ಬೆಂಗಳೂರು | ಮಧ್ಯರಾತ್ರಿ 3 ಗಂಟೆಯಾದರೂ ಪಟಾಕಿ ಸದ್ದು; ಫನ್ ವರ್ಲ್ಡ್ ವಿರುದ್ಧ ರಮ್ಯಾ ಕಿಡಿ

Date:

ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ ನಿಯಮಗಳನ್ನು ಗಾಳಿಗೆ ತೂರುವ ಘಟನೆಗಳು ಮುಂದುವರಿದಿವೆ. ಈ ಬಗ್ಗೆ ಕಾಂಗ್ರೆಸ್‌ ಮಾಜಿ ಸಂಸದೆ, ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಯಮ ಉಲ್ಲಂಘನೆಗಳ ವಿರುದ್ಧ ಎಂದು ಕಿಡಿಕಾರಿದ್ದಾರೆ.

- Advertisement -

ಅರಮನೆ ಮೈದಾನದ ಬಳಿಯಿರುವ ‘ಫನ್ ವರ್ಲ್ಡ್’ ಮನರಂಜನಾ ಕೇಂದ್ರದಲ್ಲಿ ಮಧ್ಯರಾತ್ರಿ ಬೆಳಗಿನ ಜಾವ 3 ಗಂಟೆಯ ಸುಮಾರಿನಲ್ಲೂ ಪಟಾಕಿಗಳನ್ನು ಸಿಡಿಸಿ, ಅಬ್ಬರದ ಸಂಗೀತ ಹಾಕಲಾಗಿದೆ. ಸುಪ್ರೀಂ ಕೋರ್ಟ್ ಆದೇಶಗಳು ಮತ್ತು ಕಾನೂನು ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಲಾಗಿದೆ ಎಂದು ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರ ಪೊಲೀಸರಿಗೆ ಸಾಮಾಜಿಕ ಜಾಲತಾಣದ ಮೂಲಕ ದೂರು ನೀಡಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ನಡುರಾತ್ರಿಯೂ ಪಟಾಕಿ ಸಿಡಿಸುತ್ತಿರುವ ಎರಡು ವಿಡಿಯೋ ತುಣುಕುಗಳನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿರುವ ರಮ್ಯಾ, “ಈಗ ಸುಮಾರು ಬೆಳಗಿನ ಜಾವ 3 ಗಂಟೆ. ಆದರೂ ಫನ್ ವರ್ಲ್ಡ್‌ನಲ್ಲಿ ಪಟಾಕಿಗಳನ್ನು ಸಿಡಿಸಲಾಗುತ್ತಿದೆ. ಜೋರಾಗಿ ಸಂಗೀತ ಹಾಕಲಾಗುತ್ತಿದೆ. ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ವಿಶೇಷ ಅನುಮತಿ ಪಡೆದಿದ್ದರೂ ಮಧ್ಯರಾತ್ರಿಯ ನಂತರ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ವಿಶೇಷ ಸಂದರ್ಭಗಳಲ್ಲಿ ಕೆಲವು ಸಡಿಲಿಕೆಗಳನ್ನು ನೀಡಬೇಕಾಗುತ್ತದೆ ಎಂಬುದು ನನಗೂ ಅರ್ಥವಾಗುತ್ತದೆ. ಆದರೆ, ಇಂತಹ ಸಮಯದಲ್ಲಿ ಅಲ್ಲ. ಹತ್ತಿರದಲ್ಲೇ ಆಸ್ಪತ್ರೆಗಳಿವೆ. ಸುತ್ತಮುತ್ತ ಹಿರಿಯ ನಾಗರಿಕರು ಹಾಗೂ ಮಕ್ಕಳು ವಾಸಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

Advertisements

ತಮ್ಮ ಪೋಸ್ಟ್‌ನಲ್ಲಿ ಬೆಂಗಳೂರು ನಗರ ಪೊಲೀಸರು ಮತ್ತು ಉತ್ತರ ವಿಭಾಗದ ಡಿಸಿಪಿ ಅವರ ಖಾತಗಳನ್ನು ಟ್ಯಾಗ್‌ ಮಾಡಿ, ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಶಬ್ದಮಾಲಿನ್ಯಕ್ಕೆ ಸಂಬಂಧಿಸಿದಂತೆ ಜಾರಿಯಲ್ಲಿರುವ ನಿಯಮ ಮತ್ತು ಆದೇಶಗಳೇನು?

