ಬೆಂಗಳೂರು | ಅವಧಿ ಮೀರಿದ ಮಾಂಸ, ತರಕಾರಿಗಳಲ್ಲಿ ಶಿಲೀಂಧ್ರ – ‘ಫೈವ್ ಸ್ಟಾರ್’ ಹೋಟೆಲ್‌ಗಳ ಅವಾಂತರ

Date:

ಬೆಂಗಳೂರಿನ ಪ್ರತಿಷ್ಠಿತ ‘ತ್ರೀ ಸ್ಟಾರ್’ ಮತ್ತು ‘ಫೈವ್ ಸ್ಟಾರ್‌’ ಹೋಟೆಲ್‌ಗಳ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FSDA) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ತಪಾಸಣೆ ಮಾಡಿದ್ದಾರೆ. ಈ ವೇಳೆ, ಅವಧಿ ಮೀರಿದ ಆಹಾರ ಪದಾರ್ಥಗಳ ಸಂಗ್ರಹ, ತರಕಾರಿಗಳ ಮೇಲೆ ಶಿಲೀಂಧ್ರ, ಅಸಮರ್ಪಕ ಆಹಾರ ಸಂಗ್ರಹಣೆ ಸೇರಿದಂತೆ ಹಲವು ಆಹಾರ ಸುರಕ್ಷತಾ ನಿಯಮಗಳು ಉಲ್ಲಂಘನೆಯಾಗಿವೆ ಎಂಬುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

- Advertisement -

ಆಹಾರ ಸುರಕ್ಷತಾ ಅಧಿಕಾರಿಗಳ 30 ತಂಡಗಳನ್ನು ರಚಿಸಿ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಒಟ್ಟು 26 ತ್ರೀ ಸ್ಟಾರ್ ಮತ್ತು ಫೈವ್‌ ಸ್ಟಾರ್‌ ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಈ ವೇಳೆ, ಆರು ಪ್ರಮುಖ ಪಂಚತಾರಾ (ಫೈವ್‌ ಸ್ಟಾರ್‌) ಹೋಟೆಲ್‌ಗಳಿಂದ 250 ಕೆ.ಜಿ.ಗೂ ಹೆಚ್ಚು ಮಾಂಸ ಮತ್ತು ಮೀನು, 207 ಕೆ.ಜಿ. ತರಕಾರಿ, 32 ಲೀಟರ್ ಅವಧಿ ಮೀರಿದ ಹಾಲು ಹಾಗೂ ಮೂರು ಕೆಜಿ ಬೇಕರಿ ಉತ್ಪನ್ನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ನಾಶಪಡಿಸಿದ್ದಾರೆ.

ಯಾವ ಹೋಟೆಲ್‌ಗಳಲ್ಲಿ ಎಷ್ಟು ಆಹಾರ ವಶ?

ಲಲಿತ್ ಅಶೋಕ್ (ಸೌತ್ ಅನೆಕ್ಸ್): 76 ಕೆ.ಜಿ. ಮಾಂಸ, 200 ಕೆ.ಜಿ. ತರಕಾರಿ ಹಾಗೂ ಅವಧಿ ಮೀರಿದ 32 ಲೀಟರ್ ಹಾಲನ್ನು ವಶಪಡಿಸಿಕೊಂಡು ನಾಶಪಡಿಸಲಾಗಿದೆ.
ಶಾಂಗ್ರಿ-ಲಾ: 15 ಕೆ.ಜಿ. ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.
ಫೋರ್ ಸೀಸನ್ಸ್: 19 ಕೆ.ಜಿ. ಮಾಂಸ ಪತ್ತೆಯಾಗಿದೆ.
ವಿವಾಂತ ವೈಟ್ಫೀಲ್ಡ್: ಅವಧಿ ಮೀರಿದ ಮೂರು ಕೆ.ಜಿ. ಬೇಕರಿ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.
ತಾಜ್ ಯಶವಂತಪುರ: 72 ಕೆ.ಜಿ. ಮಾಂಸ ಮತ್ತು ಮೀನು ಪತ್ತೆಯಾಗಿದ್ದು, ಅದನ್ನು ನಾಶಪಡಿಸಲಾಗಿದೆ.
ರ್‍ಯಾಡಿಸನ್ ಬ್ಲೂ: 50 ಕೆ.ಜಿ. ಚಿಕನ್, 25 ಕೆ.ಜಿ. ಮಾಂಸ, 23 ಕೆ.ಜಿ. ಮೀನು ಹಾಗೂ ಏಳು ಕೆ.ಜಿ. ತರಕಾರಿಯನ್ನು ವಶಪಡಿಸಿಕೊಳ್ಳಲಾಗಿದೆ.

