ಬೆಂಗಳೂರು | ಜೈಲಲ್ಲಿ ಮೊಬೈಲ್ ಫೋನ್, ಟಿವಿ ಬಳಸುತ್ತಿರುವ ಕೈದಿಗಳು: ವಿಡಿಯೋ ವೈರಲ್

Date:

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗಿನ ಕೈದಿಗಳು ಮೊಬೈಲ್ ಫೋನ್‌ಗಳನ್ನು ಬಳಸುತ್ತಿರುವ ಮತ್ತು ಟಿವಿ ನೋಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೈದಿಗಳು ನೆಟ್‌ಫ್ಲಿಕ್ಸ್‌ನಂತಹ ಪ್ಲಾಟ್‌ಫಾರ್ಮ್‌ಗಳನ್ನೂ ಬಳಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

- Advertisement -

ಈ ಬೆನ್ನಲ್ಲೇ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡ ಸಿಬ್ಬಂದಿಯನ್ನು ಶಿವಾನಂದ ಕರಲಬಟ್ಟಿ, ನಿರಂಜನ್ ಎ ಕಾಮತ್ ಮತ್ತು ಹನುಮಂತಪ್ಪ ಹಡಪದ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ದರ್ಶನ್‌ ಫೋಟೊವನ್ನು ಬಹಿರಂಗಪಡಿಸಿದ್ದು ಜೈಲಿನಲ್ಲಿದ್ದ ಮತ್ತೊಬ್ಬ ಪಾತಕಿ

ವಿಡಿಯೋದಲ್ಲಿ ಕೈದಿಗಳ ಗುಂಪು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದ ಬಗ್ಗೆ ಚರ್ಚಿಸುತ್ತಿರುವುದು ಕಂಡುಬಂದಿದೆ. ಹಾಗೆಯೇ ‘ಈ ಬಾರಿ ಕಪ್ ನಮ್ಮದು’ ಎಂದು ಹೇಳುವುದೂ ಕಂಡುಬಂದಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂವರೆ ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ದಾಖಲಾಗಿರುವ ಕೈದಿಗಳು ಮಾರ್ಚ್ 27ರಂದು ಈ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಜೈಲಿನ ಹೊರಗಿರುವ ತಮ್ಮ ಸ್ನೇಹಿತರಿಗೆ ಕಳುಹಿಸಿದ್ದಾರೆ. ಈ ವಿಡಿಯೋ ಬಳಿಕ ವೈರಲ್ ಆಗಿದೆ.

ತನಿಖೆ ವೇಳೆ ಶೌಚಾಲಯದ ಬಳಿಕ ಪೈಪ್‌ಲೈಲ್‌ ಇರುವ ಸ್ಥಳದಲ್ಲಿ ಮೊಬೈಲ್ ಫೋನ್‌ಗಳನ್ನು ಬಚ್ಚಿಟ್ಟಿರುವುದು ಬಹಿರಂಗವಾಗಿದೆ. ಸದ್ಯ ಕೈದಿಗಳು ಮೊಬೈಲ್ ಫೋನ್‌ಗಳನ್ನು ಬಳಸುವುದು ಅಧಿಕಾರಿಗಳಿಗೆ ಮೊದಲೇ ತಿಳಿದಿತ್ತೆ ಅಥವಾ ಇದು ಪೊಲೀಸ್ ಮಹಾನಿರ್ದೇಶಕ (ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳು) ಅಲೋಕ್ ಕುಮಾರ್ ಅವರ ಪ್ರತಿಷ್ಠೆಯನ್ನು ಹಾಳುಮಾಡುವ ಉದ್ದೇಶಪೂರ್ವಕ ಪ್ರಯತ್ನವೇ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...