ಬೆಂಗಳೂರು : ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳ ತಲೆದಂಡ

Date:

ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆ ಪರಿಹಾರಕ್ಕೆ ನಗರಾಭಿವೃದ್ಧಿ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಮೇ ಅಂತ್ಯದೊಳಗೆ ನಗರದಲ್ಲಿನ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಡೆಡ್‌ಲೈನ್ ನೀಡಲಾಗಿದ್ದು, ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

- Advertisement -

ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಈ ಕುರಿತು ಖಡಕ್ ಸೂಚನೆ ನೀಡಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನವೇ ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂದು ತಾಕೀತು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬೆಂಗಳೂರಿನ ರಸ್ತೆ ಗುಂಡಿಗಳು ದೇಶ-ವಿದೇಶ ಮಟ್ಟದಲ್ಲಿ ನಗರಕ್ಕೆ ಮಾನಹಾನಿ ಉಂಟುಮಾಡಿರುವ ಹಿನ್ನೆಲೆ ಸರ್ಕಾರ ಗಂಭೀರವಾಗಿ ವಿಚಾರವನ್ನು ಪರಿಗಣಿಸಿದೆ. ಈ ಹಿಂದೆಯೂ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಗಡುವು ನೀಡಿದ್ದರೂ ರಸ್ತೆ ದುರಸ್ತಿ ಕಾರ್ಯ ಪೂರ್ಣ ಪ್ರಮಾಣದಲ್ಲಿ ಆಗಿರಲಿಲ್ಲ. ಇದೀಗ ಬೇಸಿಗೆ ಅಂತ್ಯದೊಳಗೆ ಗುಂಡಿ ಮುಚ್ಚಲೇಬೇಕೆಂದು ಸ್ಪಷ್ಟ ಸೂಚನೆ ನೀಡಲಾಗಿದೆ.

ಇದೇ ವೇಳೆ ನಗರದಲ್ಲಿ ನಡೆಯುತ್ತಿರುವ ವೈಟ್‌ಟಾಪಿಂಗ್ ರಸ್ತೆ ಕಾಮಗಾರಿಗಳಲ್ಲೂ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಕಾಮಗಾರಿ ವೇಗ ಹೆಚ್ಚಿಸಬೇಕು ಎಂದು ಸೂಚಿಸಿದ್ದಾರೆ.

ಬಿಟುಮಿನ್ ಕೊರತೆಯಿಂದ ರಸ್ತೆ ಕಾಮಗಾರಿ ತಡ :

ಇನ್ನೊಂದೆಡೆ, ಅಂತಾರಾಷ್ಟ್ರೀಯ ಯುದ್ಧ ಪರಿಸ್ಥಿತಿಯಿಂದಾಗಿ ಬಿಟುಮಿನ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು ರಸ್ತೆ ಕಾಮಗಾರಿಗಳು ನಿಧಾನಗೊಂಡಿವೆ. ಪೆಟ್ರೋಲಿಯಂ ಸಂಸ್ಕರಣೆಯ ಉಪ ಉತ್ಪನ್ನವಾಗಿರುವ ಬಿಟುಮಿನ್ ರಸ್ತೆ ಗುಣಮಟ್ಟ ಕಾಪಾಡಲು ಅತ್ಯಾವಶ್ಯಕವಾಗಿದ್ದು, ಭಾರತ ತನ್ನ ಅಗತ್ಯದ ಸುಮಾರು 50 ಶೇಕಡಾ ಬಿಟುಮಿನ್ ಅನ್ನು ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತದೆ.

ಇರಾನ್, ಇರಾಕ್, ಬಹ್ರೇನ್ ಸೇರಿದಂತೆ ಹಲವು ದೇಶಗಳಿಂದ ಬಿಟುಮಿನ್ ಆಮದು ಆಗುತ್ತಿದ್ದು, ಯುದ್ಧ ಪರಿಸ್ಥಿತಿಯಿಂದ ಸರಬರಾಜು ಕುಂಠಿತವಾಗಿದೆ. ಜೊತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಟುಮಿನ್ ದರ ಏರಿಕೆಯೂ ರಸ್ತೆ ಕಾಮಗಾರಿಗಳ ಮೇಲೆ ಪರಿಣಾಮ ಬೀರಿದೆ.

ಈ ಹಿನ್ನೆಲೆ ಸಾರ್ವಜನಿಕ ಕಾಮಗಾರಿಗಳ ಇಲಾಖೆ (PWD) ಜೊತೆ ಚರ್ಚಿಸಿ ಹೆಚ್ಚಿನ ದರ ನೀಡಿ ಬಿಟುಮಿನ್ ಖರೀದಿಸಲು ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ ಎಂದು ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...