ತರಕಾರಿಗಳ ಮೇಲೆ ಶಿಲೀಂಧ್ರ

ತಪಾಸಣೆ ವೇಳೆ ಹಲವು ಗಂಭೀರ ಆಹಾರ ಸುರಕ್ಷತಾ ಲೋಪಗಳು ಕಂಡುಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. FSSAI ನಿಯಮಗಳಿಗೆ ಅನುಗುಣವಾಗಿ ಆಹಾರ ಪದಾರ್ಥಗಳಿಗೆ ಲೇಬಲ್ ಹಾಕದಿರುವುದು, ತಪ್ಪಾದ ಲೇಬಲಿಂಗ್, ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಸಂಗ್ರಹಿಸಿಟ್ಟಿರುವುದು, ಶುಚಿತ್ವವಿಲ್ಲದ ರೀತಿಯಲ್ಲಿ ಆಹಾರ ನಿರ್ವಹಣೆ ಹಾಗೂ ಸಂಗ್ರಹಣೆ ಮಾಡಿರುವುದು ತಪಾಸಣೆಯಲ್ಲಿ ಪತ್ತೆಯಾಗಿದೆ.

ಕೆಲವು ತರಕಾರಿಗಳ ಮೇಲೆ ಶಿಲೀಂಧ್ರ ಬೆಳೆದಿರುವುದನ್ನೂ ಅಧಿಕಾರಿಗಳು ಗುರುತಿಸಿದ್ದಾರೆ. ಅಲ್ಲದೆ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ಪದಾರ್ಥಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಬೇಕೆಂಬ ನಿಯಮವನ್ನೂ ಕೆಲವು ಕಡೆ ಪಾಲಿಸಿಲ್ಲ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ.

ಅಡುಗೆಮನೆ ಮತ್ತು ಆಹಾರ ಸಂಗ್ರಹಣಾ ಪ್ರದೇಶಗಳಲ್ಲಿ ನೈರ್ಮಲ್ಯದ ಕೊರತೆ, FSSAI ನಿಯಮದಂತೆ ಮಾಂಸದ ಉತ್ಪನ್ನಗಳಿಗೆ ಲೇಬಲ್ ಹಾಕದಿರುವುದು ಹಾಗೂ ಅವಧಿ ಮೀರಿದ ಹಾಲು, ಬೇಕರಿ ಉತ್ಪನ್ನಗಳು, ಚಿಕನ್, ಮೀನು, ಮಾಂಸ ಮತ್ತು ತರಕಾರಿಗಳನ್ನು ಸಂಗ್ರಹಿಸಿಟ್ಟಿರುವುದು ಪ್ರಮುಖ ಉಲ್ಲಂಘನೆಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕನ್‌ನಿಂದ ಚೀಸ್‌ವರೆಗೆ ಮಾದರಿ ಸಂಗ್ರಹ

ತಪಾಸಣೆ ಸಂದರ್ಭದಲ್ಲಿ; ಟೀ ಪುಡಿ, ಚಿಕನ್, ಮಟನ್, ಮೀನು, ಅಡುಗೆ ಎಣ್ಣೆ, ಮೆಣಸಿನ ಪುಡಿ, ಅರಿಶಿನ ಪುಡಿ, ಟೊಮೆಟೊ ಸಾಸ್, ನಿಂಬೆ ರಸ, ಚೀಸ್, ಹಪ್ಪಳ, ಗೋಡಂಬಿ, ಶುಂಠಿ, ಕಾಳುಮೆಣಸಿನ ಪುಡಿ, ಮಸಾಲೆ ಪುಡಿ ಹಾಗೂ ಹಾಲಿನ ಮಾದರಿಗಳನ್ನು ಪಡೆದುಕೊಂಡಿರುವ ಅಧಿಕಾರಿಗಳು ಪ್ರಯೋಗಾಲಯ ಪರೀಕ್ಷೆಗೆ ಕಳಿಸಿದ್ದಾರೆ.

ಪ್ರಯೋಗಾಲಯದ ಪರೀಕ್ಷಾ ವರದಿ ಬಂದ ನಂತರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಅನ್ವಯ ನಿಯಮ ಉಲ್ಲಂಘಿಸಿದ ಹೋಟೆಲ್‌ಗಳ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತಾ ಆಯುಕ್ತರ ಕಚೇರಿ ತಿಳಿಸಿದೆ.

ಇತ್ತೀಚೆಗಷ್ಟೇ, ರಾಜ್ಯದ ಶಾಲಾ-ಕಾಲೇಜುಗಳ ಸುತ್ತಮುತ್ತ ಹೆಚ್ಚಿನ ಕೊಬ್ಬು, ಸಕ್ಕರೆ ಹಾಗೂ ಉಪ್ಪು ಹೊಂದಿರುವ ಜಂಕ್‌ಫುಡ್ ಮಾರಾಟವನ್ನು ನಿಯಂತ್ರಿಸುವಂತೆ FSDA ಸಲಹೆ ನೀಡಿತ್ತು. ಕರ್ನಾಟಕದ 134 ಶಾಲಾ-ಕಾಲೇಜುಗಳ ಸುತ್ತಮುತ್ತಲಿನ ಆಹಾರ ಮಾರಾಟ ಮಳಿಗೆಗಳ ಪರಿಶೀಲನೆಯ ನಂತರ ಈ ಸೂಚನೆ ಹೊರಡಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...