ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಬಸವಣ್ಣನ ಹೆಸರು ಕೇಂದ್ರಕ್ಕೆ ಶಿಫಾರಸು: ಸಿಎಂ ಭರವಸೆ

Date:

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಬಸವಣ್ಣ ಅವರ ಹೆಸರು ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

- Advertisement -

ವಿಶ್ವಗುರು ಬಸವಣ್ಣ ಅವರನ್ನು ʻಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ರ ಸಮಾರೋಪ ಸಮಾರಂಭದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿಧ್ಯದಲ್ಲಿ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಹಾಗೂ 2 ಲಕ್ಷಕ್ಕೂ ಅಧಿಕ ಶರಣಾನುಯಾಯಿಗಳು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಸಿಎಂ, ಮುಂದಿನ ವರ್ಷದ ಒಳಗೆ ಅನುಭವ ಮಂಟಪದ ನಿರ್ಮಾಣ ಪೂರ್ತಿ ಮಾಡುತ್ತೇವೆ. ವಚನ ವಿವಿ ಮಾಡುವ ಬೇಡಿಕೆ ಕೊಟ್ಟಿದ್ದೀರಿ, ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯ ಮಾಡುತ್ತೇವೆ. ನಾನು ರಾಜಕೀಯದಲ್ಲಿ ಏನು ಮಾತು ಕೊಡುತ್ತೇನೊ, ಆ‌ ಮಾತು ನಡೆಸಿಕೊಡುತ್ತೇನೆ ಎಂದು ಆಶ್ವಾಸನೆ ನೀಡಿದರು.

ಸಿಎಂ ಭಾಷಣ ಮಾಡುವ ವೇಳೆಯೇ ನಮ್ಮ ಮೆಟ್ರೋಗೆ ಬಸವಣ್ಣ ಹೆಸರು ಇಡಲು ಆಗ್ರಹ ಕೇಳಿಬಂದಿತು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಮೆಟ್ರೋ ನಿಲ್ದಾಣಕ್ಕೆ ನಮ್ಮ ಪಾಲು ಜಾಸ್ತಿ ಇರಬಹುದು. ಆದರೆ ನಮ್ಮ ಮೆಟ್ರೋಗೆ ಬಸವಣ್ಣ ಹೆಸರು ಇಡುವುದು ನಮ್ಮ ಕೈಯಲ್ಲಿಲ್ಲ, ಕೇಂದ್ರ ಸರ್ಕಾರಕ್ಕೆ ಇದರ ಶಿಫಾರಸು ಮಾಡುತ್ತೇವೆ. ನಮ್ಮದೇ ಸರ್ಕಾರದ ವ್ಯಾಪ್ತಿಯಲ್ಲಿ ಇದ್ದಿದ್ದರೆ ಈ ಸ್ಥಳದಲ್ಲೇ ಒಪ್ಪಿಗೆ ಕೊಡುತ್ತಿದ್ದೆ ಎಂದು ಹೇಳಿದರು.

ನಾನು ಬಸವಣ್ಣನ ಅಭಿಮಾನಿ, ಅವರ ತತ್ವ ಸಿದ್ಧಾಂತಗಳಲ್ಲಿ‌ ನಂಬಿಕೆ, ಬದ್ಧತೆ ಇಟ್ಟುಕೊಂಡವನು. ಆ ಕಾರಣಕ್ಕೆ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಅಂತ ನಮ್ಮ ಸರ್ಕಾರ ಘೋಷಣೆ ಮಾಡಿದೆ. ಆ ಮೂಲಕ ಇಡೀ ಸರ್ಕಾರ ಬಸವಣ್ಣರಿಗೆ ಗೌರವ ಸೂಚಿಸಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ವಿಚಾರದಲ್ಲಿ ಕರ್ನಾಟಕದಿಂದ ಬಿಹಾರಕ್ಕೆ ಬಿಜೆಪಿಯ ಬದಲಾದ ನಿಲುವು

ಈ ಸಮಾಜದಲ್ಲಿ ಜಾತಿ ವ್ಯವಸ್ಥೆ, ಮೇಲುಕೀಳು ಇರೋವರೆಗೂ ಬಸವಣ್ಣನ ತತ್ವಗಳು ಅತ್ಯಂತ ಪ್ರಸ್ತುತ. ನಾವು ಮೂಲತಃ ಮಾನವರು, ಆಮೇಲೆ ಭಾರತೀಯರು. ನಾನು ಕಾನೂನು ವಿದ್ಯಾರ್ಥಿ ಆಗಿದ್ದಾಗಿನಿಂದ ಈವರೆಗೂ ಬಸವಣ್ಣನ ಅನುಯಾಯಿ. ಸಂವಿಧಾನದಲ್ಲಿ ಬಸವಣ್ಣ ವಿಚಾರಗಳನ್ನು ಅಳವಡಿಸಿದ್ದಾರೆ. ಬಸವ ವಿಚಾರಗಳು, ಸಂವಿಧಾನದ ವಿಚಾರಗಳು ಹೆಚ್ಚೂ ಕಡಿಮೆ ಒಂದೇ ಆಗಿವೆ ಎಂದು ಬಣ್ಣಿಸಿದರು.

ನಾನು ಜಾಸ್ತಿ ಭಾಷಣ ಮಾಡಲು ಹೋಗಲ್ಲ. ನಾನು ಏನೇನೋ ಮಾತಾಡಿದರೆ ಅದು ವಿವಾದ ಆಗಬಹುದು. ನಾವೆಲ್ಲರೂ ಶೂದ್ರರು, ಚತುರ್ವರ್ಣದಲ್ಲಿ ನಾಲ್ಕನೇ ಸ್ಥಾನ. ಬ್ರಾಹ್ಮಣರು, ವೈಶ್ಯರು, ಕ್ಷತ್ರಿಯರು, ಶೂದ್ರರು‌ ಈಗ ಪಂಚಮರು ಅಂತ ಒಂದಿದೆ. ನಾವೆಲ್ಲರೂ ಒಂದೇ, ನಾವೆಲ್ಲರೂ ಶೂದ್ರರು. ನಮ್ಮ ಸಮಾಜದಲ್ಲಿ ವೈರುಧ್ಯತೆ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಅಸಮಾನತೆ ಇದೆ. ಇವನ್ನು ಹೋಗಲಾಡಿಸುವ ತನಕ ನಿಜವಾದ ಸ್ವಾತಂತ್ರ್ಯ ಬಂದಂತಾಗಲ್ಲ. ಅಸಮಾನತೆಗೆ ಬೆಂಬಲ ಕೊಡೋರು ಸ್ವಾತಂತ್ರ್ಯದ ಸೌಧ ಕೆಡವೋರು. ಈ ಎಚ್ಚರಿಕೆಯನ್ನು ಅಂಬೇಡ್ಕರ್ ಆವತ್ತೇ ಕೊಟ್ಟಿದ್ದರು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...