ದೇಶಾದ್ಯಂತ ಶಬ್ದಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮತ್ತು ವಿವಿಧ ಹೈಕೋರ್ಟ್‌ಗಳು ಹಲವು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿವೆ. 2005ರ ಶಬ್ದಮಾಲಿನ್ಯ ಪ್ರಕರಣದಲ್ಲಿ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಶಬ್ದ ಉಂಟುಮಾಡುವ ಪಟಾಕಿಗಳನ್ನು ಸಿಡಿಸುವುದು ಮತ್ತು ರಾತ್ರಿ ವೇಳೆಯಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.

ಅಂತೆಯೇ, ‘ಶಬ್ದಮಾಲಿನ್ಯ (ನಿಯಂತ್ರಣ ಮತ್ತು ನಿಯಮಾವಳಿ) ನಿಯಮಗಳು-2000’ರ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸಬೇಕಾದರೆ ಸಂಬಂಧಪಟ್ಟ ಪ್ರಾಧಿಕಾರದಿಂದ ಲಿಖಿತ ಅನುಮತಿ ಪಡೆಯುವುದು ಕಡ್ಡಾಯ. ಹಬ್ಬಗಳು ಅಥವಾ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂದರ್ಭದಲ್ಲಿಯೂ ರಾಜ್ಯ ಸರ್ಕಾರವು ನಿರ್ದಿಷ್ಟ ದಿನಗಳಿಗೆ ಮಾತ್ರ ರಾತ್ರಿ 10ರಿಂದ 12 ಗಂಟೆಯವರೆಗೆ ಸೀಮಿತ ವಿನಾಯಿತಿ ನೀಡಬಹುದೇ ಹೊರತು, ಮಧ್ಯರಾತ್ರಿ 12 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಗೆ ಅಥವಾ ಪಟಾಕಿ ಸಿಡಿಸಲು ಅವಕಾಶವಿಲ್ಲ.

ಕರ್ನಾಟಕ ಸರ್ಕಾರವೂ ಕೂಡ 2022ರಲ್ಲಿ ರಾತ್ರಿ ವೇಳೆ ಧ್ವನಿವರ್ಧಕಗಳ ಬಳಕೆಯ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದಲ್ಲಿ ಮಹಿಳಾ ಕಾರ್ಮಿಕರ ಭಾಗವಹಿಸುವಿಕೆ ಹೆಚ್ಚಳ; ಆದರೆ, ಉದ್ಯೋಗ ಗುಣಮಟ್ಟ – ವೇತನ ಅಂತರ ಭಾರೀ ದೂರ!

ದೇಶದಲ್ಲಿ ಮಹಿಳಾ ಉದ್ಯೋಗಿ ಪಡೆ ಮತ್ತು ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ...

ಬೀದರ್‌ | ಸಾಲಬಾಧೆ : ಇಬ್ಬರು ರೈತರ ಆತ್ಮಹತ್ಯೆ

ಸಾಲಬಾಧೆ ಹಾಗೂ ಬೆಳೆ ನಷ್ಟದಿಂದಾಗಿ ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಕಮಲನಗರ...

ಬ್ರೆಜಿಲ್‌ ಜನತಂತ್ರಕ್ಕೆ ಅಗ್ನಿಪರೀಕ್ಷೆ: ನೀವು ತಿಳಿಯಲೇಬೇಕಾದ  ಸಂಗತಿಗಳಿವು!

ಬ್ರೆಜಿಲ್‌ನಲ್ಲಿ ಅಕ್ಟೋಬರ್ 25ರಂದು ಎರಡನೇ ಸುತ್ತಿನ ಮತದಾನ ನಡೆಯಲಿದೆ. ಜಗತ್ತಿನ ಗಮನ...

ಬಳ್ಳಾರಿ | ಹೊಂಡದಲ್ಲಿ ಮುಳುಗಿ ತಂದೆ, ಮಗ ಸಾವು

ಬಳ್ಳಾರಿ ನಗರದ ಕೋಟೆಯಲ್ಲಿರುವ ಹೊಂಡದಲ್ಲಿ ಮುಳುಗಿ ತಂದೆ ಮತ್ತು ಮಗ ಮಂಗಳವಾರ...