿ ಮುಂತಾದ ಘೋಷಣೆಗಳನ್ನು ಮೊಳಗಿಸಿ ನೆರೆದಿದ್ದ ಜನರು ಸಂಭ್ರಮಿಸಿದರು.

ಕೈಯಲ್ಲಿ ಕೆಂಪು – ಹಳದಿ ಬಾವುಟಗಳನ್ನು ಹಿಡಿದು ಬೆಳಗಾವಿ ಎಂದೆಂದಿಗೂ ಕನ್ನಡಿಗರ ಸಾಮ್ರಾಜ್ಯ ಎಂದು ಕೂಗಿ ಕೂಗಿ ಹೇಳಿದರು. ರಾತ್ರಿ 1 ಗಂಟೆವರೆಗೂ ಜನರು ಚೆನ್ನಮ್ಮ ವೃತ್ತದಿಂದ ಕದಲಲಿಲ್ಲ. ಕನ್ನಡ ಡಿಜೆ ಹಾಡುಗಳಿಗೆ ಹುಚ್ಚೆದ್ದು ಕುಣಿದರು. ಯಾವುದೇ ಅನಾಹುತ ಸಂಭವಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು.

Advertisements

”ಶನಿವಾರದ ಮೆರವಣಿಗೆ ಎಷ್ಟೊಂದು ಅದ್ಧೂರಿ‌ ಆಗಿರಲಿದೆ ಎನ್ನುವುದಕ್ಕೆ ಮಧ್ಯರಾತ್ರಿಯ ಸಂಭ್ರಮವೇ ಸಾಕ್ಷಿ. ಸುಮಾರು 8 ಲಕ್ಷ ಜನರು ಸೇರಲಿದ್ದಾರೆ. ಇದು ಒಂದು ಎಚ್ಚರಿಕೆಯ ಸಂದೇಶ ಕೂಡ ಆಗಲಿದೆ. ಇನ್ಮುಂದೆ ಗುಂಡಾಗಿರಿ‌ಯನ್ನು ನಾವು ಸಹಿಸಿಕೊಳ್ಳುವುದಿಲ್ಲ. ನಾಳೆ ಕರಾಳ ದಿನಕ್ಕೆ ಅವಕಾಶ ಕೊಟ್ಟರೆ ದೊಡ್ಡ ಕ್ರಾಂತಿ ಆಗುವುದು ನಿಶ್ಚಿತ. ಏನಾದರೂ‌ ಅನಾಹುತ‌ ಉಂಟಾದರೆ ಅದಕ್ಕೆ ಜಿಲ್ಲಾಡಳಿತವೇ ನೇರ ಹೊಣೆ ಆಗುತ್ತದೆ” ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...