ಬೆಳಗಾವಿ | ಜಗತ್ತಿನ 2ನೇ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣಗೊಳಿಸಿದ ಸಿದ್ದರಾಮಯ್ಯ

Date:

ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಮಂಗಳವಾರ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಮತ್ತು ಕಲ್ಬುರ್ಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರ ಕುಟುಂಬಸ್ಥರಿಗೂ ಸರ್ಕಾರದಿಂದ ಮುಖ್ಯಮಂತ್ರಿಗಳು ಅಭಿನಂದಿಸಿದರು.

ರಾಷ್ಟ್ರಭಕ್ತಿ ಸಾರುವ ಸಂದೇಶ

“ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಜಾರಿಗೆ ತಂದರು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಈ ಧ್ವಜದಲ್ಲಿ ಮೂರು ವರ್ಣ ಮತ್ತು ಅಶೋಕ ಚಕ್ರವನ್ನು ಒಳಗೊಂಡಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿದ್ದು, ದೇಶದ ಸ್ವಾಭಿಮಾನ, ಆರ್ಥಿಕತೆ ಮತ್ತು ತ್ಯಾಗಬಲಿದಾನ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಹಾಗೂ ಭಾರತೀಯರಿಗೆ ರಾಷ್ಟ್ರಭಕ್ತಿಯನ್ನು ಸಾರುವ ಸಂದೇಶವನ್ನು ನೀಡುತ್ತದೆ ಎಂದರು.ಬಿಳಿಬಣ್ಣ ಶಾಂತಿ ಮತ್ತು ಸತ್ಯವನ್ನು ಪ್ರತಿನಿಧಿಸಿದರೆ, ಹಸಿರು ಸಮೃದ್ಧಿಯನ್ನು ಬಿಂಬಿಸುತ್ತದೆ. ಅಶೋಕ ಚಕ್ರ ನಿರಂತರವಾಗಿ ದೇಶದ ಆರ್ಥಿಕತೆಯನ್ನು, ಹಾಗೂ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದರ ಸಂಕೇತವಾಗಿದೆ” ಎಂದು ಸಿಎಂ ವಿವರಿಸಿದರು.

ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು

“ನಮ್ಮ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು. ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು. ಈ ಸಂದರ್ಭದಲ್ಲಿ ರಾಷ್ಟ್ರಕ್ಕಾಗಿ ತ್ಯಾಗಬಲಿದಾನ, ಹೋರಾಟ ಮಾಡಿದವರನ್ನು ಸ್ಮರಿಸುವುದು ಅಗತ್ಯ. ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ ಹೋರಾಟ ನಡೆಯಿತು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. ಇದು ನಡೆದು ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಕೆಳದ ವರ್ಷ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಸುವರ್ಣ ಸೌಧದ ಪಕ್ಕದಲ್ಲಿ ಸ್ಥಾಪಿಸಲಾಗಿದೆ” ಎಂದರು.

ನಾವೆಲ್ಲರೂ ಜಾತ್ಯತೀತರಾಗಬೇಕು

“ನಾವೆಲ್ಲರೂ ದೇಶಪ್ರೇಮಿಗಳಾಗಬೇಕು. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ನಾವೆಲ್ಲರೂ ಜಾತ್ಯತೀತರಾಗಬೇಕಾಗಿರುವುದು ಅವಶ್ಯಕ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಆಗ ಮಾತ್ರ ಸಮಸಮಜಾ ನಿರ್ಮಾಣ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಜಾತ್ಯತೀತ ರಾಷ್ಟ್ರ ನಿರ್ಮಾಣ ಕಷ್ಟವಾಗುತ್ತದೆ” ಎಂದು ಅಭಿಪ್ರಾಯ ಪಟ್ಟರು.

“ಸ್ವಾತಂತ್ರ್ಯ ಬಂದು 79 ವರ್ಷಗಳಾಗಿವೆ. ನಾವೆಷ್ಟರಮಟ್ಟಿಗೆ ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಈ ದೇಶದಲ್ಲಿ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದಿಲ್ಲದೇ ಹೋದರೆ ಮನುಷ್ಯರಾಗಿ ಬಾಳುವುದು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳಲ್ಲಿ, ಯುವಕರಲ್ಲಿ ಈ ಮನೋಭಾವ ಬೆಳೆಯಬೇಕು” ಎಂದರು.

ಸಂವಿಧಾನದ ಪೀಠಿಕೆ ಓದು ಕಾರ್ಯಕ್ರಮ

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅದಕ್ಕಾಗಿಯೇ ಇಂಥ ಐತಿಹಾಸಿಕ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರು ಕೊಟ್ಟಿರುವ ರಾಷ್ಟ್ರಧ್ವಜಕ್ಕಾಗಿ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ಅರಮನೆ ಸರ್ಕಾರದ್ದು; ರಾಜವಂಶಸ್ಥರಿಗೆ ವಾಸಿಸಲು ಜಾಗ ಕೊಟ್ಟಿದ್ದೇವೆ: ಸಚಿವ ಯತೀಂದ್ರ

ದಸರಾ ಆಚರಣೆಯಲ್ಲಿ ಸಮನ್ವಯದ ಕೊರತೆಯಿತ್ತು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...