ಬೆಂಗಳೂರಿನಲ್ಲಿ ಘೋರ ಕೃತ್ಯ: ಶಿಶುಪಾಲನಾ ಕೇಂದ್ರದಲ್ಲಿ ಪುಟ್ಟ ಮಕ್ಕಳನ್ನು ‘ವಾಷಿಂಗ್ ಮೆಷಿನ್‌’ನಲ್ಲಿ ಕೂಡಿಟ್ಟು ಕ್ರೌರ್ಯ

Date:

ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಒಂದಾದ ‘ಕ್ಯಾಪ್‌ಜೆಮಿನಿ’ ಸಂಸ್ಥೆಯ ಕ್ಯಾಂಪಸ್‌ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ಘೋರ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಕೇವಲ 2-3 ವರ್ಷದ ಪುಟ್ಟ ಮಕ್ಕಳ ಮೇಲೆ ಅಲ್ಲಿನ ಆಯಾಗಳು ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಹಾಗೂ ತೀವ್ರ ಕ್ರೌರ್ಯ ಎಸಗಿರುವ ಘಟನೆ ನಡೆದಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

- Advertisement -

‘ಕ್ಯಾಪ್‌ಜೆಮಿನಿ’ ಕಂಪನಿಯ ಬ್ರೂಕ್‌ಫೀಲ್ಡ್ ಕ್ಯಾಂಪಸ್‌ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ಆರೋಪಿ ಆಯಾಗಳು ಅಳುವ ಮಕ್ಕಳನ್ನು ಹೆದರಿಸಲು ಬಲವಂತವಾಗಿ ವಾಷಿಂಗ್ ಮೆಷಿನ್‌ಗಳ ಒಳಗೆ ಹಾಕಿ ಲಾಕ್ ಮಾಡುತ್ತಿದ್ದರು. ಅಷ್ಟೇ ಅಲ್ಲದೆ, ನೀರು ತುಂಬಿದ ಕಿರಿದಾದ ಪೈಪ್‌ಗಳ ಒಳಗೆ ಮಕ್ಕಳನ್ನು ತಳ್ಳಿದ್ದರು. ಶೌಚಾಲಯದ ಸಣ್ಣ ಜಾಗಗಳಲ್ಲಿ ಮಕ್ಕಳನ್ನು ಕೂಡಿಟ್ಟು ದೈಹಿಕವಾಗಿ ಬೆದರಿಸುತ್ತಿದ್ದರು. ಮಾತ್ರವಲ್ಲದೆ, ಶೌಚಾಲಯಕ್ಕೆ ಬಳಸುವ ‘ಟಾಯ್ಲೆಟ್ ಜೆಟ್ ಸ್ಪ್ರೇ’ ಮೂಲಕ ಮಕ್ಕಳ ಮುಖಕ್ಕೆ ನೀರು ಹೊಡೆಯುತ್ತಿದ್ದರು. ಮಕ್ಕಳು ಅಳುವುದನ್ನು ನಿಲ್ಲಿಸದಿದ್ದಾಗ, ಬಲವಂತವಾಗಿ ಅವರ ಬಾಯಿಯ ಒಳಗೆ ನೀರನ್ನು ಸ್ಪ್ರೇ ಮಾಡುತ್ತಿದ್ದರು ಎಂಬ ಆಘಾತಕಾರಿ ಕ್ರೌರ್ಯ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಆಯಾಗಳು ಕ್ರೌರ್ಯ ಮೆರೆದಿರುವ ಘಟನೆಗಳ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಲ್ಲದೆ, ಕೆಲವು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪ್ರೊಬೇಷನರಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ವಾಟ್ಸ್‌ಆ್ಯಪ್ ಮತ್ತು ದೂರವಾಣಿ ಕರೆಗಳ ಮೂಲಕ ಬಂದ ದೂರುಗಳನ್ನು ಆಧರಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ತಿಲಕೇಶ್ ಕುಮಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಆಯಾಗಳಾದ ಮಂಜುಳಾ, ವಿಜಯಲಕ್ಷ್ಮಿ, ಭವಾನಿ, ಸಿಂಧು ಹಾಗೂ ಬಿಂದು ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 “ನಮ್ಮ ವಾಟ್ಸ್‌ಆ್ಯಪ್‌ಗೆ ಕೆಲವು ವಿಡಿಯೋಗಳು ಬಂದಿವೆ. ಅವುಗಳಲ್ಲಿ ಮಕ್ಕಳು ಜೋರಾಗಿ ಅಳುತ್ತಿರುವ ಮತ್ತು ಅವರ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ಎಸಗುತ್ತಿರುವುದು ಕಂಡುಬಂದಿದೆ. ಜೂನ್ 25ರಂದು ಈ ಘಟನೆಗಳು ಬೆಳಕಿಗೆ ಬಂದಿದೆ” ಎಂದು ತಿಲಕೇಶ್‌ ಹೇಳಿದ್ದಾರೆ.

“ಕ್ಯಾಪ್‌ಜೆಮಿನಿ ಕ್ಯಾಂಪಸ್‌ನಲ್ಲಿ ಕೆಲಸ ಮಾಡುವ ಐಟಿ ವೃತ್ತಿಪರರು ತಮ್ಮ ಕರ್ತವ್ಯದ ಅವಧಿಯಲ್ಲಿ ಮಕ್ಕಳನ್ನು ಈ ಕೇಂದ್ರದಲ್ಲಿ ಬಿಟ್ಟು ಹೋಗುತ್ತಿದ್ದರು. ಅಲ್ಲಿನ ಸಿಬ್ಬಂದಿ ಈ ಪುಟಾಣಿ ಮಕ್ಕಳನ್ನು ಇಷ್ಟು ಕ್ರೂರವಾಗಿ ನಡೆಸಿಕೊಂಡಿರುವುದನ್ನು ಕಂಡು ಪೋಷಕರು ಮತ್ತು ಅಧಿಕಾರಿಗಳು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ‘ನಾವು ಕಟ್ಟಾ ಬಿಜೆಪಿಗರೇ, ಆದರೆ…’; NEET ಪ್ರತಿಭಟನೆ ಬಳಿಕ ಯುಪಿಯಲ್ಲಿ ಬದಲಾವಣೆಯ ಬಿರುಗಾಳಿ

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ವೈಟ್‌ಫೀಲ್ಡ್ ವಿಭಾಗದ ಪೊಲೀಸ್ ಉಪ ಆಯುಕ್ತ (DCP) ಸೈದುಲು ಅದಾವತ್, “ನಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ. ಈ ಕೃತ್ಯಕ್ಕೆ ಕಾರಣರಾದ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲಾಗುತ್ತಿದೆ. ಶೀಘ್ರದಲ್ಲೇ ಅವರನ್ನು ವಿಚಾರಣೆಗೆ ಒಳಪಡಿಸಲಾತ್ತದೆ,” ಎಂದು ಹೇಳಿದ್ದಾರೆ.

ಘಟನೆ ಬೆಳಕಿಗೆ ಬಂದ ಬಳಿಕ ತನ್ನ ಕ್ಯಾಂಪಸ್‌ನಲ್ಲಿರುವ ಶಿಶುಪಾಲನಾ ಕೇಂದ್ರವನ್ನು ತಾತ್ಕಾಲಿಕವಾಗಿ ಮುಚ್ಚುವುದಾಗಿ ಕ್ಯಾಪ್‌ಜೆಮಿನಿ ಸಂಸ್ಥೆ ಘೋಷಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಸಂಸ್ಥೆ, “ನಮ್ಮ ಉದ್ಯೋಗಿಗಳು ಮತ್ತು ಅವರ ಕುಟುಂಬದವರ ಆರೋಗ್ಯ, ಸುರಕ್ಷತೆ ಹಾಗೂ ಯೋಗಕ್ಷೇಮವೇ ನಮ್ಮ ಮೊದಲ ಆದ್ಯತೆ. ನಾವು ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಕ್ಯಾಂಪಸ್‌ನಲ್ಲಿರುವ ಕೇಂದ್ರವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ,” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

ಈ ದಿನ ಸಂಪಾದಕೀಯ | ಡಿಕೆಶಿ ಪ್ರತಿರೋಧಕ್ಕೆ ಮಣಿದ ಚುನಾವಣಾ ಆಯೋಗ; ಈವರೆಗಿನ ಅಕ್ರಮಗಳಿಗೆ ಹೊಣೆ ಯಾರು?

ಕರ್ನಾಟಕದಲ್ಲಿ ಎಸ್‌ಐಆರ್‌ ಆರಂಭವಾಗುವ ಮೊದಲೇ ನಾಗರಿಕ ಸಂಘಟನೆಗಳು ಕಾಂಗ್ರೆಸ್‌ ಗೆ ಎಸ್‌ಐಆರ್‌...